ಸೂರು: ಮೈಸೂರಲ್ಲಿ ವೇಶ್ಯಾವಾಟಿಕೆ ಜಾಲದ ಮೇಲೆ ವಿಜಯನಗರ ಪೊಲೀಸರು ಹಾಗೂ ಒಡನಾಡಿ ಸಂಸ್ಥೆ ದಾಳಿ ನಡೆಸಿದ್ದು, ಓರ್ವ ಬಾಲಕಿಯನ್ನು ರಕ್ಷಿಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ನಗರದ ಕೂರ್ಗಳ್ಳಿಯಲ್ಲಿ ವಾಸಿಸುತ್ತಿದ್ದ ಲೋಹಿತ್ ಹಾಗೂ ಕಾಂತರಾಜು ಎಂಬವರ ವಿರುದ್ಧ ಪ್ರಕರಣ ದಾಖಲಾಗಿದ್ದು, ತುಮಕೂರು ಬಳಿಯ ಗ್ರಾಮವೊಂದರ 16 ವರ್ಷದ ಬಾಲಕಿಯನ್ನು ಪೊಲೀಸರು ರಕ್ಷಿಸಿದ್ದಾರೆ. ಅಪ್ರಾಪ್ತ ಬಾಲಕಿ ಹಾಗೂ ಬಾಂಗ್ಲಾ ದೇಶದ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಒಡನಾಡಿ ಸಂಸ್ಥೆಯ ಸ್ಪ್ಯಾನ್ಸಿ ಹಾಗೂ ಪರಶು ಅವರಿಗೆ ಬಂದಿತ್ತು. ಕೂಡಲೇ ಅವರು ಎಸಿಪಿ ಗಜೇಂದ್ರಪ್ರಸಾದ್ ಹಾಗೂ ವಿಜಯನಗರ ಪೊಲೀಸ್ ಠಾಣೆ ಇನ್ಸಪೆಕ್ಟರ್ ಪ್ರದೀಪ್ ಹಾಗೂ ಎಸ್‌ಐ ವಿಶ್ವನಾಥ್ ಅವರಿಗೆ ಮಾಹಿತಿ ನೀಡಿದ್ದರು.
ಆರೋಪಿಗಳು ಬಾಲಕಿಯನ್ನು ವ್ಯಕ್ತಿಯೊಬ್ಬರ ಜೊತೆಯಲ್ಲಿ ವಿಜಯನಗರದ ಬಳಿಯ ವರ್ತುಲ ರಸ್ತೆ ಸಮೀಪದ ವಸತಿಗೃಹಕ್ಕೆ ಕಳುಹಿಸಿಕೊಟ್ಟಿದ್ದರು. ಈ ಬಗ್ಗೆ ಮಾಹಿತಿ ಪಡೆದ ಒಡನಾಡಿ ಕಾರ್ಯಕರ್ತರು ಹಾಗೂ ಪೊಲೀಸರು ಮಂಗಳವಾರ ಸಂಜೆ 5 ಗಂಟೆ ವೇಳೆಗೆ ವಸತಿ ಗೃಹವನ್ನು ಗಮನಿಸುತ್ತಿದ್ದರು. ಇದಾದ ಕೆಲ ಸಮಯದಲ್ಲಿ ವ್ಯಕ್ತಿ ಹಾಗೂ ಬಾಲಕಿ ವಸತಿಗೃಹದಿಂದ ಇಳಿದು ಕಾರನ್ನು ಹತ್ತಿ ತೆರಳಿದ್ದಾರೆ. ಈ ವೇಳೆ ಪೊಲೀಸರು ಕಾರನ್ನು ಹಿಂಬಾಲಿಸಿ ನಿಲ್ಲಿಸಿದ್ದಾರೆ. ಆಗ ಬಾಲಕಿಯೊಂದಿಗೆ ಇದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ.
BIG NEWS : ರಾಜ್ಯದ ರೈತರನ್ನು ತಕ್ಷಣ ಬಿಡುಗಡೆಗೊಳಿಸಿ : ಮಧ್ಯಪ್ರದೇಶ ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ
BREAKING:ಆರೋಗ್ಯದ ಕಾರಣದಿಂದ ಲೋಕಸಭೆಗೆ ಸ್ಪರ್ಧಿಸಲು ಸಾಧ್ಯವಿಲ್ಲ: ಸೋನಿಯಾ ಗಾಂಧಿ
‘ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ಹೀಗಿದೆ ‘ರಾಜ್ಯ ಸರ್ಕಾರ’ದಿಂದ ಮಾನ್ಯತೆ ಪಡೆದ ‘ಖಾಸಗಿ ಆಸ್ಪತ್ರೆ’ಗಳ ಪಟ್ಟಿ