ಬೆಂಗಳೂರು : ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಪ್ರಕರಣದಲ್ಲಿ ಶಾಸಕ ಎಚ್ ಡಿ ರೇವಣ್ಣ ಅವರನ್ನು sit ಅಧಿಕಾರಿಗಳು ನಿನ್ನೆ ಬಂಧಿಸಿದ್ದು ಇದರ ಬೆನ್ನಲ್ಲೇ ಅಶೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಶಲ ರೇವಣ್ಣ ಅವರು ನಾಳೆ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ತಂದೆ ಬಂಧನದ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಈ ಒಂದು ನಿರ್ಧಾರಕ್ಕೆ ಬಂದಿದ್ದು, ನಾಳೆ ಮಧ್ಯಾಹ್ನದ ಒಳಗೆ ಎಸ್ಐಟಿ ಮುಂದೆ ಹಾಜರಾಗಲು ಪ್ರಜ್ವಲ್ ರೇವಣ್ಣ ನಿರ್ಧರಿಸಿದ್ದಾರೆ. ಎಸ್ ಐ ಟಿ ಮುಂದೆ ಹಾಜರಾಗಿ ವಿಚಾರಣೆಯನ್ನು ಎದುರಿಸಲು ಪ್ರಜ್ವಲ ರೇವಣ್ಣ ನಿರ್ಧರಿಸಿದ್ದಾರೆ.

ಸದ್ಯ ದುಬೈನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಪಾರ್ಟ್ಮೆಂಟ್ ಒಂದರಲ್ಲಿ ವಾಸ್ತವ ಹೂಡಿದ್ದಾರೆ. ದುಬೈನಲ್ಲಿ ಕೇರಳ ಮೂಲದ ವ್ಯಕ್ತಿಯ ಅಪಾರ್ಟ್ಮೆಂಟ್ ನಲ್ಲಿ ಪ್ರಜ್ವಲ್ ರೇವಣ್ಣ ವಾಸ್ತವ್ಯ ಹೂಡಿದ್ದಾರೆ ಎಂದು ತಿಳಿದುಬಂದಿದೆ.ರಾತ್ರಿ ಬೆಂಗಳೂರಿಗೆ ಬಂದು ನಾಳೆ ಎಸ್ಐಟಿ ಮುಂದೆ ಹಾಜರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ತಂದೆ ಬಂಧನ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬರಲು ನಿರ್ಧರಿಸಿದ್ದಾರೆ ಬೆಂಗಳೂರಿಗೆ ಬರುವ ಬಗ್ಗೆ ಈಗಾಗಲೇ ಪ್ರಜ್ವಲ್ ರೇವಣ್ಣ ಅವರು ತಮ್ಮ ವಕೀಲರ ಜೊತೆಗೆ ಚರ್ಚಿಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಇಂದು ಪ್ರಜ್ವಲ್ ಮಂಗಳೂರಿಗೆ ಆಗಮಿಸುವ ಸಾಧ್ಯತೆ

ದೇಶದಿಂದ ದೇಶಕ್ಕೆ ಹಾರುತ್ತಿರುವ ಪ್ರಜ್ವಲ್​ ರೇವಣ್ಣ ಹೆಡೆಮುರಿ ಕಟ್ಟಲು ಎಸ್​ಐಟಿ ಬಲೆ ಸಿದ್ಧವಾಗಿದೆ. ಇಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಜ್ವಲ್ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಪ್ರಜ್ವಲ್ ಬಂಧನಕ್ಕೆ ಸದ್ಯ ಲುಕ್​ಔಟ್​ ನೋಟಿಸ್ ಜಾರಿ ಮಾಡಲಾಗಿದೆ. ಹೀಗಾಗಿ ಏರ್​ಪೋರ್ಟ್​ ಇಮಿಗ್ರೇಶನ್ ಬಳಿಯೇ ಬಂಧನ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಸದ್ಯ ಇಂದು ಮಂಗಳೂರು ಏರ್​ಪೋರ್ಟ್​ಗೆ ಒಟ್ಟು 4 ವಿಮಾನ ಆಗಮಿಸಿವೆ. ಅಬುದಾಬಿಯಿಂದ ಈಗಷ್ಟೇ ಒಂದು ವಿಮಾನ ಲ್ಯಾಂಡ್ ಆಗಿದೆ. ಬೆಳಗ್ಗೆ 7.55ಕ್ಕೆ ದುಬೈನಿಂದ ಎರಡನೇ ವಿಮಾನ, ಸಂಜೆ 4.35ಕ್ಕೆ ದುಬೈನಿಂದ ಮಂಗಳೂರಿಗೆ 3ನೇ ವಿಮಾನ ಮತ್ತು ಸಂಜೆ 6.15ಕ್ಕೆ ಮಂಗಳೂರಿಗೆ ನಾಲ್ಕನೇ ವಿಮಾನ ಆಗಮಿಸಲಿವೆ.ಮಂಗಳೂರು, ಕೊಚ್ಚಿ, ಗೋವಾ, ಬೆಂಗಳೂರಿನ ಯಾವುದೇ ಏರ್​ಪೋರ್ಟ್​ಗೆ ಬಂದರೂ ಅಲ್ಲೇ ಬಂಧನ ಪ್ರಕ್ರಿಯೆ ನಡೆಯಲಿದೆ. ಬಳಿಕ ಸ್ಥಳೀಯ ಠಾಣೆಗೆ ಕರೆದೊಯ್ಯುವ ಪೊಲೀಸರು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಂತರ ಪ್ರಜ್ವಲ್​ರನ್ನು SIT ಅಧಿಕಾರಿಗಳು ಬೆಂಗಳೂರಿಗೆ ಕರೆತರಲಿದ್ದಾರೆ.

Share.
Exit mobile version