ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯಲಿದೆ. ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ದೋಷಾರೋಪ ನಿಗದಿಗೆ ಕೋರ್ಟ್ ದಿನಾಂಕ ಗೊತ್ತು ಪಡಿಸಲಿದೆ. ಪ್ರಕರಣ ಸಂಬಂಧ ಸದ್ಯ ಎಲ್ಲಾ 17 ಆರೋಪಿಗಳು ಕೂಡ ಜಾಮೀನಿನ ಮೇಲೆ ಹೊರಗಡೆ ಇದ್ದಾರೆ. ಜಾಮೀನು ರದ್ದು ಕೋರಿರುವ ಅರ್ಜಿ ಸುಪ್ರೀಂ ಕೋರ್ಟ್ ನಲ್ಲಿ ಪರಿಶೀಲನೆಯಲ್ಲಿದೆ.