ಬೆಂಗಳೂರು : ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 1242 ಖಾಲಿ ಇರುವ ಇತಿಹಾಸ ವಿಷಯದ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಆಯ್ಕೆಗೊಂಡು, ಸರ್ಕಾರದಿಂದ ನೇಮಕಾತಿ ಆದೇಶ ಹೊರಡಿಸಿರುವ ಅಭ್ಯರ್ಥಿಗೆ ಸ್ಥಳ ನಿಯುಕ್ತಿಗೊಳಿಸಿ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ, ಉಲ್ಲೇಖ-(1) ರ ಸರ್ಕಾರದ ಅಧಿಸೂಚನೆಗಳಲ್ಲಿ ಜಾರಿಗೊಳಿಸಿರುವ ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ಸಹಾಯಕ ಪ್ರಾಧ್ಯಾಪಕರ ನೇಮಕಾತಿ) (ವಿಶೇಷ) ನಿಯಮಗಳು, 2020 ಹಾಗೂ ತಿದ್ದುಪಡಿ ನಿಯಮಗಳನ್ವಯ ಆಯ್ಕೆ ಪ್ರಾಧಿಕಾರವಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸರ್ಕಾರಕ್ಕೆ ಸಲ್ಲಿಸಿದ್ದ ಅರ್ಹ ಅಭ್ಯರ್ಥಿಗಳ ಅಂತಿಮ ಆಯ್ಕೆಪಟ್ಟಿಯನ್ನು ಸರ್ಕಾರವು ಉಲ್ಲೇಖ-(2) ರ ಅಧಿಸೂಚನೆಯಲ್ಲಿ ಪ್ರಕಟಿಸಿದೆ.
ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ಸಹಾಯಕ ಪ್ರಾಧ್ಯಾಪಕರ ನೇಮಕಾತಿ) (ವಿಶೇಷ) ನಿಯಮಗಳು, 2020 ರ ನಿಯಮ 9 ರ ಉಪ ನಿಯಮ (2) ಮತ್ತು (3) ರನ್ವಯ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅಂತಿಮ ಆಯ್ಕೆಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಅರ್ಹತೆಯ ದೃಢೀಕರಣಕ್ಕೆ ಸಂಬಂಧಿಸಿದಂತೆ, ಅಗತ್ಯ ವಿಚಾರಣೆಗಳು ಪೂರ್ಣಗೊಂಡಿರುವ ಕೆಳಕಂಡ ಅಭ್ಯರ್ಥಿಗೆ ಸರ್ಕಾರವು ಉಲ್ಲೇಖ-(3) ರ ಅಧಿಸೂಚನೆಯಲ್ಲಿ ಇತಿಹಾಸ ವಿಷಯದ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇಮಿಸಿ ಆದೇಶಿಸಿದ್ದು, ಇವರಿಗೆ ನಿಯಮಾನುಸಾರ ಜೇಷ್ಠತೆಯ ಆಧಾರದ ಮೇಲೆ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ನಡೆಸಿ, ಸ್ಥಳ ನಿಯುಕ್ತಿ ಆದೇಶವನ್ನು ನೀಡುವಂತೆ ಸೂಚಿಸಲಾಗಿರುತ್ತದೆ.
ಆದರೆ, ಶ್ರೀಮತಿ ಹೇಮಾವತಿ ಎನ್.ಎ. ಇವರ ಕೋರಿಕೆಯನ್ವಯ ಸದರಿಯವರಿಗೆ ಸೇರುವಿಕೆಯ ಕಾಲಕ್ಕೆ ಅನುಮತಿ ನೀಡಿ. ಇವರನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆನವಟ್ಟಿ, ಸೊರಬ ತಾಲ್ಲೂಕು, ಶಿವಮೊಗ್ಗ ಜಿಲ್ಲೆ ಇಲ್ಲಿ ಖಾಲಿ ಇರುವ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸ್ಥಳ ನಿಯುಕ್ತಿಗೊಳಿಸಲು ನಿಯಮಾನುಸಾರ ಕ್ರಮವಹಿಸುವಂತೆ ಉಲ್ಲೇಖ-(4) ರಲ್ಲಿ ನಿರ್ದೇಶಿಸಿರುತ್ತಾರೆ.









