ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೂಲಕ ಫುಲ್ ಸ್ಟಾಪ್ ಹಾಕಿದ್ದಾರೆ. ಅಲ್ಲದೆ ಇಂದು ಮಂಗಳೂರಿನ ಕಾವೇರಿ ಅತಿಥಿ ಗೃಹದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಿಸಿ ವೇಣುಗೋಪಾಲ್ ಜೊತೆಗೆ ಸಿಎಂ ಸಿದ್ದರಾಮಯ್ಯ ಲಂಚ್ ಮೀಟಿಂಗ್ ನಡೆಸಿದರು.
ಈ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು ಅಧಿಕಾರ ಶಾಶ್ವತ ಅಲ್ಲ ಯಾವತ್ತಿದ್ದರೂ ಬಿಡಲೇಬೇಕು 10 ವರ್ಷದ ನಂತರವಾದರೂ ಕೂಡ ಅಧಿಕಾರ ಬಿಡಬೇಕು ಆದರೆ ಯಾವಾಗ ಅಂತ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದರು.ಇನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ಕೆಸಿ ವೇಣುಗೋಪಾಲ್ ಆಗಮಿಸಿದಾಗ ಡಿಕೆ ಶಿವಕುಮಾರ್ ಪರವಾಗಿ ಅಭಿಮಾನಿಗಳು ಘೋಷಣೆ ಕೂಗಿದರು.
ಈ ವಿಚಾರವಾಗಿ ಜೈಕಾರದಿಂದ ಯಾವುದೇ ಪ್ರಯೋಜನ ಆಗುವುದಿಲ್ಲ ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ ಎಲ್ಲವೂ ತಿಳಿಯದೆ ಉಭಯ ನಾಯಕರು ಈಗಾಗಲೇ ಮಾತನಾಡಿದ್ದಾರೆ. ಕೆಸಿ ವೇಣುಗೋಪಾಲ್ ಕಾರ್ಯಕ್ರಮಕ್ಕೆ ಬಂದಿದ್ದರು ಅಷ್ಟೇ ಯಾವುದೇ ರಾಜಕೀಯ ಚರ್ಚೆ ಆಗಿಲ್ಲ ಸಿಎಂ ಜೊತೆಗೆ ಕೆ ಸಿ ವೇಣುಗೋಪಾಲ್ ಏನು ಮಾತುಕತೆ ನಡೆಸಿದ್ದಾರೆ ಎನ್ನುವುದನ್ನು ಅವರನ್ನೇ ಕೇಳಬೇಕು ಎಂದು ಮಂಗಳೂರಿನ ಕೋಣಾಜೆಯಲ್ಲಿ ಸಚಿವ ಸತಿ ಜಾರಕಿಹೊಳಿ ಹೇಳಿಕೆ ನೀಡಿದರು.








