ಮಂಗಳೂರು : ಮಂಗಳೂರಿನಲ್ಲಿ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೇ 6ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಆದರೆ ಇದೀಗ ಪರಿಸ್ಥಿತಿ ಹತೋಟಿಗೆ ಬಂದ ಹಿನ್ನೆಲೆಯಲ್ಲಿ ಮೇ 6ರ ಬದಲು ನಾಳೆ 6 ಗಂಟೆಯ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರುತ್ತದೆ ಎಂದು ಮಂಗಳೂರು ಕಮಿಷನರ್ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ.
ಹೌದು ಮಂಗಳೂರಿನಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆಯಲ್ಲಿ ನಿಷೇಧಾಜ್ಞೆಯ ಅವಧಿಯಲ್ಲಿ ಮಾರ್ಪಾಡು ಮಾಡಿ ಇದೀಗ ಆದೇಶ ಹೊರಡಿಸಲಾಗಿದೆ. ಮೇ 6ರ ಬದಲು ನಾಳೆ 6 ಗಂಟೆಯ ವರೆಗೆ ಮಾತ್ರ ನಿಷೇಧಜ್ಞೆ ಜಾರಿಯಲ್ಲಿರುತ್ತದೆ ಎಂದು ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ.








