ಬೆಂಗಳೂರು : ನಟ ದರ್ಶನ್ ಹಾಗೂ ಅವರ ಗ್ಯಾಂಗ್ ನಿಂದ ಅಭಿಮಾನಿಯಾದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದ A1 ಆರೋಪಿ ಆಗಿರುವ ನಟಿ ಪವಿತ್ರ ಗೌಡ ಅವರನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ.
ಹೌದು ನಟ ದರ್ಶನ್ ಮತ್ತು ಗ್ಯಾಂಗ್ನಿಂದ ಹತ್ಯೆಗೆ ಒಳಗಾದ ಅಭಿಮಾನಿ ರೇಣುಕಾ ಸ್ವಾಮಿ ಕೊಲೆ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಯಾಗಿರುವ ನಟಿ ಪವಿತ್ರ ಗೌಡಳನ್ನು ಇದೀಗ ನಿಮ್ಹಾನ್ಸ್ ಆಸ್ಪತ್ರೆಯ ಮಹಿಳಾ ಸಾಂತ್ವನ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಅಲ್ಲದೆ ಇತ್ತ ನಾಳೆ ಬೆಳಿಗ್ಗೆ ನಟ ದರ್ಶನ್ ಹಾಗೂ ಗ್ಯಾಂಗ್ ಅನ್ನು ಪೊಲೀಸರು ವಿಚಾರಣೆ ನಡೆಸಲಿದ್ದಾರೆ. ಈಗಾಗಲೇ ಪ್ರಾಥಮಿಕ ಹಂತದ ವಿಚಾರಣೆಯನ್ನು ಪೊಲೀಸರು ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಆರೋಪಿಗಳಿಗೆ ಬಿರಿಯಾನಿ ತರಿಸಿದ ಪೊಲೀಸರು
ಸದ್ಯ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ದರ್ಶನ್ ಮತ್ತು ಗ್ಯಾಂಗ್ ಇದ್ದು, ರೇಣುಕಾ ಸ್ವಾಮಿ ಹತ್ಯೆ ಕೇಸ್ ಆರೋಪಿಗಳಿಗೆ ಪೊಲೀಸ್ರಿಂದ ಬಿರಿಯಾನಿ ನೀಡಲಾಗಿದೆ. ಆರೋಪಿಗಳಿಗೆ ಪೊಲೀಸ್ ಸಿಬ್ಬಂದಿ ಹೊರಗಡೆಯಿಂದ ಊಟ ತಂದಿದ್ದಾರೆ ಎಂದು ಹೇಳಲಾಗುತ್ತಿದೆ. ಹತ್ತಕ್ಕೂ ಹೆಚ್ಚು ಬಾಕ್ಸ್ ಗಳಲ್ಲಿ ಪೊಲೀಸರು ಆರೋಪಿಗಳಿಗೆ ದೊಣ್ಣೆ ಬಿರಿಯಾನಿ ತಂದಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.