ಬೆಂಗಳೂರು : ರಾಜ್ಯದಲ್ಲಿ ಭಾರೀ ಸದ್ದು ಮಾಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್ ಡ್ರೈವ್ ಪ್ರಕರಣದ ಬಗ್ಗೆ ಮಾತನಾಡದಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ವಿಶೇಷ ತನಿಖಾ ದಳಿ ಪ್ರಕರಣದ ತನಿಖೆ ನಡೆಸುತ್ತಿದ್ದು, ಪ್ರಕರಣದ ಕುರಿತು ಕೆಲ ಸಚಿವರ ಹೇಳಿಕೆಗಳು ತನಿಖೆಯ ತಪ್ಪಿಸುವ ಸಾಧ್ಯತೆ ಇದೆ. ಹೇಳಿಕೆಗಳಿಂದ ಪಕ್ಷಕ್ಕೂ ಕೂಡ ಡ್ಯಾಮೆಜ್ ಆಗುವ ಸಾಧ್ಯತೆ ಇದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರಿಗೆ ಕೆಲ ಸೂಚನೆ ನೀಡಿದ್ದಾರೆ. ಪೆನ್ಡ್ರೈವ್ ಪ್ರಕರಣದಲ್ಲಿ ಅನಗತ್ಯವಾಗಿ ಪ್ರತಿಕ್ರಿಯೆ ಕೊಡಬೇಡಿ. ಮಾತು ಹೆಚ್ಚಾದರೆ ಇಡೀ ಪ್ರಕರಣದ ದಿಕ್ಕೇ ತಪ್ಪಿ ಹೋಗಬಹುದು. ಹೀಗಾಗಿ ಪ್ರತಿಕ್ರಿಯೆ ಕೊಡುವಾಗ ಎಚ್ಚರಿಕೆ ವಹಿಸಿ ಎಂದು ಸಚಿವರಿಗೆ ಸಲಹೆ ನೀಡಿದ್ದಾರೆ.
ಇನ್ನು ಪೆನ್ ಡ್ರೈವ್ ಪ್ರಕರಣದಿಂದ ಅಂತರ ಕಾಯ್ದುಕೊಳ್ಳವಂತೆ ಡಿಕೆ ಶಿವಕುಮಾರ್ ಅವರಿಗೆ ಒಕ್ಕಲಿಗ ನಾಯಕರು ಸಲಹೆ ನೀಡಿದ್ದಾರೆ. ಪೆನ್ಡ್ರೈವ್ ಕೇಸ್ನಲ್ಲಿ ಮಾತನಾಡದಂತೆ ಸಲಹೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.