ತುಮಕೂರು : ತುಮಕೂರು ಜಿಲ್ಲೆಯ ತಿಪಟೂರಿನ ಹೊನ್ನವಳ್ಳಿಯಲ್ಲಿ ನಟ ಪುನೀತ್ ರಾಜ್‌ಕುಮಾರ್ ಅವರ ಪ್ರತಿಮೆಯನ್ನು ಪೊಲೀಸರು ತೆರವುಗೊಳಿಸಿರುವ ಘಟನೆ ನಡೆದಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಅವರ ಪ್ರತಿಮೆಯನ್ನು ಹೊನ್ನಾವಳ್ಳಿ ಗ್ರಾಮದಲ್ಲಿ ಗುರುವಾರ ರಾತ್ರಿ ಪ್ರತಿಷ್ಠಾಪಿಸಲಾಗಿತ್ತು. ಆದರೆ ಶುಕ್ರವಾರ ಬೆಳಗಿನ ಜಾವ ಪೊಲೀಸರು ತೆರವುಗೊಳಿಸಿದ್ದಾರೆ. ಪುನೀತ್ ರಾಜ್ ಕುಮಾರ್ ಪ್ರತಿಮೆ ತೆರವು ಪ್ರಕರಣದಿಂದ ಗ್ರಾಮದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ಉಂಟಾಗಿತ್ತು.
ಡಿಸೆಂಬರ್ 18 ರಂದು ಪುನೀತ್ ರಾಜ್ ಕುಮಾರ್ ಅವರ ಪುತ್ಥಳಿ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಕನ್ನಡ ರಕ್ಷಣಾ ವೇದಿಕೆ ಹಾಗೂ ಅಪ್ಪು ಸೇನೆ ವತಿಯಿಂದ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಲಾಗಿತ್ತು. ಅನುಮತಿ ಸಿಗುವ ಮೊದಲೇ ಪುತ್ಥಳಿ ಅನಾವರಣಗೊಳಿಸಲಾಗಿತ್ತು. ಇದೀಗ ಪೊಲೀಸರು ಪ್ರತಿಮೆಯನ್ನು ತೆರವುಗೊಳಿಸಿದ್ದಾರೆ.