ಬೆಂಗಳೂರು : ಇನ್ಸ್ಟಾಗ್ರಾಮ್ ನಲ್ಲಿ ಲಾಂಗ್ ಹಿಡಿದು ಸಾರ್ವಜನಿಕವಾಗಿ ಭಯ ಹುಟ್ಟಿಸುವ ರೀತಿಯಲ್ಲಿ ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನ ಬಸವೇಶ್ವರ ಠಾಣೆ ಪೊಲೀಸರು ಆರೋಪಿಗಳಾದಂತಹ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದಂತಹ ರಜತ್ ಕಿಶನ್ ಹಾಗೂ ವಿನಯ್ ಗೌಡನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹೌದು ಆರೋಪಿಗಳಾದ ರಜತ್ ವಿನಯನನ್ನು ಪೊಲೀಸರು ಪರಪ್ಪನ ಅಗ್ರಹಾರ ಜೈಲಿನಿಂದ ಇದೀಗ ಕೋರ್ಟಿಗೆ ಕರೆದುಕೊಂಡು ಹೋಗಿದ್ದಾರೆ. ಆರೋಪಿಗಳನ್ನು ಬಸವೇಶ್ವರನಗರ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ಕರೆದೊಯ್ದಿದ್ದಾರೆ. ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದಾರೆ. ವಿಚಾರಣೆ ಬಳಿಕ ಪೊಲೀಸರು ಇಬ್ಬರು ಆರೋಪಿಗಳನ್ನು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.