Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಫೇಕ್ ವೆಡ್ಡಿಂಗ್ ಎಂದರೇನು? ಭಾರತದಲ್ಲಿ ವೈರಲ್ ಆಗುತ್ತಿರುವ ಈ `ಪಾರ್ಟಿ ಟ್ರೆಂಡ್’ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

11/07/2025 10:34 AM

BREAKING: ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಬಸ್ ಮೇಲೆ ಉಗ್ರರ ದಾಳಿ,9 ಪ್ರಯಾಣಿಕರು ಸಾವು

11/07/2025 10:32 AM

SHOCKING : ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಾಟ : ಬೆಚ್ಚಿ ಬೀಳಿಸುವ ವಿಡಿಯೋ ವೈರಲ್ |WATCH VIDEO

11/07/2025 10:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಹೆಣಗಳ ಮೇಲಿನ ರಾಜಕೀಯ ಬಿಜೆಪಿ ಪಾಲಿಗೆ ಹೊಸದೇನಲ್ಲ : ರಾಜೀನಾಮೆ ಕೇಳಿದ ಬಿಜೆಪಿ ನಾಯಕರಿಗೆ ‘CM ಸಿದ್ದರಾಮಯ್ಯ’ ತಿರುಗೇಟು..!
KARNATAKA

BIG NEWS : ಹೆಣಗಳ ಮೇಲಿನ ರಾಜಕೀಯ ಬಿಜೆಪಿ ಪಾಲಿಗೆ ಹೊಸದೇನಲ್ಲ : ರಾಜೀನಾಮೆ ಕೇಳಿದ ಬಿಜೆಪಿ ನಾಯಕರಿಗೆ ‘CM ಸಿದ್ದರಾಮಯ್ಯ’ ತಿರುಗೇಟು..!

By kannadanewsnow5717/06/2025 1:18 PM

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ರಾಜೀನಾಮೆ ಕೇಳುವ ಮೊದಲು ಇಂತಹದ್ದೇ ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ರಾಜ್ಯದ ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿರುವುದು ಒಂದು ಅಪಘಾತ. ಒಂದು ಜವಾಬ್ದಾರಿಯುತ ಸರ್ಕಾರವಾಗಿ ಆ ಘಟನೆಯ ಹೊಣೆಯನ್ನು ನಾವು ಹೊತ್ತಿದ್ದೇವೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದೇವೆ, ರಾಜ್ಯ ಗುಪ್ತಚರ ಇಲಾಖೆಯ ಮುಖ್ಯಸ್ಥರನ್ನು ವರ್ಗಾವಣೆ ಮಾಡಿದ್ದೇವೆ. ನನ್ನ ರಾಜಕೀಯ ಕಾರ್ಯದರ್ಶಿಯನ್ನು ಸೇವೆಯಿಂದ ಬಿಡುಗಡೆಗೊಳಿಸಿದ್ದೇನೆ. ಈ ಪ್ರಕರಣದ ಸಮಗ್ರ ತನಿಖೆಗೆ ನಿವೃತ್ತ ನ್ಯಾಯಾಧೀಶರಾದ ಜಾನ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನೂ ರಚಿಸಿದ್ದೇವೆ.

ಇಷ್ಟೆಲ್ಲ ಕ್ರಮಕೈಗೊಂಡ ನಂತರವೂ ರಾಜ್ಯದ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವುದು ರಾಜಕೀಯ ದುರುದ್ದೇಶದಿಂದ ಹೊರತು ಜನರ ಬಗೆಗಿನ ಕಾಳಜಿಯಿಂದ ಅಲ್ಲ ಎನ್ನುವುದು ಸ್ಪಷ್ಟವಾಗಿದೆ. ಹೆಣಗಳ ಮೇಲಿನ ರಾಜಕೀಯ ಬಿಜೆಪಿ ಪಾಲಿಗೆ ಹೊಸದೇನಲ್ಲ. ಅಪಘಾತ, ಹತ್ಯೆ, ದೌರ್ಜನ್ಯಗಳು ನಡೆದ ತಕ್ಷಣ ಸತ್ತ ಜೀವಗಳನ್ನು ಹುಡುಕಿಕೊಂಡು ಹೋಗುವ ರಣಹದ್ದುಗಳಂತೆ ಎರಗಿ ಬೀಳುವುದು ಬಿಜೆಪಿಯ ರಕ್ತದಲ್ಲಿಯೇ ಇದೆ. ತಮ್ಮ ಊಟದೆಲೆಯ ಮೇಲೆ ಆನೆ ಸತ್ತುಬಿದ್ದಿದ್ದರೂ ಎದುರಿಗಿದ್ದವರ ಎಲೆ ಮೇಲೆ ಸತ್ತು ಬಿದ್ದ ನೊಣದ ಕಡೆ ಬೊಟ್ಟುಮಾಡುವುದು ಬಿಜೆಪಿಯ ಹಳೆಯ ಚಾಳಿ ಎನ್ನುವುದನ್ನು ರಾಜ್ಯದ ಜನತೆ ಅರ್ಥಮಾಡಿಕೊಂಡಿದ್ದಾರೆ.

ಪ್ರತಿಯೊಂದು ಅಪಘಾತದ ಹಿಂದೆ ಸಾವು-ನೋವಿಗೆ ಈಡಾದವರ ಕುಟುಂಬದ ದು:ಖ ಮತ್ತು ಸಂಕಟ ಇರುವುದನ್ನು ನಾವು ಅರ್ಥಮಾಡಿಕೊಂಡಿದ್ದೇವೆ. ಇದೇ ಕಾರಣಕ್ಕಾಗಿ ನಾವು ಇಂತಹ ಪ್ರಕರಣಗಳನ್ನು ರಾಜಕೀಯಕ್ಕೆ ಬಳಸುವುದಿಲ್ಲ. ಹೀಗಿದ್ದರೂ ರಾಜ್ಯದ ಬಿಜೆಪಿ ನಾಯಕರು ಮತ್ತೆ ಮತ್ತೆ ಇಂತಹ ಪ್ರಕರಣಗಳನ್ನು ಕೆದಕಿ ಕೆದಕಿ ಜನರನ್ನು ಪ್ರಚೋದಿಸುತ್ತಿರುವ ಹಿನ್ನೆಲೆಯಲ್ಲಿ ಇವರ ಆತ್ಮವಂಚಕ ನಡವಳಿಕೆಯನ್ನು ಬಯಲು ಮಾಡುವ ಉದ್ದೇಶದಿಂದ Bharatiya Janata Party (BJP) ಆಡಳಿತದಲ್ಲಿನ ಕೆಲವು ಪ್ರಕರಣಗಳನ್ನು ರಾಜ್ಯದ ಜನತೆಯ ಗಮನಕ್ಕೆ ತರಲು ಇಷ್ಟಪಡುತ್ತೇನೆ.

2002ರಲ್ಲಿ ಗುಜರಾತ್ ರಾಜ್ಯದಲ್ಲಿ ನಡೆದ ಹತ್ಯಾಕಾಂಡದಲ್ಲಿ ಎಲ್ಲ ಧರ್ಮಗಳಿಗೆ ಸೇರಿದ್ದ ಅಂದಾಜು ಎರಡು ಸಾವಿರ ಅಮಾಯಕರು ಪ್ರಾಣ ಕಳೆದುಕೊಂಡರು. ಆ ಘಟನೆಯ ಹೊಣೆಹೊತ್ತು ರಾಜೀನಾಮೆ ನೀಡುವಂತೆ ಅವರದ್ದೇ ಪಕ್ಷದ ಪ್ರಧಾನಿ ಅಟಲಬಿಹಾರಿ ವಾಜಪೇಯಿ ಸೂಚನೆ ನೀಡಿದರೂ ಮುಖ್ಯಮಂತ್ರಿಯಾಗಿದ್ದ Narendra Modi ಅವರು ರಾಜೀನಾಮೆ ನೀಡಿಲ್ಲ ಮಾತ್ರವಲ್ಲ, ಇಲ್ಲಿಯ ವರೆಗೆ ಕನಿಷ್ಠ ವಿಷಾದವನ್ನೂ ಸೂಚಿಸಿಲ್ಲ. ನಮ್ಮ ರಾಜೀನಾಮೆ ಕೇಳುವವರು ಮೊದಲು ಇದಕ್ಕೆ ಉತ್ತರಿಸಿ.

ಕಳೆದ ಏಪ್ರಿಲ್ ತಿಂಗಳಲ್ಲಿ ಪಹಲ್ಗಾಮ್‌ನಲ್ಲಿ ಪಾಕ್ ಉಗ್ರಗಾಮಿಗಳು ನಡೆಸಿದ್ದ ಹತ್ಯಾಕಾಂಡದಲ್ಲಿ 26 ಭಾರತೀಯರು ಪ್ರಾಣ ಕಳೆದುಕೊಂಡರು. ಈ ಘಟನೆಯ ಹೊಣೆ ಹೊತ್ತು ಪ್ರಧಾನಿ ರಾಜೀನಾಮೆ ನೀಡಬೇಕೆಂದು ನಮ್ಮ ಪಕ್ಷ ಒತ್ತಾಯಿಸಿಲ್ಲ. ಈ ಘಟನೆಯ ಚರ್ಚೆಗೆ ಕನಿಷ್ಠ ಸಂಸತ್ ನ ವಿಶೇಷ ಅಧಿವೇಶನ ಕರೆಯಬೇಕೆಂಬ ನಮ್ಮ ಪಕ್ಷದ ಬೇಡಿಕೆಯನ್ನೂ ಪ್ರಧಾನಿಯವರು ಒಪ್ಪಿಕೊಂಡಿಲ್ಲ. ದೇಶಕ್ಕೆಲ್ಲ ಸಿಂಧೂರ ಹಂಚಲು ಹೊರಟಿರುವ ಪ್ರಧಾನಿಯವರಿಗೆ ಇಲ್ಲಿಯ ವರೆಗೆ 26 ಅಮಾಯಕರ ಸಾವಿಗೆ ಕಾರಣರಾದ ನಾಲ್ಕು ಮಂದಿ ದುರುಳರು ಯಾರು ಎನ್ನುವುದನ್ನು ಪತ್ತೆ ಹಚ್ಚಲಾಗಿಲ್ಲ. ಇದು ಕೇಂದ್ರ ಸರ್ಕಾರದ ವೈಫಲ್ಯ ಅಲ್ಲವೇ? ಈ ವೈಫಲ್ಯದ ಹೊಣೆಯನ್ನು ಯಾರು ಹೊರಬೇಕು? ಪಂಡಿತ ಜವಾಹರಲಾಲ್ ನೆಹರೂ ಅವರಾ? ರಾಹುಲ್ ಗಾಂಧಿಯವರಾ? ಇಲ್ಲವೇ ಪ್ರಧಾನಿ ನರೇಂದ್ರ ಮೋದಿಯವರೇ?

ಕಳೆದ ಎರಡು ವರ್ಷಗಳಿಂದ ದೇಶದ ಈಶಾನ್ಯ ಭಾಗದ ಮಣಿಪುರ ಹಿಂಸೆಯ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದೆ. ನೂರಾರು ಮಂದಿ ಸಾವಿಗೀಡಾಗಿದ್ದಾರೆ. ಹೀಗಿದ್ದರೂ ಆ ರಾಜ್ಯದ ಬಿಜೆಪಿ ಮುಖ್ಯಮಂತ್ರಿ ಬಿರೇನ್ ಸಿಂಗ್ 20 ತಿಂಗಳ ಕಾಲ ಕುರ್ಚಿಗೆ ಅಂಟಿಕೂತಿದ್ದರು. ಕೊನೆಗೂ ಸುಪ್ರೀಂ ಕೋರ್ಟ್ ಚಾಟಿ ಬೀಸಿದ ನಂತರ ರಾಜೀನಾಮೆ ನೀಡಿದ್ದರು. ಈಗಲೂ ಅಲ್ಲಿ ಹಿಂಸಾಚಾರ ಮುಂದುವರಿದಿದೆ. ಇದರ ಹೊಣೆಯನ್ನು ಕೇಂದ್ರ ಗೃಹಸಚಿವರು ಹೊರುವುದು ಬೇಡವೇ?

ಗುಜರಾತ್ ನ ಮೋರ್ಬಿ ಸೇತುವೆ ಕುಸಿದು ಬಿದ್ದು 140 ಮಂದಿ ಮೃತಪಟ್ಟಿದ್ದರು. ಈ ವರ್ಷದ ಜನವರಿ ತಿಂಗಳಲ್ಲಿ ಮಹಾಕುಂಭಮೇಳದದಲ್ಲಿ 30 ಯಾತ್ರಿಕರು ಪ್ರಾಣ ಕಳೆದುಕೊಂಡರು. ಆ ರಾಜ್ಯಗಳಲ್ಲಿ ಮುಖ್ಯಮಂತ್ರಿಯಾಗಿರುವವರು ಬಿಜೆಪಿಗೆ ಸೇರಿದವರಲ್ಲವೇ? ಇವರು ರಾಜೀನಾಮೆ ನೀಡುವುದು ಬಿಡಿ, ಆ ಘಟನೆಗಳ ಬಗ್ಗೆ ಇಲ್ಲಿಯ ವರೆಗೆ ಸರಿಯಾದ ತನಿಖೆಯನ್ನೇ ಅಲ್ಲಿನ ಸರ್ಕಾರ ನಡೆಸಿಲ್ಲ. ಹೀಗಿರುವಾಗ ನಮ್ಮ ರಾಜೀನಾಮೆ ಕೇಳಲು ರಾಜ್ಯದ ಬಿಜೆಪಿ ನಾಯಕರಿಗೆ ಯಾವ ನೈತಿಕತೆ ಇದೆ?

ನಮ್ಮ ಸರ್ಕಾರ ರಾಜ್ಯದ ಏಳು ಕೋಟಿ ಜನರಿಗೆ ಉತ್ತರದಾಯಿಯಾಗಿದೆ. ಈ ಕಾರಣಕ್ಕಾಗಿ ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯಭ್ರಷ್ಟರಾಗಿದ್ದಾರೆಂದು ಮೇಲ್ನೋಟಕ್ಕೆ ಅನಿಸಿದವರ ವಿರುದ್ದ ಕ್ರಮಕೈಗೊಳ್ಳಲಾಗಿದೆ. ಉಳಿದಂತೆ ಇದರ ಬಗ್ಗೆ ಆಮೂಲಾಗ್ರವಾದ ಮತ್ತು ನಿಷ್ಪಕ್ಷಪಾತ ತನಿಖೆಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಲಾಗಿದೆ. ಆಯೋಗ ನೀಡುವ ವರದಿಯನ್ನು ಆಧರಿಸಿ ತಪ್ಪಿತಸ್ಥರ ವಿರುದ್ದ ಯಾವುದೇ ಮುಲಾಜಿಲ್ಲದೆ ಕ್ರಮಕೈಗೊಳ್ಳಲಾಗುವುದು. ರಾಜ್ಯ ಬಿಜೆಪಿ ನಾಯಕರು ಇನ್ನಾದರೂ ಪ್ರತಿಭಟನೆಯಂತಹ ಬೀದಿ ಪ್ರಹಸನವನ್ನು ಕೈಬಿಟ್ಟು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಲಿ.

BIG NEWS: Politics over corpses is nothing new for BJP: 'CM Siddaramaiah' hits back at BJP leaders who asked for their resignations..!
Share. Facebook Twitter LinkedIn WhatsApp Email

Related Posts

BREAKING : ಮೂವರು ಶಂಕಿತ ಉಗ್ರರ ಬಂಧನ ಕೇಸ್ : ‘NIA’ ತನಿಖೆಯಲ್ಲಿ ಮತ್ತಷ್ಟು ಸ್ಪೋಟಕ ವಿಚಾರ ಬಹಿರಂಗ!

11/07/2025 10:25 AM1 Min Read

ALERT : ‘ಚಿಟ್ ಫಂಡ್’ ನಲ್ಲಿ ಹಣ ಹೂಡಿಕೆ ಮಾಡೋಕು ಮುನ್ನ ಎಚ್ಚರ : 500ಕ್ಕೂ ಹೆಚ್ಚು ಜನರಿಗೆ 100 ಕೋಟಿಗೂ ಅಧಿಕ ವಂಚನೆ

11/07/2025 10:13 AM1 Min Read

SHOCKING : ರಾಜ್ಯದಲ್ಲಿ ನಿಲ್ಲದ ‘ಮೈಕ್ರೋ ಫೈನಾನ್ಸ್’ ಕಿರುಕುಳ : ರೈಲಿಗೆ ತಲೆಕೊಟ್ಟು ತಾಯಿ- ಮಗಳು ಆತ್ಮಹತ್ಯೆ.!

11/07/2025 10:05 AM1 Min Read
Recent News

ಫೇಕ್ ವೆಡ್ಡಿಂಗ್ ಎಂದರೇನು? ಭಾರತದಲ್ಲಿ ವೈರಲ್ ಆಗುತ್ತಿರುವ ಈ `ಪಾರ್ಟಿ ಟ್ರೆಂಡ್’ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

11/07/2025 10:34 AM

BREAKING: ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಬಸ್ ಮೇಲೆ ಉಗ್ರರ ದಾಳಿ,9 ಪ್ರಯಾಣಿಕರು ಸಾವು

11/07/2025 10:32 AM

SHOCKING : ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಾಟ : ಬೆಚ್ಚಿ ಬೀಳಿಸುವ ವಿಡಿಯೋ ವೈರಲ್ |WATCH VIDEO

11/07/2025 10:30 AM

BREAKING : ಮೂವರು ಶಂಕಿತ ಉಗ್ರರ ಬಂಧನ ಕೇಸ್ : ‘NIA’ ತನಿಖೆಯಲ್ಲಿ ಮತ್ತಷ್ಟು ಸ್ಪೋಟಕ ವಿಚಾರ ಬಹಿರಂಗ!

11/07/2025 10:25 AM
State News
KARNATAKA

BREAKING : ಮೂವರು ಶಂಕಿತ ಉಗ್ರರ ಬಂಧನ ಕೇಸ್ : ‘NIA’ ತನಿಖೆಯಲ್ಲಿ ಮತ್ತಷ್ಟು ಸ್ಪೋಟಕ ವಿಚಾರ ಬಹಿರಂಗ!

By kannadanewsnow0511/07/2025 10:25 AM KARNATAKA 1 Min Read

ಬೆಂಗಳೂರು : ದಕ್ಷಿಣ ಭಾರತದ ಬಹುತೇಕ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಉಗ್ರ ನಾಸಿರ್ ಗೆ…

ALERT : ‘ಚಿಟ್ ಫಂಡ್’ ನಲ್ಲಿ ಹಣ ಹೂಡಿಕೆ ಮಾಡೋಕು ಮುನ್ನ ಎಚ್ಚರ : 500ಕ್ಕೂ ಹೆಚ್ಚು ಜನರಿಗೆ 100 ಕೋಟಿಗೂ ಅಧಿಕ ವಂಚನೆ

11/07/2025 10:13 AM

SHOCKING : ರಾಜ್ಯದಲ್ಲಿ ನಿಲ್ಲದ ‘ಮೈಕ್ರೋ ಫೈನಾನ್ಸ್’ ಕಿರುಕುಳ : ರೈಲಿಗೆ ತಲೆಕೊಟ್ಟು ತಾಯಿ- ಮಗಳು ಆತ್ಮಹತ್ಯೆ.!

11/07/2025 10:05 AM

BREAKING : ಭಯೋತ್ಪಾದಕ ಟಿ.ನಾಸಿರ್ ಗೆ ನೆರವು ನೀಡಿದ ಪ್ರಕರಣ : ASI ಚಾನ್ ಪಾಷಾ ವಿರುದ್ದ ತನಿಖೆಗೆ ಕಮಿಷನರ್ ಆದೇಶ

11/07/2025 10:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.