ಬೆಂಗಳೂರು : ರಾಜ್ಯದ ಖಾಸಗಿ ಅನುದಾನಿತ/ ಅನುದಾನರಹಿತ ಶಾಲೆಗಳ 2025-26 ನೇ ಸಾಲಿನ ಪ್ರಥಮ ಮಾನ್ಯತೆ ಹಾಗೂ ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಸಲು `ಅವಧಿಯನ್ನು ವಿಸ್ತರಿಸಿ ಅವಕಾಶ ಕಲ್ಪಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಮೇಲಿನ ವಿಷಯ ಹಾಗೂ ಉಲ್ಲೇಖ(8)ರ ಸುತ್ತೋಲೆಯಂತೆ 2025-26ನೇ ಸಾಲಿಗೆ ಖಾಸಗಿ ಶಾಲೆಗಳ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣಕ್ಕೆ ಆಡಳಿತ ಮಂಡಳಿಗೆ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ದಿನಾಂಕ: 28-11-2025 ರಿಂದ 12-01-2026 ರವರೆಗೆ ಅವಧಿ ವಿಸ್ತರಿಸಿ ಅವಕಾಶ ನೀಡಲಾಗಿತ್ತು. ದಿನಾಂಕ: 13-01-2026ರಂದು ತಂತ್ರಾಂಶದಲ್ಲಿ ಸ್ವೀಕೃತವಾಗಿರುವ ಅರ್ಜಿಗಳ ಸಂಖ್ಯಾ ಮಾಹಿತಿಯನ್ನು ಪರಿಶೀಲಿಸಲಾಗಿ, ನಿಗದಿಪಡಿಸಿದ ಕಾಲಾವಕಾಶದೊಳಗೆ ಮಾನ್ಯತೆ ನವೀಕರಣ ಪಡೆಯಲು ಅರ್ಜಿ ಸಲ್ಲಿಸಲಾಗದೇ ಇರುವುದನ್ನು ಗಮನಿಸಲಾಗಿದೆ.
ಶಿಕ್ಷಣ ಕಾಯ್ದೆ ಮತ್ತು ನಿಯಮಗಳನುಸಾರ ಶಾಲೆಗಳನ್ನು ಅಧಿಕೃತ ಎಂದು ಪರಿಗಣಿಸಲು ಶಾಲೆಗಳು ಆಯಾ ಅವಧಿಯಲ್ಲಿ ಮಾನ್ಯತೆಯನ್ನು ನವೀಕರಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ. ಮಾನ್ಯತೆ ನವೀಕರಿಸದಿದ್ದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ವಿದ್ಯಾರ್ಥಿಗಳನ್ನು ನೊಂದಾಯಿಸಲು, ಆರ್.ಟಿ.ಇ. ಶುಲ್ಕ ಮರುಪಾವತಿಗೆ ಪ್ರಸ್ತಾವನೆ ಪರಿಗಣಿಸಲು, ಅನುದಾನಿತ ಶಾಲಾ ಶಿಕ್ಷಕರ ವೇತನ ಪಾವತಿಗೆ ಅವಕಾಶವಿರುವುದಿಲ್ಲ. ಆದ್ದರಿಂದ ಸಂಬಂಧಿಸಿದ ಕ್ಷೇತ್ರಶಿಕ್ಷಣಾಧಿಕಾರಿಗಳು ಮತ್ತು ಸಕ್ಷಮ ಪ್ರಾಧಿಕಾರಿಗಳಾದ ಉಪನಿರ್ದೇಶಕರು(ಆಡಳಿತ) ಇವರು ವೈಯುಕ್ತಿಕ ಗಮನ ಹರಿಸಿ ತಮ್ಮ ವ್ಯಾಪ್ತಿಯಲ್ಲಿ ಈವರೆವಿಗೂ 2025-26ನೇ ಸಾಲಿಗೆ ಮಾನ್ಯತೆ ಪಡೆಯಲು ಅಗತ್ಯ ದಾಖಲೆ/ಮಾಹಿತಿಗಳೊಂದಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸದಿರುವ ಶಾಲಾ ಆಡಳಿತ ಮಂಡಳಿಗಳಿಗೆ ಅವಧಿ ವಿಸ್ತರಣೆಯ ಬಗ್ಗೆ ಹೆಚ್ಚಿನ ರೀತಿಯಲ್ಲಿ ಪ್ರಚಾರ ಕೈಗೊಂಡು, ಪ್ರಸ್ತಾವನೆ ಸಲ್ಲಿಸಲು ಅಗತ್ಯ ಕ್ರಮವಹಿಸಲು ತಿಳಿಸಿದೆ.
2025-26ನೇ ಸಾಲಿನಲ್ಲಿ ಪ್ರಥಮ ಮಾನತೆ/ಮಾನತೆ ನವೀಕರಣವಾಗದಿರುವಂತಹ ಶಾಲಾ ಆಡಳಿತ ಮಂಡಳಿಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ: 16-02-2026 ರವರೆಗೆ ದಿನಾಂಕವನ್ನು ವಿಸ್ತರಿಸಿ ಅಂತಿಮ ಅವಕಾಶ ನೀಡಲಾಗಿದೆ. ಈವರೆವಿಗೂ ಪ್ರಥಮ ಮಾನತೆ/ಮಾನತೆ ನವೀಕರಣ ಪಡೆಯದಿರುವ ಶಾಲಾ ಆಡಳಿತ ಮಂಡಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಿ ಅವಕಾಶ ನೀಡಿದ್ದು, ವಿಸ್ತರಿಸಿದ ದಿನಾಂಕದೊಳಗೆ ಸೂಕ್ತ ದಾಖಲೆಗಳೊಂದಿಗೆ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಿ, ಮಾನತೆ ಪಡೆಯುವಂತೆ ಜಿಲ್ಲಾ ಉಪನಿರ್ದೇಶಕರು (ಆಡಳಿತ) ಇವೆರು ಕ್ರಮ ವಹಿಸುವುದು. ಇದುವರೆಗೂ ಸ್ವೀಕೃತವಾದ ಅರ್ಜಿಗಳಲ್ಲಿ OVER DUE ಅರ್ಜಿಗಳನ್ನು ಇತ್ತರ್ಥಪಡಿಸಲು ಅವಕಾಶ ಮಾಡಿಕೊಡಲಾಗಿದ್ದು, ಮುಂದೆ ಸಲ್ಲಿಕೆಯಾಗುವ ಅರ್ಜಿಗಳನ್ನು ಆಯಾ ದಿನವೇ ನಿಯಮಾನುಸಾರೆ ಪರಿಶೀಲಿಸಿ ಕ್ರಮವಹಿಸಲು ಹೆಚ್ಚಿನ ಸಿಬ್ಬಂದಿಯನು ನಿಯೋಜಿಸಿ” ವಿಳಂಬಕ್ಕೆ ಅವಕಾಶ ನೀಡಿದಂತೆ ಅರ್ಜಿಗಳನ್ನು ಇತರ್ಥಪಡಿಸಲು ಅಗತ್ಯ ಕ್ರಮವಹಿಸಲು ಉಪನಿರ್ದೇಶಕರು (ಆಡಳಿತ) ಇವರಿಗೆ ಸೂಚನೆ ನೀಡಿದೆ. ಉಳಿದಂತೆ ಉಲ್ಲೇಖ(2) ರಿಂದ (8)ರವರೆಗಿನ ಸುತ್ತೋಲೆಗಳಲ್ಲಿನ ಎಲ್ಲಾ ಅಂಶಗಳು ಯಥಾವತ್ತಾಗಿರುತ್ತದೆ.
2025-26 ನೇ ಸಾಲಿಗೆ ಪ್ರಥಮ ಮಾನ್ಯತೆ / ಮಾನ್ಯತೆ ನವೀಕರಣ ಸಂಬಂಧ ಹೊಸದಾಗಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಿ ಅವಕಾಶ ನೀಡಿ ನಿಗದಿಪಡಿಸಿದ ವೇಳಾಪಟ್ಟಿ









