ಬೆಂಗಳೂರು : ಹೊಸ ವರ್ಷಾಚರಣೆಗೆ ಪಬ್ ಮಾಲೀಕರಿಗೆ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಪ್ರಕಟಿಸಲಾಗಿದ್ದು, ಈ ನಿಯಮಗಳ ಪಾಲನೆ ಕಡ್ಡಾಯವಾಗಿದೆ.
ಹೊಸ ವರ್ಷಾಚರಣೆ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಡಿಸೆಂಬರ್ 31ರ ರಾತ್ರಿ 1ರ ವರೆಗೆ ಸಾರ್ವತ್ರಿಕವಾಗಿ ಹೊಸ ವರ್ಷ ಆಚರಿಸಲು ಅನುಮತಿಯಿದೆ.
ಬೆಂಗಳೂರು ನಗರದಾದ್ಯಂತ ಪೊಲೀಸ್ ಪಹರೆ ಹೆಚ್ಚಿಸಲಾಗಿದೆ. ವಾಹನ ತಪಾಸಣೆ ಬಿಗಿಗೊಳಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ಆಗದಂತೆ ಪೊಲೀಸರು ಮುನ್ನೆಚ್ಚರಿಕೆ ಕೈಗೊಂಡಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸೂಕ್ಷ್ಮ ಪ್ರದೇಶ ಮತ್ತು ಹೆಚ್ಚಿನ ಜನರು ಸೇರುವ ಪ್ರದೇಶಗಳಲ್ಲಿ ಹೆಚ್ಚುವರಿ ಸಿಸಿಟಿವಿ ಅಳವಡಿಕೆ ಕಾರ್ಯವು ಪ್ರಗತಿಯಲ್ಲಿದೆ.
ಪಬ್ ಮಾಲೀಕರಿಗೆ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ
ಪಬ್, ಕ್ಲಬ್ ಹಾಗೂ ರೆಸ್ಟೋರೆಂಟ್ಗಳ ವ್ಯವಸ್ಥಾಪಕರು, ಸಿಬ್ಬಂದಿಗಳು ಮದ್ಯಪಾನ ಮಾಡಿರಬಾರದು.
ಪಟಾಕಿ ಸಿಡಿಸುವಂತಿಲ್ಲ.
ಕಾನೂನು ಬಾಹಿರ ಪಾರ್ಟಿಗಳಿಗೆ ಅವಕಾಶ ಇಲ್ಲ.
ಪ್ರಚೋದನಕಾರಿ ಹಾಡು ಹಾಕಬಾರದು.
ಯಾವುದೇ ಕಾರಣಕ್ಕೂ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು
ಕಾರ್ಯಕ್ರಮದ ಸ್ಥಳದಲ್ಲಿ ಅಗ್ನಿ ನಿರೋಧಕ ಉಪಕರಣ ಅಳವಡಿಸಬೇಕು.
ಅಗ್ನಿ ಅವಘಡಗಳು ಹಾಗೂ ಕಾಲ್ತುಳಿತ ಸಂಭವಿಸದಂತೆ ಎಚ್ಚರ ವಹಿಸಬೇಕು.
ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿರುವ ಸ್ಥಳದಲ್ಲಿ ಮಹಿಳಾ ಭದ್ರತಾ ಸಿಬ್ಬಂದಿ ನಿಯೋಜಿಸಬೇಕು.
ಪ್ರವೇಶ ದ್ವಾರ, ನಿರ್ಗಮನ ದ್ವಾರ, ವಾಹನ ನಿಲುಗಡೆ ಸ್ಥಳ ಹಾಗೂ ಕಾರ್ಯಕ್ರಮದ ಸ್ಥಳಗಳಲ್ಲಿ ನೂಕುನುಗ್ಗಲು ಉಂಟಾಗದಂತೆ ಎಚ್ಚರ ವಹಿಸಬೇಕು.
ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿ, ದೃಶ್ಯಾವಳಿಗಳನ್ನು ಕನಿಷ್ಠ 30 ದಿನಗಳವರೆಗೆ ಸಂಗ್ರಹಿಸುವ ವ್ಯವಸ್ಥೆ ಮಾಡಬೇಕು.

ಹೊಸ ವರ್ಷಾಚರಣೆಯ ಹಿನ್ನೆಲೆ ಪಬ್ ಮಾಲೀಕರಿಗೆ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ pic.twitter.com/RcuXLF6zx0
— DIPR Karnataka (@KarnatakaVarthe) December 27, 2025