ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಟ ದರ್ಶನ್ ಹಾಗೂ ಪವಿತ್ರಾಗೌಡ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಯಿತು. ವಿಚಾರಣೆಯ ಬಳಿಕ ನಟ ದರ್ಶನ್ ಹಾಗೂ A1 ಆರೋಪಿ ಆಗಿರುವಂತಹ ಪವಿತ್ರ ಗೌಡ ಜಾಮೀನು ಅರ್ಜಿ ವಜಾಗೊಳಿಸಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದ ನಟ ದರ್ಶನ್ ಹಾಗೂ ಪವಿತ್ರಗೌಡ ಇಬ್ಬರ ಜಾಮೀನು ಅರ್ಜಿ ಕೂಡ ಕೋರ್ಟ್ ವಜಾಗೊಳಿಸಿದೆ. ಜಾಮೀನು ಅರ್ಜಿ ವಜಾ ವಿಷಯ ತಿಳಿದಿದ್ದಂತೆ ಪವಿತ್ರ ಗೌಡ ಜೈಲಿನಲ್ಲಿ ಕಣ್ಣೀರು ಹಾಕಿದ್ದಾಳೆ. ಟಿವಿ ನೋಡಿ ಪವಿತ್ರ ಗೌಡ ಕಣ್ಣೀರು ಹಾಕಿದ್ದಾಳೆ ಎಂದು ತಿಳಿದು ಬಂದಿದೆ. ಇನ್ನು ನಟ ದರ್ಶನ್ ಅವರು ಸಲ್ಲಿಸಿದ ಜಾಮೀನು ಅರ್ಜಿ ಕೂಡ ಕೋರ್ಟ್ ವಜಾ ಗೊಳಿಸಿದೆ.
ಹಾಗಾಗಿ ದರ್ಶನ್ ಪರ ವಕೀಲರು ನಾಳೆ ಹೈಕೋರ್ಟಿಗೆ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಬಳ್ಳಾರಿ ಜೈಲಿನಿಂದ ನಟ ದರ್ಶನ ಅವರು ಹೊರಗಡೆ ಬರುತ್ತಾರೆ ಎಂದು ಜೈಲಿನ ಬಳಿ ಕಾದಿದ್ದ ಅವರ ಅಪಾರ ಅಭಿಮಾನಿಗಳಿಗೆ ಭಾರಿ ನಿರಾಸೆಯಾಗಿದೆ. ಅರ್ಜಿ ವಜಾ ಗೊಳಿಸಿದ ಬೆನ್ನಲ್ಲೇ ನಟ ದರ್ಶನ್ ಅವರು ಇನ್ನೂ 15 ದಿನಗಳ ಕಾಲ ಜೈಲಿನಲ್ಲಿ ಇರಬೇಕಾಗಿದೆ.