ಗದಗ: ರಾಜ್ಯದ ಶಾಲಾ ಮಕ್ಕಳ ಫೇಸ್ ರೀಡಿಂಗ್ ಹಾಜರಿ ಪ್ರಕ್ರಿಯೆಗೆ ಇನ್ನೊಂದು ತಿಂಗಳೊಳಗೆ ಚಾಲನೆ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದ್ದಾರೆ.
ಶಿಕ್ಷಕರ ಫೇಸ್ ರೇಡಿಂಗ್ ಆನ್ಲೈನ್ ಹಾಜರಿ ಪ್ರತ್ಯಕ್ಷ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವರು ಮಾತನಾಡಿದ ಸಚಿವ ಮಧು ಬಂಗಾರಪ್ಪ, ಸರ್ಕಾರಿ ಶಾಲೆ ಶಿಕ್ಷಕರ ಆನ್ ಲೈನ್ ಹಾಜರಿ ಅಗತ್ಯವಿದ್ದು, ಇದೇ ಪ್ರಕ್ರಿಯೆಯನ್ನು ರಾಜ್ಯಾದ್ಯಂತ ಕೈಗೊಳ್ಳಲು ಹಿರಿಯ ಸಚಿವರದ ಹೆಚ್.ಕೆ. ಪಾಟೀಲ್ ಅವರ ಸಹಕಾರ ಅಗತ್ಯವಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಗದಗ ಜಿಲ್ಲೆಯಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಆನ್ಲೈನ್ ಹಾಜರಾತಿ ವ್ಯವಸ್ಥೆ ಪ್ರತ್ಯಕ್ಷ ಎಂಬ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.
ಶಿಕ್ಷಕರ ಫೇಸ್ ರೇಡಿಂಗ್ ಹಾಜರಿ ಪ್ರಕ್ರಿಯೆ ರೀತಿಯಲ್ಲಿ ರಾಜ್ಯದಲ್ಲಿರುವ ಶಾಲಾ ಮಕ್ಕಳ ಫೇಸ್ ರೀಡಿಂಗ್ ಹಾಜರಿಗೆ ಇನ್ನೊಂದು ತಿಂಗಳೊಳಗೆ ಅಧಿಕೃತ ಚಾಲನೆ ನೀಡಲು ಸರ್ಕಾರ ಸಿದ್ಧತೆ ಕೈಗೊಂಡಿದೆ. ತಂತ್ರಜ್ಞಾನ ಬಳಕೆ ಮಾಡಿಕೊಂಡು ರಾಜ್ಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಇಲಾಖೆ ಕ್ರಮ ವಹಿಸಿದೆ ಎಂದು ಹೇಳಿದ್ದಾರೆ.