BIG NEWS : ‘PSI’ ಹುದ್ದೆಗಳ ನೇಮಕಾತಿಯ ಮರುಪರೀಕ್ಷೆ : ಅಂತಿಮ ಅಂಕಪಟ್ಟಿ ಪ್ರಕಟ

ಬೆಂಗಳೂರು: ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ (ಪಿಎಸ್ಐ) ಹುದ್ದೆಗಳ ನೇಮಕಾತಿಗಾಗಿ ಜ.23ರಂದು ನಡೆಸಿದ್ದ ಮರುಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಪತ್ರಿಕೆ-1 ಮತ್ತು 2ರಲ್ಲಿ ಗಳಿಸಿರುವ ಅಂಕಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ. ಒಟ್ಟು 545 ಹುದ್ದೆಗಳ ನೇಮಕಕ್ಕೆ ಕೆಇಎ ಮರು ಪರೀಕ್ಷೆ ನಡೆಸಿತ್ತು. ಅಭ್ಯರ್ಥಿಗಳು ಪಡೆದ ಅಂಕಗಳ ಮಾಹಿತಿಯನ್ನು ಸದ್ಯದಲ್ಲೇ ಗೃಹ ಇಲಾಖೆಗೆ ಸಲ್ಲಿಸಲಾಗುತ್ತದೆ. ಅದರ ನಂತರ ರೋಸ್ಟರ್ ಆಧಾರದ ಮೇಲೆ‌ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು. … Continue reading BIG NEWS : ‘PSI’ ಹುದ್ದೆಗಳ ನೇಮಕಾತಿಯ ಮರುಪರೀಕ್ಷೆ : ಅಂತಿಮ ಅಂಕಪಟ್ಟಿ ಪ್ರಕಟ