ಬೆಂಗಳೂರು : ಶೈಕ್ಷಣಿಕ ವ್ಯವಸ್ಥೆಯಲ್ಲಿ ಜಾತಿ ತಾರತಮ್ಯ ನಿವಾರಿಸಲು ಕರ್ನಾಟಕದಲ್ಲಿ ರೋಹಿತ್ ವೇಮುಲ ಕಾಯ್ದೆ ಜಾರಿಗೆ ತರುವಂತೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ರಾಹುಲ್ ಗಾಂಧಿ ಪತ್ರಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕದಲ್ಲಿ ಆದಷ್ಟು ಬೇಗ ರೋಹಿತ್ ವೆಮುಲ ಕಾಯ್ದೆ ಜಾರಿಗೆ ತರುತ್ತೇವೆ ಎಂದು ಘೋಷಿಸಿದ್ದಾರೆ.
SC, ST ಮತ್ತು ಒಬಿಸಿಗಳಿಗೆ ಶೈಕ್ಷಣಿಕ ಸಂಸ್ಥೆಗಳು ತಾರತಮ್ಯ ಮಾಡಿದರೆ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸುವ ಅಂಶವನ್ನು ಈ ಕಾಯ್ದೆ ಒಳಗೊಂಡಿರಲಿದೆ. ಶೈಕ್ಷಣಿಕ ಸಂಸ್ಥೆಗಳು ಈ ಜನಾಂಗದ ವಿದ್ಯಾರ್ಥಿಗಳಿಗೆ ನೆರವು ನೀಡುವ ವ್ಯವಸ್ಥೆ ಹೊಂದುವುದು, ಕುಂದು ಕೊರತೆ ಪರಿಹಾರ ಸಮಿತಿ ರಚಿಸುವುದು ಕಡ್ಡಾಯವಾಗಲಿದೆ.
‘ವಿದ್ಯಾಸಿರಿ’ ಮೊತ್ತ 2000 ರೂ.ಗೆ ಹೆಚ್ಚಳ
ಮಡಿವಾಳ ಸಮುದಾಯದ ಮಕ್ಕಳು ಹೆಚ್ಚೆಚ್ಚು ಶಿಕ್ಷಣ ಪಡೆಯಬೇಕು ಎನ್ನುವ ಉದ್ದೇಶದಿಂದಲೇ ನಾವು ವಿದ್ಯಾಸಿರಿ ಯೋಜನೆ ಜಾರಿಗೆ ತಂದೆವು. ಈಗ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಎರಡು ಸಾವಿರಕ್ಕೆ ಹೆಚ್ಚಿಸಲಾಗುವುದು, ಜೊತೆಗೆ ಮಡಿವಾಳ ಸಮುದಾಯದ ಹಾಸ್ಟೆಲ್ ಗೆ ಅಗತ್ಯ ಸವಲತ್ತು ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.