ಬೆಂಗಳೂರು : ಬೆಂಗಳೂರಲ್ಲಿ ಹೆದ್ದಾರಿ ಕಾಮಗಾರಿಯ ವೇಳೆ ರಸ್ತೆ ಕುಸಿದು ಬಿದ್ದು ಫುಲ್ ಟ್ರಾಫಿಕ್ ಜಾಮ್ ಆಗಿರುವ ಘಟನೆ ಬೆಂಗಳೂರು ಹೊಸೂರು ಮುಖ್ಯ ರಸ್ತೆಯಲ್ಲಿ ನಡೆದಿದ್ದು, ಈ ವೇಳೆ ತೀವ್ರವಾದ ಸಂಚಾರ ದಟ್ಟಣೆ ಉಂಟಾಯಿತು.
ಸರ್ವಿಸ್ ರಸ್ತೆ ಕಾಮಗಾರಿ ವೇಳೆ ರಸ್ತೆ ಕುಸಿದು ಬಿದ್ದು ಅವಘಡ ಸಂಭವಿಸಿದೆ. ಟ್ರಾಫಿಕ್ ನಲ್ಲಿ ಸಿಲುಕಿ ಅಂಬುಲೆನ್ಸ್ ಮತ್ತು ಬಸ್ ಚಾಲಕರು ಪರದಾಟ ನಡೆಸುತ್ತಿದ್ದಾರೆ. ಹೆದ್ದಾರಿ ಪ್ರಾದಿಕಾರ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಇದೀಗ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮಂದಗತಿ ಮತ್ತು ಅವೈಜ್ಞಾನಿಕ ಕಾಮಗಾರಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.








