Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜಾಗತಿಕ ವೇದಿಕೆಯಲ್ಲಿ ನಾಯಕರ ಜಿದ್ದಾಜಿದ್ದಿ: ‘ಹೊಸ ನಾಯಕತ್ವ’ಕ್ಕೆ ಟ್ರಂಪ್ ಕರೆ: ‘ಅಪರಾಧಿ’ ಎಂದು ಜರೆದ ಖಮೇನಿ

18/01/2026 8:49 AM

SHOCKING : ಪೋಷಕರೇ ಎಚ್ಚರ : ನಿಗೂಢ ಕಾಯಿಲೆಯಿಂದ ಅಂಗವಿಕಲರಾಗುತ್ತಿದ್ದಾರೆ ಮಕ್ಕಳು.!

18/01/2026 8:44 AM

ಬಾಂಗ್ಲಾದಲ್ಲಿ ಕಮರಿದ ಮಾನವೀಯತೆ: ಕೆಲಸಗಾರನ ರಕ್ಷಣೆಗಾಗಿ ನಿಂತ ಹಿಂದೂ ವ್ಯಕ್ತಿಯ ಮೇಲೆ ಸಲಿಕೆಯಿಂದ ಹಲ್ಲೆ, ಸಾವು

18/01/2026 8:42 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರೇಣುಕಾದೇವಿ ಚಂದ್ರಗುತ್ತಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಚಿಂತನೆ : ಸಚಿವ ಎಸ್.ಮಧುಬಂಗಾರಪ್ಪ ಘೋಷಣೆ
KARNATAKA

BIG NEWS : ರೇಣುಕಾದೇವಿ ಚಂದ್ರಗುತ್ತಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಚಿಂತನೆ : ಸಚಿವ ಎಸ್.ಮಧುಬಂಗಾರಪ್ಪ ಘೋಷಣೆ

By kannadanewsnow5728/11/2024 11:59 AM

ಶಿವಮೊಗ್ಗ : ಮಲೆನಾಡಿನ ಜನರ ಆರಾಧ್ಯದೈವ ಶ್ರೀ ರೇಣುಕಾದೇವಿ ಚಂದ್ರಗುತ್ತಿ ಕ್ಷೇತ್ರದ ವಿಕಾಸಕ್ಕೆ ಅಭಿವೃದ್ಧಿ ಪ್ರಾಧಿಕಾರ ರಚನೆ, 12ನೇ ಶತಮಾನದ ಪ್ರಸಿದ್ಧ ಶರಣ ಹಾಗೂ ಮೊದಲ ಸಂಸತ್ತಿನ ಮೊದಲ ಪೀಠಾಧ್ಯಕ್ಷ ಅಲ್ಲಮಪ್ರಭುದೇವರ ಜನ್ಮಸ್ಥಳ ಬಳ್ಳಿಗಾವೆ ಹಾಗೂ ಶಿವಮೊಗ್ಗ ನಗರದಲ್ಲಿ ನೂತನವಾಗಿ ಹೆಸರಿಸಲಾದ ಅಲ್ಲಮಪ್ರಭು(ಪ್ರೀಡಂ ಪಾರ್ಕ್) ಮೈದಾನವನ್ನು ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಿರುವುದಾಗಿ ರಾಜ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈಗಾಗಲೇ ಸಮಾಲೋಚನೆ ನಡೆಸಿದಂತೆ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಕಟ್ಟಡ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಕಟ್ಟಡಗಳನ್ನು ಒಂದೇ ಕಟ್ಟಡ ಸಂಕೀರ್ಣದಲ್ಲಿ ನಿರ್ಮಿಸಲು ಈಗಾಗಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಹಿಂದಿನ ನಿವೇಶನವನ್ನು ಕಾಯ್ದಿರಿಸಲಾಗಿದ್ದು, ಜಿಲ್ಲೆಯ ಜನರಿಗೆ ಎಲ್ಲಾ ರೀತಿಯ ಅನುಕೂಲವಾಗುವಂತೆ ಅತ್ಯಾಧುನಿಕ ಹಾಗೂ ಸುಸಜ್ಜಿತ ಕಟ್ಟಡವನ್ನು ನಿರ್ಮಿಸಲು ಮುಂದಿನ ಬಜೆಟ್‌ನಲ್ಲಿ ಅಗತ್ಯ ಅನುದಾನ ಕಾಯ್ದಿರಿಸಲು ಮಾನ್ಯ ಮುಖ್ಯಮಂತ್ರಿಗಳನ್ನು ಕೋರಲಾಗುವುದು. ಈಗಾಗಲೇ ಈ ಸಂಬAಧ ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೊಂದಿಗೆ ಸಮಾಲೋಚಿಸಿದ್ದು, ಮುಖ್ಯಮಂತ್ರಿಗಳು ಉತ್ಸುಕರಾಗಿರುವುದಾಗಿ ತಿಳಿಸಿದ ಅವರು, ನಿರ್ಮಿಸುವ ಕಟ್ಟಡದ ವಿನ್ಯಾಸವು ಮಾದರಿ ಹಾಗೂ ಅತ್ಯಾಧುನಿಕವಾಗಿರುವಂತೆ ನೋಡಿಕೊಳ್ಳುವಂತೆ ಅವರು ಸಲಹೆ ನೀಡಿದರು.

ನಗರ ಅಲ್ಲಮಪ್ರಭು ಮೈದಾನದ ಅಭಿವೃದ್ಧಿ ಲೋಕೋಪಯೋಗಿ ಇಲಾಖೆಯು ಸುಮಾರು 5ಕೋಟಿ ರೂ.ಗಳನ್ನು ಕಾಯ್ದಿರಿಸಿದೆ. ಈ ಅನುದಾನಕ್ಕೆ ಸಹಕಾರಿಯಾಗುವಂತೆ ಸರ್ಕಾರದಿಂದ ಇನ್ನಷ್ಟು ಅನುದಾನವನ್ನು ಬಿಡುಗಡೆ ಮಾಡುವಂತೆ ಮಾನ್ಯ ಮುಖ್ಯಮಂತ್ರಿಗಳನ್ನು ಕೋರಲಾಗುವುದು. ಮೈದಾನವನ್ನು ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಲು ಕ್ರಿಯಾಯೋಜನೆಯನ್ನು ಸಿದ್ಧಪಡಿಸಿ, ಸಲ್ಲಿಸುವಂತೆ ಅವರು ಲೋಕೋಪಯೋಗಿ ಇಲಾಖೆಯ ಅಭಿಯಂತರರಿಗೆ ಸೂಚಿಸಿದರು.

ನಗರದ ಹೊರವಲಯದಲ್ಲಿ ಆರಂಭಗೊAಡಿರುವ ಷಾಹಿ ಗಾರ್ಮೆಂಟ್ಸ್ಗೆ ಭೂಮಿ ಮಂಜೂರಾತಿಯಲ್ಲಿ ನಿಯಮ ಪಾಲನೆಯಾಗದಿರುವುದು ಕಂಡುಬAದಿದೆ. ಅಲ್ಲದೇ ಸದರಿ ಕೈಗಾರಿಕೆಯಿಂದಾಗಿ ಭಾರೀ ಪ್ರಮಾಣದ ಪರಿಸರ ಮಾಲಿನ್ಯವಾಗುತ್ತಿರುವ ಬಗ್ಗೆ ಸಾರ್ವಜನಿಕ ವಲಯದಿಂದ ದೂರುಗಳು ಕೇಳಿಬರುತ್ತಿವೆ. ಸಂಬAಧಿಸಿದ ಇಲಾಖಾಧಿಕಾರಿಗಳು ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೂಡಲೇ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚಿಸಿದರು.

ನಗರದಲ್ಲಿ ಫುಡ್‌ಪಾರ್ಕ್ ನಿರ್ಮಾಣಕ್ಕೆ ಈಗಾಗಲೇ ಮಂಜೂರಾತಿ ದೊರೆತಿದ್ದು, ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚಿಸಿದ ಸಚಿವರು, 660ಕೋಟಿ ರೂ.ಗಳ ವೆಚ್ಚದಲ್ಲಿ ಶರಾವತಿಯಿಂದ ಸೊರಬ, ಆನವಟ್ಟಿ ಮತ್ತು ಶಿರಾಳಕೊಪ್ಪ ಪಟ್ಟಣ ಪ್ರದೇಶಕ್ಕೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಕಾಮಗಾರಿಗೆ ಶೀಘ್ರ ಚಾಲನೆ ದೊರೆಯಲಿದೆ. ಅಂತೆಯೇ ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯದಿಂದ ಶಿಕಾರಿಪುರ ಪಟ್ಟಣದ ನಿವಾಸಿಗಳಿಗೆ ವರ್ಷಪೂರ್ತಿ ಶುದ್ಧಕುಡಿಯುವ ನೀರು ಒದಗಿಸುವುದಲ್ಲದೇ ಕೃಷಿ ಚಟುವಟಿಕೆಗಳಿಗೂ ನೀರು ಒದಗಿಸಲು ಇರುವ ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಅವರು ಸೂಚಿಸಿದರು.

ಚಂದ್ರಗುತ್ತಿ ಧರ್ಮಕ್ಷೇತ್ರದ ದೇವಾಲಯದ ಸರ್ವಾಂಗೀಣ ವಿಕಾಸ ಹಾಗೂ ಪ್ರವಾಸಿತಾಣವನ್ನಾಗಿ ಪರಿವರ್ತಿಸಲು ಉದ್ದೇಶಿಸಿದ್ದು, ಅರಣ್ಯ ಇಲಾಖೆಯ ಅನುಮೋದನೆಗಾಗಿ ಕಡತ ಮಂಡಿಸಲಾಗಿದೆ. ಈ ಸಂಬAಧ ಅರಣ್ಯ ಇಲಾಖಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಮುಂದಿನ ಜನವರಿ ಮೊದಲ ಮಾಸಾಂತ್ಯದೊಳಗಾಗಿ ವಿಮಾನದ ನೈಟ್ ಲ್ಯಾಂಡಿAಗ್ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ. ಇದರಿಂದಾಗಿ ವಿಮಾನ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗಲಿದೆ. ಜಿಲ್ಲೆಯಲ್ಲಿ ಕೌಶಲ್ಯಾಧಾರಿತ ತರಬೇತಿಗಳನ್ನು ನೀಡಲು ಸೂಚಿಸಲಾಗಿದೆ. ಮುಂದಿನ ತಿಂಗಳಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಜಿಲ್ಲೆಯ ಹೊಸನಗರದಲ್ಲಿ ನಡೆಸಲು ಈಗಾಗಲೇ ನಿರ್ಣಯಿಸಲಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್, ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದಿದ್ದರು.

BIG NEWS : Renukadevi Chandragutti Development Authority contemplated : Minister S. Madhubangarappa announced BIG NEWS : ರೇಣುಕಾದೇವಿ ಚಂದ್ರಗುತ್ತಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಚಿಂತನೆ : ಸಚಿವ ಎಸ್.ಮಧುಬಂಗಾರಪ್ಪ ಘೋಷಣೆ
Share. Facebook Twitter LinkedIn WhatsApp Email

Related Posts

Petrol Bunk : `ಪೆಟ್ರೋಲ್ ಬಂಕ್’ ಸ್ಥಾಪಿಸಬೇಕಾ? ಟಾಪ್ ಕಂಪನಿಯೊಂದು ನಿಮಗೆ ನೀಡುತ್ತಿದೆ `ಗೋಲ್ಡನ್ ಆಫರ್’.!

18/01/2026 8:18 AM2 Mins Read

Home Loan Rule : ಸಾಲ ಮರುಪಾವತಿ ಬಳಿಕ ಬ್ಯಾಂಕುಗಳು `ಆಸ್ತಿ ದಾಖಲೆ’ಗಳು ನೀಡದಿದ್ದರೆ ಗ್ರಾಹಕರಿಗೆ ಸಿಗಲಿದೆ 5,000 ರೂ.!

18/01/2026 8:11 AM2 Mins Read

BIG NEWS : ಕರ್ನಾಟಕದಲ್ಲಿ ‘ಪೋಕ್ಸೋ’ ಕಾಯಿದೆಯಡಿ ವಿಧಿಸಲಾಗುವ ದಂಡ, ಶಿಕ್ಷೆಯ ಕುರಿತು ಇಲ್ಲಿದೆ ಮಾಹಿತಿ.!

18/01/2026 7:55 AM2 Mins Read
Recent News

ಜಾಗತಿಕ ವೇದಿಕೆಯಲ್ಲಿ ನಾಯಕರ ಜಿದ್ದಾಜಿದ್ದಿ: ‘ಹೊಸ ನಾಯಕತ್ವ’ಕ್ಕೆ ಟ್ರಂಪ್ ಕರೆ: ‘ಅಪರಾಧಿ’ ಎಂದು ಜರೆದ ಖಮೇನಿ

18/01/2026 8:49 AM

SHOCKING : ಪೋಷಕರೇ ಎಚ್ಚರ : ನಿಗೂಢ ಕಾಯಿಲೆಯಿಂದ ಅಂಗವಿಕಲರಾಗುತ್ತಿದ್ದಾರೆ ಮಕ್ಕಳು.!

18/01/2026 8:44 AM

ಬಾಂಗ್ಲಾದಲ್ಲಿ ಕಮರಿದ ಮಾನವೀಯತೆ: ಕೆಲಸಗಾರನ ರಕ್ಷಣೆಗಾಗಿ ನಿಂತ ಹಿಂದೂ ವ್ಯಕ್ತಿಯ ಮೇಲೆ ಸಲಿಕೆಯಿಂದ ಹಲ್ಲೆ, ಸಾವು

18/01/2026 8:42 AM

Petrol Bunk : `ಪೆಟ್ರೋಲ್ ಬಂಕ್’ ಸ್ಥಾಪಿಸಬೇಕಾ? ಟಾಪ್ ಕಂಪನಿಯೊಂದು ನಿಮಗೆ ನೀಡುತ್ತಿದೆ `ಗೋಲ್ಡನ್ ಆಫರ್’.!

18/01/2026 8:18 AM
State News
KARNATAKA

Petrol Bunk : `ಪೆಟ್ರೋಲ್ ಬಂಕ್’ ಸ್ಥಾಪಿಸಬೇಕಾ? ಟಾಪ್ ಕಂಪನಿಯೊಂದು ನಿಮಗೆ ನೀಡುತ್ತಿದೆ `ಗೋಲ್ಡನ್ ಆಫರ್’.!

By kannadanewsnow5718/01/2026 8:18 AM KARNATAKA 2 Mins Read

ವಿಶ್ವಪ್ರಸಿದ್ಧ ಇಂಧನ ಕಂಪನಿಯಾದ ಶೆಲ್, ಈಗ ಭಾರತದಲ್ಲಿ ತನ್ನ ಚಿಲ್ಲರೆ ಫ್ರ್ಯಾಂಚೈಸ್ ಅವಕಾಶಗಳನ್ನು ವಿಸ್ತರಿಸುತ್ತಿದೆ. ಈ ಅವಕಾಶದೊಂದಿಗೆ, ಮಹತ್ವಾಕಾಂಕ್ಷಿ ಉದ್ಯಮಿಗಳು…

Home Loan Rule : ಸಾಲ ಮರುಪಾವತಿ ಬಳಿಕ ಬ್ಯಾಂಕುಗಳು `ಆಸ್ತಿ ದಾಖಲೆ’ಗಳು ನೀಡದಿದ್ದರೆ ಗ್ರಾಹಕರಿಗೆ ಸಿಗಲಿದೆ 5,000 ರೂ.!

18/01/2026 8:11 AM

BIG NEWS : ಕರ್ನಾಟಕದಲ್ಲಿ ‘ಪೋಕ್ಸೋ’ ಕಾಯಿದೆಯಡಿ ವಿಧಿಸಲಾಗುವ ದಂಡ, ಶಿಕ್ಷೆಯ ಕುರಿತು ಇಲ್ಲಿದೆ ಮಾಹಿತಿ.!

18/01/2026 7:55 AM

5 ಲಕ್ಷದವರೆಗೆ ಚಿಕಿತ್ಸೆ : `ಯಶಸ್ವಿನಿ ವಿಮೆ ಯೋಜನೆ’ ನವೀಕರಣ, ಹೊಸ ಸದಸ್ಯತ್ವ ನೋಂದಣಿಗೆ ಅರ್ಜಿ ಆಹ್ವಾನ

18/01/2026 7:47 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.