ಮೈಸೂರು : ರಾಜ್ಯದಲ್ಲಿ ಶೀಘ್ರ ಪೋಡಿ ಮುಕ್ತ ಗ್ರಾಮ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ಈ ಬಗ್ಗೆ ಮಾಹಿತಿ ಹಂಚಿಕೊಂಡ ಅವರು, “ರಾಜ್ಯದಲ್ಲಿ 22 ಲಕ್ಷ ಖಾಸಗಿ ಆರ್‌ಟಿಸಿ ಗಳಿಗೆ ಪೋಡಿ ಆಗಿಲ್ಲ. ಪ್ರತಿಯೊಂದು ಆರ್‌ಟಿಸಿಯಲ್ಲಿ ಮೂರು ರಿಂದ ನಾಲ್ಕು ಜನ ಆರ್‌ಟಿಸಿ ಮಾಲೀಕರು ಇರುತ್ತಾರೆ. ಈ ಜಮೀನುಗಳ ಪೋಡಿ ಆಗಿಲ್ಲ. ಇನ್ನೂ ಸರ್ಕಾರಿಂದ ಭೂ ಮಂಜೂರಾದವ ಜಮೀನುಗಳೂ ಪೋಡಿ ಆಗಿಲ್ಲ. ಹೀಗಾಗಿ ಪೋಡಿ ಮುಕ್ತ ಅಭಿಯಾನದ ಅಡಿಯಲ್ಲಿ ಇಂತಹ ಜನರನ್ನು ನಾವೇ ಗುರುತಿಸಿ ಸರ್ಕಾರದಿಂದ ನಾವೇ ಪೋಡಿ ಮಾಡಿಕೊಡಲಿದ್ದೇವೆ ಎಂದು ಹೇಳಿದ್ದಾರೆ.
ಕೇಸ್ ಬೈ ಕೇಸ್ ಮಾಡುವುದರಿಂದ ಬಡವರಿಗೆ ಅನುಕೂಲವಾಗಲ್ಲ. ಹೀಗಾಗಿ ಪೋಡಿ ಮುಕ್ತ ಗ್ರಾಮಗಳ ಉದ್ದೇಶದಿಂದ ಆಯವ್ಯಯದಲ್ಲಿ ಘೋಷಿಸಿದಂತೆ ಪೋಡಿಮುಕ್ತ ಅಭಿಯಾನಕ್ಕೆ ಶೀಘ್ರವೇ ಚಾಲನೇ ನೀಡಲಾಗುವುದು ಎಂದು ತಿಳಿಸಿದ್ದಾರೆ.