Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಲೈಂಗಿಕ ಜೀವನದಲ್ಲಿನ ಬದಲಾವಣೆಗಳು ಮೆದುಳಿನ ಗೆಡ್ಡೆಯ (Brain Tumor) ಆರಂಭಿಕ ಲಕ್ಷಣಗಳೇ?

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜಕೀಯ ಉದ್ದೇಶಗಳಿಗೆ ಧಾರ್ಮಿಕ ಕೇಂದ್ರ ಬಳಕೆ ಮಾಡುವಂತಿಲ್ಲ : ಕೆ.ಎಸ್ ಈಶ್ವರಪ್ಪಗೆ ಹೈಕೋರ್ಟ್ ಚಾಟಿ
KARNATAKA

BIG NEWS : ರಾಜಕೀಯ ಉದ್ದೇಶಗಳಿಗೆ ಧಾರ್ಮಿಕ ಕೇಂದ್ರ ಬಳಕೆ ಮಾಡುವಂತಿಲ್ಲ : ಕೆ.ಎಸ್ ಈಶ್ವರಪ್ಪಗೆ ಹೈಕೋರ್ಟ್ ಚಾಟಿ

By ಸುರೇಶ್‌

ಬೆಂಗಳೂರು: ಚುನಾವಣೆ ಅಥವಾ ಯಾವುದೇ ರಾಜಕೀಯ ಉದ್ದೇಶಗಳಿಗಾಗಿ ಧಾರ್ಮಿಕ ಸ್ಥಳಗಳನ್ನು ಬಳಸುವುದು ಕಾನೂನುಬಾಹಿರ ಮತ್ತು ಅಕ್ಷಮ್ಯ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಶಿವಮೊಗ್ಗದ ದೇವಸ್ಥಾನವೊಂದರಲ್ಲಿ ರಾಜಕೀಯ ಸಭೆ ನಡೆಸಿದ ಆರೋಪ ಎದುರಿಸುತ್ತಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧದ ಕಾನೂನು ಕ್ರಮಗಳಿಗೆ ತಡೆ ನೀಡಲು ನ್ಯಾಯಾಲಯ ನಿರಾಕರಿಸಿದೆ.

ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಮತ್ತು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಲಾಗಿರುವ ದೋಷಾರೋಪ ಪಟ್ಟಿಯನ್ನು ರದ್ದುಗೊಳಿಸುವಂತೆ ಕೋರಿ ಕೆ.ಎಸ್. ಈಶ್ವರಪ್ಪ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠ ನಡೆಸಿತು. ಈ ವೇಳೆ ಅರ್ಜಿದಾರರ ಪರ ವಾದವನ್ನು ಆಲಿಸಿದ ನ್ಯಾಯಾಲಯ, ಧಾರ್ಮಿಕ ಕೇಂದ್ರಗಳ ದುರ್ಬಳಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿತು.

ನ್ಯಾಯಾಲಯದ ಕಠಿಣ ನಿಲುವು: ವಿಚಾರಣೆ ವೇಳೆ ಖಾರವಾಗಿ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, “ರಾಜಕೀಯ ಕಾರಣಗಳಿಗಾಗಿ ನೀವು ಧಾರ್ಮಿಕ ಸ್ಥಳಗಳನ್ನು ಬಳಕೆ ಮಾಡುವಂತಿಲ್ಲ. ದೇವಸ್ಥಾನ, ಮಸೀದಿ ಅಥವಾ ಚರ್ಚ್‌ಗಳಂತಹ ಪವಿತ್ರ ಸ್ಥಳಗಳನ್ನು ರಾಜಕೀಯ ಲಾಭಕ್ಕಾಗಿ ಬಳಸುವುದು ಸರಿಯಾದ ಕ್ರಮವಲ್ಲ. ಇಂತಹ ಪ್ರವೃತ್ತಿಗಳಿಗೆ ಈಗಲಾದರೂ ಪೂರ್ಣವಿರಾಮ ಬೀಳಬೇಕು,” ಎಂದು ಕಿವಿಮಾತು ಹೇಳಿದರು. ರಾಜಕೀಯ ಮತ್ತು ಧರ್ಮವನ್ನು ಬೆರೆಸುವ ಇಂತಹ ಘಟನೆಗಳು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುತ್ತವೆ ಎಂದು ನ್ಯಾಯಪೀಠ ಸೂಚ್ಯವಾಗಿ ತಿಳಿಸಿತು.

ಪ್ರಕರಣದ ಹಿನ್ನೆಲೆ: ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ, ಕೆ.ಎಸ್. ಈಶ್ವರಪ್ಪ ಮತ್ತು ಅವರ ಬೆಂಬಲಿಗರು ಶಿವಮೊಗ್ಗದ ದೇವಸ್ಥಾನವೊಂದರ ಆವರಣದಲ್ಲಿ ನಿಯಮಗಳನ್ನು ಗಾಳಿಗೆ ತೂರಿ ರಾಜಕೀಯ ಸಭೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು. ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಮಾತ್ರವಲ್ಲದೆ, ಧಾರ್ಮಿಕ ಸಂಸ್ಥೆಗಳ (ದುರುಪಯೋಗ ತಡೆ) ಕಾಯ್ದೆಯ ಅಡಿಯಲ್ಲೂ ಅಪರಾಧ ಎಂದು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

Share. Facebook Twitter LinkedIn WhatsApp Email

Related Posts

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

2 Mins Read

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

1 Min Read

‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ

1 Min Read
Recent News

ಲೈಂಗಿಕ ಜೀವನದಲ್ಲಿನ ಬದಲಾವಣೆಗಳು ಮೆದುಳಿನ ಗೆಡ್ಡೆಯ (Brain Tumor) ಆರಂಭಿಕ ಲಕ್ಷಣಗಳೇ?

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

​ಪಂದ್ಯದ ಒತ್ತಡಕ್ಕೆ ‘ಚೋಟಾ ಭೀಮ್’ ಮದ್ದು: ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿಯ ವಿಶಿಷ್ಟ ಅಭ್ಯಾಸವನ್ನು ಬಹಿರಂಗಪಡಿಸಿದ ಹರ್ಷ ಗೋಯೆಂಕಾ!

State News
KARNATAKA

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮಿಕ್ಕುಳಿದ (ಉಳಿದ ಮೂಲ) ವೃಂದದಲ್ಲಿನ ವಿವಿಧ ಜಿಲ್ಲಾ, ನಗರ ಹಾಗೂ ಘಟಕಗಳಲ್ಲಿ ಖಾಲಿ…

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ

ರಾಜ್ಯದಲ್ಲಿ ರೌಡಿಸಂ ಮಟ್ಟಹಾಕಲು ಸರ್ಕಾರ ಬಿಗ್ ಆ್ಯಕ್ಷನ್: ಪ್ರತಿ ಠಾಣಾ ಮಟ್ಟದಲ್ಲೂ ‘ಆಂಟಿ ರೌಡಿ ಸ್ಕ್ವಾಡ್’ ರಚನೆಗೆ ಆದೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.