ಬೆಂಗಳೂರು: 384 ಕೆಎಎಸ್ ಅಧಿಕಾರಿಗಳ ಹುದ್ದೆ ನೇಮಕಾತಿಗಾಗಿ ಪೂರ್ವಭಾವಿ ಮರು ಪರೀಕ್ಷೆಗೆ ಡೇಟ್ ಫೀಕ್ಸ್ ಮಾಡಲಾಗಿದೆ. ಡಿ.29, 2024ರಂದು ಪರೀಕ್ಷೆ ನಡೆಸಲು ನಿಗದಿ ಪಡಿಸಲಾಗಿದೆ.
ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಖ್ಯೆ : ಪಿಎಸ್ ಸಿ 509 ಇ(1)/2023-24, ದಿನಾಂಕ 26-02-2024 ರಂದು ನಡೆಸಲು ಅಧಿಸೂಚನೆ ಹೊರಡಿಸಿದ್ದು, ಪೂರ್ವಭಾವಿ ಮರುಪರೀಕ್ಷೆಯನ್ನು ದಿನಾಂಕ:29-12-2024ರಂದು ನಡೆಸಲು ನಿಗದಿಪಡಿಸಿರುತ್ತದೆ.
ಸದರಿ ಪರೀಕ್ಷೆಗೆ ಸಂಬಂಧಿಸಿದಂತೆ ಕೆಲವು ಅಭ್ಯರ್ಥಿಗಳು ಆಯೋಗದ ವೆಬ್ ಸೈಟ್ನ Applicant Login ನಿಂದ ದಿನಾಂಕ:26-11-2024ರಂದು ತಂತ್ರಾಂಶದಲಿನ ದೋಷದಿಂದಾಗಿ ಪ್ರವೇಶ ಪತ್ರವನ್ನು Download ಮಾಡಿಕೊಂಡಿರುತ್ತಾರೆಂದು ತಿಳಿದುಬಂದಿರುತ್ತದೆ,
ಆಯೋಗವು ದಿನಾಂಕ:29-12-2024ರ ಪೂರ್ವಭಾವಿ ಮರುಪರೀಕ್ಷೆಯ ಸಂಬಂಧ ಯಾವುದೇ ಪ್ರವೇಶ ಪತ್ರವನ್ನು ಆಯೋಗದ ವೆಬ್‌ಸೈಟ್‌ನಲ್ಲಿ.. ಅಧಿಕೃತವಾಗಿ ಬಿಡುಗಡೆ ಮಾಡಿರುವುದಿಲ್ಲವಾದ ಕಾರಣ ತಾಂತ್ರಿಕ ದೋಷದಿಂದಾಗಿ ಪ್ರಸ್ತುತ Download ಮಾಡಿಕೊಂಡಿರುವ ಪ್ರದೇಶ ಪತ್ರಗಳನ್ನು ಅಸಿಂಧುಗೊಳಿಸಿದೆ.
ಮುಂದುವರೆದು, ಎಲಾ., ಅಭ್ಯರ್ಥಿಗಳಿಗೆ ಪೂರ್ವಭಾವಿ ಮರುಪರೀಕ್ಷೆಯ ಪ್ರವೇಶಪತ್ರವನ್ನು Download ಮಾಡಿಕೊಳ್ಳುವ ಕುರಿತು ತಿಳಿಸಲಾಗಿದೆ.

ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ
ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಗೆ ಕಪ್ಪು ಬಣ್ಣದ ಬಾಲ್ ಪಾಯಿಂಟ್ ಪೆನ್ನನ್ನು ತರತಕ್ಕದ್ದು. ಅಭ್ಯರ್ಥಿಗಳು ತುಂಬು ತೋಳಿನ ಶರ್ಟ್/ T.Shirt/ Frills/ ಪದರಗಳುಳ್ಳ (layered) ವಿವಿಧ ರೀತಿಯ ವಿನ್ಯಾಸವುಳ್ಳ ವಸ್ತ್ರಗಳನ್ನು ಧರಿಸುವುದನ್ನು ನಿಷೇಧಿಸಿದೆ ಹಾಗೂ ಸರಳ ಉಡುಪು ಧರಿಸಿ ಪರೀಕ್ಷೆಗೆ ಹಾಜರಾಗುವುದು.
ಯಾವುದೇ ರೀತಿಯ ಆಭರಣಗಳನ್ನು ಧರಿಸುವಂತಿಲ್ಲ (ಮಂಗಳ ಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ). ಶೂ ಮತ್ತು ಸಾಕ್ಸ್ ಧರಿಸುವುದನ್ನು ನಿಷೇಧಿಸಿದೆ ಹಾಗೂ ಸರಳ ಚಪ್ಪಲಿಗಳನ್ನು ಧರಿಸಿ ಹಾಜರಾಗುವುದು.
ಅಭ್ಯರ್ಥಿಯು ಪ್ರವೇಶ ಪತ್ರವನ್ನು ಹಾಗೂ ಒಂದು ಗುರುತಿನ ಚೀಟಿಯನ್ನು ಹಾಜರುಪಡಿಸದಿದ್ದಲ್ಲಿ ಪರೀಕ್ಷೆಗೆ ಅನುಮತಿಸಲಾಗುವುದಿಲ್ಲ.
— Secretary KPSC (@secretarykpsc) October 1, 2024







