ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು ನಟ ದರ್ಶನ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಅದಾದ ಬಳಿಕ ನಟ ದರ್ಶನ್ ಅವರ ಪರ ವಕೀಲರು ಜಾಮಿನು ಕೋರಿ ಹೈ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಇಂದು ಹೈಕೋರ್ಟ್ ಈ ಒಂದು ಜಾಮೀನು ಅರ್ಜಿ ವಿಚಾರಣೆ ನಡೆಸಲಿದೆ.
ಹೌದು ಜಾಮೀನು ನಟ ದರ್ಶನ್ ಪರ ವಕೀಲ ಎಸ್ ಸುನಿಲ್ ಕುಮಾರ್ ಹೈಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಹಾಗಾಗಿ ಇಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ನ್ಯಾ. ಎಸ್. ವಿಶ್ವಜೀತ್ ಅವರಿದ್ದ ಹೈಕೋರ್ಟ್ ಏಕ ಸದಸ್ಯಪೀಠ ಈ ಒಂದು ವಿಚಾರಣೆ ನಡೆಸಲಿದೆ.
ಈಗಾಗಲೇ ಕೊಲೆ ಪ್ರಕರಣದಲ್ಲಿ ಹಲವು ಆರೋಪಿಗಳಿಗೆ ಜಾಮೀನು ದೊರೆತಿದೆ. ಆದರೆ ಪ್ರಕರಣದ A1 ಆರೋಪಿ ಪವಿತ್ರಾಗೌಡ ಹಾಗೂ ನಟ ದರ್ಶನ್ ಸೇರಿದಂತೆ ಇನ್ನೂ ಕೆಲವು ಆರೋಪಿಗಳಿಗೆ ಕೋರ್ಟ್ ಜಾಮೀನು ನೀಡಿಲ್ಲ ಹಾಗಾಗಿ ಇದೇ ಅಕ್ಟೋಬರ್ 22ರಂದು ನಟ ದರ್ಶನ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಹಾಗಾಗಿ ಇಂದು ಅವರಿಗೆ ಮಹತ್ವದ ದಿನವಾಗಿದೆ ಎಂದು ಹೇಳಲಾಗುತ್ತಿದೆ.