ಬೆಂಗಳೂರು : ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಅಕ್ರಮವಾಗಿ ಕಟ್ಟಿದ್ದ ಬ್ಯಾನರ್ ತರುವು ಮಾಡಿದ್ದಕ್ಕೆ ನಗರಸಭೆಯ ಮಹಿಳಾ ಅಧಿಕಾರಿಗೆ ಕಾಂಗ್ರೆಸ್ ಮುಖಂಡ ರಾಜೇಗೌಡ ಅವಾಚ್ಯವಾಗಿ ಶಬ್ದ ಬಳಸಿ ನಿಂದನೆ ಮಾಡಿ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಮೃತ ಗೌಡ ಇದೀಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಇತ್ತ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ, ನಾನು ಯಾವುದೇ ದುರುದ್ದೇಶದಿಂದ ಹೇಳಿಕೆ ನೀಡಿಲ್ಲ. ಅಕಸ್ಮಾತ್ ನನ್ನ ಮಾತಿನಿಂದ ಅವರಿಗೆ ನೋವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ. ಅವರ ಮನಸ್ಸಿಗೆ ಬೇಜಾರಾಗಿದ್ದರೆ ಮಹಿಳಾ ಅಧಿಕಾರಿಗೆ ನಾನು ಕ್ಷಮೆ ಕೇಳುತ್ತೇನೆ. ಯಾವುದೇ ರೀತಿಯಾದ ಜೀವ ಬೆದರಿಕೆ ನಾನು ಹಾಕಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ.
ಇನ್ನು ರಾಜೀವ್ ಗೌಡ ಕ್ಷಮೆ ಕೇಳಿದ ವಿಚಾರ ತಿಳಿದು ಮಹಿಳಾ ಅಧಿಕಾರಿ ಅಮೃತ ಗೌಡ ನನಗೆ ಯಾವುದೇ ಕ್ಷಮೆ ಬೇಡ. ನಾನು ಪೊಲೀಸ್ ಠಾಣೆಗೆ ಅವರ ವಿರುದ್ಧ ದೂರು ನೀಡಿದ್ದೇನೆ. ದೂರಿನಲ್ಲಿ ರಾಜೀವ್ ಗೌಡನ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳಿ ಎಂದು ಪೊಲೀಸರಿಗೆ ಮನವಿ ಮಾಡಿದ್ದೇನೆ ಎಂದು ಅವರು ತಿಳಿಸಿದರು.
" @INCKarnataka ದುರಾಡಳಿತದಲ್ಲಿ ಕಾಂಗ್ರೆಸ್ ಮುಖಂಡರ ಗೂಂಡಾಗಿರಿ ಜೋರಾಗಿದೆ.
ಸಚಿವ @BZZameerAhmedK ಪುತ್ರ ಝೈದ್ ಖಾನ್ ಸಿನಿಮಾದ ಪ್ಲೆಕ್ಸ್ʼಗಳನ್ನು ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವಾಚ್ಯವಾಗಿ, ಅಶ್ಲೀಲ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ… pic.twitter.com/c65czp6k9j
— Janata Dal Secular (@JanataDal_S) January 14, 2026








