ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಈ ಒಂದು ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ಕೋರ್ಟ್, ಸೇಷನ್ಸ್ (24ನೇ ಎಸಿಎಂಎಂ) ನ್ಯಾಯಾಲಯಕ್ಕೆ ವರ್ಗಾಯಿಸಿದೆ.
ಹೌದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಜೈಲುವಾಸಿಗಳಾಗಿದ್ದು, ಇದೀಗ ಈ ಒಂದು ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ಕೋರ್ಟ್, ಸೆಷನ್ಸ್ ಕೋರ್ಟ್ ಗೆ ವರ್ಗಾವಣೆ ಮಾಡಿದೆ. ಹಾಗಾಗಿ ಇನ್ನು ಮುಂದೆ ಸಾಕ್ಷಗಳ ವಿಚಾರಣೆ ಶಶಿನ್ಸ್ ಕೋರ್ಟ್ ನಲ್ಲಿ ನಡೆಯಲಿದೆ.
ಇನ್ನು ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರ ನಡೆಸಿದ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಅಕ್ಟೋಬರ್ 4ಕ್ಕೆ ವಿಚಾರಣೆಯನ್ನು ಮುಂದುಡಿದೆ. ಅಲ್ಲದೆ ಪ್ರಕರಣದ A1 ಆರೋಪಿ ಆಗಿರುವ ಪವಿತ್ರಗೌಡ ಜಾಮೀನು ಅರ್ಜಿ ವಿಚಾರಣೆ ಕೂಡ ಅಕ್ಟೋಬರ್ 4ಕ್ಕೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ.