ಬೆಂಗಳೂರು: ರಾಷ್ಟ್ರ ಮಟ್ಟದಲ್ಲಿ ಸಂಚಲನ ಸೃಷ್ಟಿಸಿದ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಬಂಧಿತನಾಗಿರುವ ಮುಜಾಮಿಲ್ ಪಾಷಾ ಎಂಬ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು 7 ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ. ಇದಕ್ಕೂ ಮುನ್ನ ಆತನನ್ನು ನಗರದ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಈತ ಕೆಫೆ ಸ್ಫೋಟದ ಪ್ರಮುಖ ಆರೋಪಿಗೆ ಬಾಂಬ್ ತಯಾರಿಸಲು ಬೇಕಾದ ಕಚ್ಚಾ ವಸ್ತುಗಳನ್ನು ಸಾಗಿಸಿರುವ ಜತೆಗೆ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿರುವ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಹೆಚ್ಚಿನ ವಿಚಾರಣೆಗೆ ಅನುಮತಿ ನೀಡುವಂತೆ ಮಾಡಿಕೊಂಡ ಮನವಿ ಪುರಸ್ಕರಿಸಿದ ಕೋರ್ಟ್, ಶಂಕಿತನನ್ನು ಏಳು ದಿನಗಳ ಕಾಲ ಎನ್ಐಎ ಕಸ್ಟಡಿಗೆ ಒಪ್ಪಿಸಿದೆ.
ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆ ಬಾಂಬೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಮೀಪವೇ IED ಬಾಂಬೆ ಸಿದ್ಧವಾಗಿದೆ ಎಂದು ಮತೀನ್ ಮುಸಫಿರ್ ಜೊತೆ ಮುಜಾಮಿಲ್ ಸಂಪರ್ಕದಲ್ಲಿದ್ದ ಎಂದು ತಿಳಿದುಬಂದಿದೆ.ಮುಜಾಮಿಲ್ ಮೂಲಕ ಅಗತ್ಯ ವಸ್ತುಗಳನ್ನು ಶಂಕಿತರು ತರಿಸಿಕೊಂಡಿದ್ದರು ಎಂದು ತಿಳಿದುಬಂದಿದೆ. ಸ್ಪೋಟಕ್ಕೆ ಬೇಕಾದಂತಹ ಕಚ್ಚಾ ಸಾಮಗ್ರಿಗಳನ್ನು ತರಿಸಿಕೊಂಡಿದ್ದರು ಸಂಚಿನ ಬಳಿಕ ಬೆಂಗಳೂರು ಸಮೀಪವೇ ಬಾಂಬ್ ಅನ್ನು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಬೀದರ್ : ನೀರಿನ ಟ್ಯಾಂಕಿಗೆ ಬಿದ್ದು ‘ಅಲೆಮಾರಿ’ ಜನಾಂಗದ ವ್ಯಕ್ತಿ ಆತ್ಮಹತ್ಯೆ
ಬೆಂಗಳೂರಿನ ಸಮೀಪ ಐಇಡಿ ಸಿದ್ದತೆ ಮಾಡಿಕೊಂಡಿದ್ದಾರೆ.ಎಲ್ಲಾ ಆಯಾಮಗಳಲ್ಲಿ ಇದೀಗ NIA ತಂಡ ತನಿಖೆಗೆ ಮುಂದಾಗಿದೆ.ಸ್ಪೋಟಕ್ಕೆ ಬೇಕಾದ ಕಚ್ಚಾ ಸಾಮಗ್ರಿಗಳನ್ನು ಧರಿಸಿಕೊಂಡಿದ್ದಾರೆ ಎಂದು NIA ತಂಡ ಮಾಹಿತಿ ಸಂಗ್ರಹಿಸಿವೆ ಎಂದು ತಿಳಿದುಬಂದಿದೆ.