ರಾಮನಗರ : ಅರಣ್ಯದಲ್ಲಿ ಪಾರ್ಟಿ ಮಾಡುತ್ತಿದ್ದನ್ನು ಪ್ರಶ್ನಿಸಿದ ಅರಣ್ಯ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಕುರುಬಳ್ಳಿ ದೊಡ್ಡಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ.ಘಟನೆ ಸಂಬಂಧ ಓರ್ವ ರೌಡಿ ಶೀಟರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.
ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಕುರುಬಳ್ಳಿ ದೊಡ್ಡಿಯ ಅರಣ್ಯ ಪ್ರದೇಶದಲ್ಲಿ ಕುಳಿತು ಆರೋಪಿಗಳು ಪಾರ್ಟಿ ಮಾಡುತ್ತಿದ್ದರು ಪಾರ್ಟಿ ಮಾಡುತ್ತಿರುವುದನ್ನು ಅರಣ್ಯ ಇಲಾಖೆ ಸಿಬ್ಬಂದಿ ವೇಳೆ ಪ್ರಶ್ನೆ ಮಾಡಿದ್ದಾರೆ. ಪ್ರಶ್ನೆ ಮಾಡಿದ ಅರಣ್ಯ ಇಲಾಖೆಗೆ ಸಿಬ್ಬಂದಿ ಜೊತೆಗೂ ಗಲಾಟೆ ಮಾಡಿದ್ದಾರೆ. ಗಲಾಟೆ ಮಾಡಿ ವಾಹನಕ್ಕೆ ಬೆಂಕಿ ಹಚ್ಚಲು ಆರೋಪಿಗಳು ಮುಂದಾಗಿದ್ದರು.
ಕೂಡಲೇ ಸಿಬ್ಬಂದಿಗಳು 112 ಕರೆ ಮಾಡಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಘಟನಾ ಸ್ಥಳಕ್ಕೆ ಬಂದ ಪೋಲೀಸರ ಜೊತೆಗೂ ಗಲಾಟೆ ಮಾಡಿದ್ದಾರೆ. ಪೊಲೀಸರ ಮೇಲೆ ಹಲ್ಲೆ ಮಾಡಿ ಟ್ಯಾಬ್ ಒಡೆದು ಹಾಕಿದ್ದಾರೆ. ಹಲ್ಲೆ ಮಾಡಿದ ರೌಡಿ ಶೀಟರ್ ಕಿರಣ್, ಸುಂದರ್ ಹಾಗು ಪ್ರತಾಪ್ ಎನ್ನುವ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಪರಾರಿಯಾದ ಇನ್ನಿಬ್ಬರು ಆರೋಪಿಗಳಿಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.