ಚಿಕ್ಕಬಳ್ಳಾಪುರ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇಂದು ಬಳ್ಳಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಸದ ಇ ತುಕಾರಾಂ, ಮಾಜಿ ಸಚಿವ ಬಿ.ನಾಗೇಂದ್ರ ಶಾಸಕರಾದಂತಹ ನಾರಾಯ ಭರತ ರೆಡ್ಡಿ ಕಂಪ್ಲಿ ಗಣೇಶ್, ಡಾ. ಶ್ರೀನಿವಾಸ್ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಕಾಂಗ್ರೆಸ್ ಸಂಸದ ಮತ್ತು ಶಾಸಕರ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದು, ಯಾರೇ ತಪ್ಪು ಮಾಡಿದರೂ ಕೂಡ ಕ್ರಮ ಕೈಗೊಳ್ಳಲಿ. ಯಾವುದೇ ಕಾರಣಕ್ಕೂ ತಪ್ಪನ್ನು ಬೆಂಬಲಿಸಲ್ಲ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಹಣವನ್ನು ಲೋಕಸಭೆ ಚುನಾವಣೆಗೆ ಅಕ್ರಮವಾಗಿ ವರ್ಗಾವಣೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ಬಿ ನಾಗೇಂದ್ರ ಜೈಲುವಾಸ ಅನುಭವಿಸಿ ಇತ್ತೀಚಿಗೆ ಬಿಡುಗಡೆಯಾಗಿದ್ದರು. ಈಗ ಇಂದು ಸಂಸದ ಇ ತುಕಾರಾಂ ಶಾಸಕರಾದಂತಹ ನಾರಾ ಭರತ್ ರೆಡ್ಡಿ, ಕಂಪ್ಲಿ ಗಣೇಶ್ ಹಾಗು ಡಾ.ಶ್ರೀನಿವಾಸ್ ಮನೆಯ ಮೇಲೆ ಇಡಿ ದಾಳಿ ಮಾಡಿದೆ.