ಚಿತ್ರದುರ್ಗ: ನಟಿ ಪವಿತ್ರ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ದರ್ಶನ ಹಾಗೂ ಆತನ ಸಹಚರರು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅಮೃತ ರೇಣುಕಾ ಸ್ವಾಮಿ ಸಂಬಂಧಿಕರು ಈ ಒಂದು ಪ್ರಕರಣದ ತನಿಖೆಯನ್ನು ಸಿವಿಐಗೆ ವಹಿಸಿ ಎಂದು ಆಗ್ರಹಿಸಿದ್ದಾರೆ.
ಸುದ್ಧಿಗಾರರೊಂದಿಗೆ ಮಾತನಾಡಿದ ರೇಣುಕಾಸ್ವಾಮಿ ಚಿಕ್ಕಪ್ಪ ರೇಣುಕಾಸ್ವಾಮಿ ಕೊಲೆ ಕೇಸ್ ಅನ್ನು ಸಿಬಿಐಗೆ ವಹಿಸಬೇಕು. ಉನ್ನತ ಮಟ್ಟದ ತನಿಖೆ ನಡೆಸುವುದರಿಂದ ನ್ಯಾಯ ಸಿಗುವ ಭರವಸೆ ಇದೆ. ಪ್ರಕರಣದಲ್ಲಿ ಯಾರೇ ಇದ್ದರೂ ತಕ್ಕ ಶಿಕ್ಷೆ ಆಗಲೇಬೇಕು ಎಂದು ರೇಣುಕಾಸ್ವಾಮಿ ಅವರ ಚಿಕ್ಕಪ್ಪ ಷಡಕ್ಷರಯ್ಯ ಒತ್ತಾಯಿಸಿದ್ದಾರೆ.
ಈ ತಿಂಗಳು 26ಕ್ಕೆ ರೇಣುಕಾಸ್ವಾಮಿಗೆ ಮದುವೆಯಾಗಿ ಒಂದು ವರ್ಷ. ಪತ್ನಿ ಮೂರು ತಿಂಗಳ ಗರ್ಭಿಣಿ. ಯಾವುದೇ ಕುಟುಂಬಕ್ಕೂ ಈ ರೀತಿ ಅನ್ಯಾಯ ಆಗಬಾರದು. ಎಷ್ಟೇ ಪ್ರಭಾವಿ ಇದ್ದರೂ ತಕ್ಕ ಶಿಕ್ಷೆಯಾಗಲಿ. ಪೊಲೀಸರು ಪಾರದರ್ಶಕವಾಗಿ ತನಿಖೆ ನಡೆಸಿ ನ್ಯಾಯ ಕೊಡಿಸಬೇಕು ಎಂದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟ ದರ್ಶನ್ ನಟಿ ಪವಿತ್ರ ಗೌಡ ಶ್ರೀದಂತೆ 13 ಆರೋಪಿಗಳನ್ನು ಆರು ದಿನಗಳ ಕಾಲ ಪೊಲೀಸ್ ಕಸ್ಟಡ್ ಗೆ ನೀಡಿ ಬೆಂಗಳೂರಿನ ಮ್ಯಾರೇಜ್ ಸ್ಟ್ರೈಟ್ ನ್ಯಾಯಾಲಯ ಆದೇಶ ಹೊರಡಿಸಿದೆ. ಅಲ್ಲದೆ ರೇಣುಕಾ ಸ್ವಾಮಿ ಮೃತ ದೇಹದ ಪೋಸ್ಟ್ ಮಾರ್ಟಂ ನಂತರ ಕುಟುಂಬಸ್ಥರಿಗೆ ಹಸ್ತಾಂತರಿ ಸಿದ್ದು ನಾಳೆ ಚಿತ್ರದುರ್ಗದಲ್ಲಿಯೇ ರೇಣುಕಸ್ವಾಮಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.