Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಮನೆಯಲ್ಲಿರುವ ಮರದ `ಫರ್ನಿಚರ್’ ಗಳನ್ನು ಗೆದ್ದಲು ತಿನ್ನುತ್ತಿವೆಯೇ? ಇಲ್ಲಿದೆ ಸುಲಭ ಪರಿಹಾರ.!

06/04/2026 10:54 AM

BIG NEWS : ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ : ಸಚಿವ ಜಿ ಪರಮೇಶ್ವರ್ ಖಡಕ್ ವಾರ್ನಿಂಗ್!

06/04/2026 10:27 AM

ನಿಮ್ಮ ಮನೆಗೆ ಹೊಸ `PNG’ ಗ್ಯಾಸ್ ಸಂಪರ್ಕ ಪಡೆಯಬೇಕೇ? ಹಾಗಿದ್ದರೆ ಈ ದಾಖಲೆಗಳು ನಿಮ್ಮ ಬಳಿ ಇರಲಿ!

06/04/2026 10:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ರೈತರ `ಕೃಷಿ ಪಂಪ್ ಸೆಟ್ ಸಬ್ಸಿಡಿ’ಗೆ ವರ್ಷಕ್ಕೆ 19000 ಕೋಟಿ ರೂ : CM ಸಿದ್ದರಾಮಯ್ಯ
KARNATAKA

BIG NEWS : ರಾಜ್ಯದ ರೈತರ `ಕೃಷಿ ಪಂಪ್ ಸೆಟ್ ಸಬ್ಸಿಡಿ’ಗೆ ವರ್ಷಕ್ಕೆ 19000 ಕೋಟಿ ರೂ : CM ಸಿದ್ದರಾಮಯ್ಯ

By kannadanewsnow5712/06/2025 5:14 AM

ಚಿಕ್ಕಬಳ್ಳಾಪುರ: ರಾಜ್ಯದ ಜನರಿಗೆ ಗುಡ್ ನ್ಯೂಸ್ ಎನ್ನುವಂತೆ ಪಿಎಂ ಕುಸುಮ್-ಸಿ ಯೋಜನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿದ್ದಾರೆ. ಹೀಗಾಗಿ ಇನ್ಮುಂದೆ ಹಗಲಿನಲ್ಲೂ ರೈತರ ಪಂಪ್ ಸೆಟ್ ಗಳಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುತ್ತದೆ.

ಕೃಷಿ ಫೀಡರ್ ಗಳ ಸೌರೀಕರಣದ ಮೂಲಕ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ಪೂರೈಸುವ ಕುಸುಮ್- ಸಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಉದ್ಘಾಟಿಸಿದರು.

ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿ ಮತ್ತು ಚರಕಮಟ್ಟೇನಹಳ್ಳಿ ಗ್ರಾಮದ ಸುಮಾರು 60 ಎಕರೆ ಪ್ರದೇಶದಲ್ಲಿ 20 ಮೆ.ವ್ಯಾ. ಸಾಮರ್ಥ್ಯದಲ್ಲಿ ಸೋಲಾರ್ ಘಟಕ ಸ್ಥಾಪಿಸಲಾಗಿದೆ.

ಪ್ರಸ್ತುತ ರಾಜ್ಯದಲ್ಲಿ ಕುಸುಮ್- ಸಿ ಯೋಜನೆಯಡಿ ಸ್ಥಾಪಿಸಲಾಗಿರುವ ಅತಿ ದೊಡ್ಡ ಘಟಕವಿದು. ಹೀಗಾಗಿ ಗೌರಿಬಿದನೂರಿನಲ್ಲಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಇಂಧನ ಸಚಿವ ಕೆಜೆ ಜಾರ್ಜ್ ಉದ್ಘಾಟಿಸಿದರು. ಈ ಮೂಲಕ ರಾಜ್ಯ ಮಟ್ಟದ ಬೃಹತ್ ಯೋಜನೆಯೊಂದ್ನು ಉದ್ಘಾಟನೆಯಾದಂತೆ ಆಗಿದೆ.

ಏನಿದು ಕುಸುಮ್-ಸಿ ಯೋಜನೆ?

“ಕುಸುಮ್ – ಸಿ ಯೋಜನೆ ನಾಲ್ಕೈದು ವರ್ಷ ಹಿಂದೆಯೇ ಜಾರಿಯಾಗಿತ್ತಾದರೂ ರಾಜ್ಯದಲ್ಲಿ ಅನುಷ್ಠಾನಗೊಂಡಿರಲಿಲ್ಲ. ಆದರೆ, ಕೆ.ಜೆ.ಜಾರ್ಜ್ ಅವರು ಇಂಧನ ಸಚಿವರಾದ ಮೇಲೆ ಸೋಲಾರ್ ವಿದ್ಯುತ್ ಪಂಪ್ ಸೆಟ್ ಒದಗಿಸುವ ಕುಸುಮ್- ಬಿ ಮತ್ತು ಫೀಡರ್ ಸೋಲರೈಸೇಷನ್ ಮೂಲಕ ರೈತರ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸುವ ಕುಸುಮ್-ಸಿ ಯೋಜನೆಯನ್ನು ಗಂಭೀರವಾಗಿ ಪರಿಗಣಿಸಿದರು.

ರೈತರ ವಿದ್ಯುತ್ ಸಮಸ್ಯೆ ಬಗೆಹರಿಯಬೇಕಾದರೆ ಈ ಯೋಜನೆಗಳು ಅನಿವಾರ್ಯ ಎಂದು ಖುದ್ದಾಗಿ ಆಸಕ್ತಿ ವಹಿಸಿ ಜಾರಿಗೊಳಿಸಿದರು. ಅದರ ಪರಿಣಾಮ ಇಂದು ರಾಜ್ಯಾದ್ಯಂತ ಕುಸುಮ್- ಸಿ ಯೋಜನೆ ಅತ್ಯಂತ ವೇಗವಾಗಿ ಅನುಷ್ಠಾನಗೊಂಡಂತೆ ಆಗಿದೆ.

ಕುಸುಮ್- ಸಿ ಯೋಜನೆಯಡಿ ಟೆಂಡರ್ ನಲ್ಲಿ ಭಾಗವಹಿಸಿ ಯಶಸ್ವಿಯಾದ ಖಾಸಗಿ ಗುತ್ತಿಗೆದಾರರು ಸೋಲಾರ್ ವಿದ್ಯುತ್ ಉತ್ಪಾದನೆ ಮಾಡುತ್ತಾರೆ. ಒಂದು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ 4 ಎಕರೆ ಜಮೀನು ಬೇಕಾಗಿದ್ದು, ಸುಮಾರು 3.5ರಿಂದ 4 ಕೋಟಿ ರೂ. ವೆಚ್ಚವಾಗುತ್ತದೆ. ಈ ಪೈಕಿ 1.05 ಕೋಟಿ ರೂ. ಕೇಂದ್ರ ಸರ್ಕಾರದಿಂದ ಸಹಾಯಧನ ಸಿಗುತ್ತದೆ. ಸರ್ಕಾರ ಪ್ರತಿ ಮೆಗಾವ್ಯಾಟ್ ಗೆ ಗರಿಷ್ಠ 3.17 ರೂ.ವರೆಗೆ ಪಾವತಿಸಿ ಆ ವಿದ್ಯುತ್ ಖರೀದಿಸಿ ರೈತರ ಪಂಪ್ ಸೆಟ್ ಗಳಿಗೆ ಒದಗಿಸುತ್ತದೆ.

ವಿದ್ಯುತ್ ಉಪ ಕೇಂದ್ರಗಳ ಬಳಿ ಕುಸುಮ್-ಸಿ ಯೋಜನೆಯಡಿ ಸೋಲಾರ್ ಘಟಕಗಳನ್ನು ಸ್ಥಾಪಿಸಲಾಗುತ್ತದೆ. ಸರ್ಕಾರಿ ಭೂಮಿ ಲಭ್ಯವಿದ್ದರೆ ಅದನ್ನು ಉಚಿತವಾಗಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ. ಆದರೆ, ಆ ಭೂಮಿಗೆ ಪ್ರತಿ ಎಕರೆಗೆ 25 ಸಾವಿರ ರೂ. ಅನ್ನು ಖಾಸಗಿ ವಿದ್ಯುತ್ ಉತ್ಪಾದಕರು ಪಾವತಿಸಬೇಕು. ಆ ಮೊತ್ತವನ್ನು ಜಿಲ್ಲಾಧಿಕಾರಿಗಳ ಬಳಿ ಇಟ್ಟು ಉಪ ಕೇಂದ್ರ ಇರುವ ಗ್ರಾಮದ ಸರ್ಕಾರಿ ಶಾಲೆ, ಅಂಗನವಾಡಿಗಳ ಅಭಿವೃದ್ಧಿಗೆ ಬಳಸಿಕೊಳ್ಳಲಾಗುವುದು. ಖಾಸಗಿ ಭೂಮಿಯಾಗಿದ್ದರೆ, ವಿದ್ಯುತ್ ಉತ್ಪಾದನೆ ಗುತ್ತಿಗೆ ಪಡೆದ ಡೆವಲಪರ್‌ಗಳು ಗುತ್ತಿಗೆಗೆ ತೆಗೆದುಕೊಂಡು, ಭೂಮಾಲೀಕರಿಗೆ ಎಕರೆಗೆ ವಾರ್ಷಿಕ ಕನಿಷ್ಠ 25,000 ರೂ. ಪರಿಹಾರ ನೀಡುತ್ತಾರೆ.

ರೈತರಿಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ಪೂರೈಸುವ ಉದ್ದೇಶದಿಂದ ಕುಸುಮ್-ಸಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ನೀರಾವರಿಗೆ ವಿದ್ಯುತ್ ಪೂರೈಸುವ ಫೀಡರ್‌ಗಳ ಬಳಿ ಸೋಲಾರ್ ಘಟಕಗಳನ್ನು ಸ್ಥಾಪಿಸಿ, ವಿದ್ಯುತ್ ಉತ್ಪಾದಿಸಲಾಗುವುದು. ಬಳಿಕ ಅಲ್ಲಿಂದ ಫೀಡರ್‌ಗಳ ಮೂಲಕ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಒದಗಿಸಲಾಗುವುದು. ಸ್ಥಳೀಯವಾಗಿಯೇ ವಿದ್ಯುತ್ ಉತ್ಪಾದಿಸಿ ಪೂರೈಸುವುದರಿಂದ ಗುಣಮಟ್ಟದ ವಿದ್ಯುತ್ ಲಭ್ಯವಾಗುತ್ತದೆ. ಟ್ರಾನ್ಸ್‌ಫರ್ಮರ್‌ಗಳ ಮೇಲಿನ ಹೊರೆಯೂ ಇದರಿಂದ ತಗ್ಗುತ್ತದೆ. ಅಲ್ಲದೆ, ರೈತರು ಹಗಲು ವೇಳೆ ಸೋಲಾರ್ ವಿದ್ಯುತ್ ಬಳಸುವುದರಿಂದ ರಾತ್ರಿ ವೇಳೆ ಇತರೆ ಉದ್ದೇಶಗಳಿಗೆ ಹೆಚ್ಚುವರಿ ವಿದ್ಯುತ್ ಲಭ್ಯವಾಗುತ್ತದೆ.

ಮುಂದಿನ 3 ವರ್ಷದಲ್ಲಿ 60 ಸಾವಿರ ಮೆವ್ಯಾ ವಿದ್ಯುತ್ ಉತ್ಪಾದಿಸಿ ತೋರಿಸುತ್ತೇವೆ: ಸಿ.ಎಂ ಭರವಸೆ

ನಮ್ಮ ಸರ್ಕಾರ ಪ್ರತೀ ವರ್ಷ 19000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನೀಡುತ್ತಿದ್ದೇವೆ. ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷ ಈ ಯೋಜನೆ ಆರಂಭಿಸಲೇ ಇಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬಂದು ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಇಂಧನ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಮತ್ತು ಜಿಲ್ಲಾಡಳಿತ ಹಾಗೂ ಡಾ.ಎಚ್.ನರಸಿಂಹಯ್ಯ ಸಾಂಸ್ಕೃತಿಕ ಕೇಂದ್ರ, ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆಗೆ ನೀಡಿ, ‘ಲಿಪಿ-ಮನೆ’ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಇಂದು ನಾನು ಉದ್ಘಾಟನೆ ಮಾಡಿರುವ, 70 ಮೆವ್ಯಾ ವಿದ್ಯುತ್ ಉತ್ಪಾದನೆಯ ಸೌರೀಕರಣ ಘಟಕದಿಂದ ರೈತರಿಗೆ ಹಗಲಿನಲ್ಲೇ 3 ಫೇಸ್ ವಿದ್ಯುತ್ ಅನ್ನು 5 ಗಂಟೆಗಳ ಕಾಲ ಒದಗಿಸಲಾಗುತ್ತಿದೆ ಎಂದರು.

ಸಂಪೂರ್ಣ ಗುಣಮಟ್ಟದ ವಿದ್ಯುತ್ ರೈತರ ಪಂಪ್ ಸೆಟ್ ಗಳಿಗೆ ಸಿಗುತ್ತಿರುವುದರಿಂದ ವಿದ್ಯುತ್ ಅಪವ್ಯಯ ಆಗುವುದು ತಪ್ಪಿದೆ ಎಂದು ಮೆಚ್ಚುಗೆ ಸೂಚಿಸಿದರು.

ಹೆಸರಿಗೆ ಇದು ಕೇಂದ್ರದ ಯೋಜನೆ. ಆದರೆ ರಾಜ್ಯ ಸರ್ಕಾರ ಶೇ50 ರಷ್ಟು ಹಣ ಕೊಡುತ್ತದೆ. ಶೇ20 ರಷ್ಟು ಹಣ ಹೂಡಿಕೆದಾರರದ್ದು. ಕೇಂದ್ರ ಸರ್ಕಾರ ಕೊಡುವುದು ಕೇವಲ ಶೇ 30 ರಷ್ಟು ಹಣ ಮಾತ್ರ. ಆದರೂ ಇದಕ್ಕೆ ಕೇಂದ್ರದ ಯೋಜನೆ ಎಂದು ಹೆಸರಿಟ್ಟಿದ್ದಾರೆ ಎಂದರು.

ಒಂದು ಮೆವ್ಯಾ ವಿದ್ಯುತ್ ಉತ್ಪಾದನೆಗೆ 3 ಕೋಟಿ ಖರ್ಚಾದರೆ ಒಂದು ಕೋಟಿ ಮಾತ್ರ ಕೇಂದ್ರ ಸರ್ಕಾರದ್ದು. ಉಳಿದದ್ದಷ್ಟನ್ನೂ ನಾವು ಕೊಡ್ತೇವೆ ಎಂದು ವಿವರಿಸಿದರು.

ನಾವು ಅಧಿಕಾರಕ್ಕೆ ಬಂದು 4 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ ಹೆಚ್ಚಿಸಿದ್ದೇವೆ. ಈಗ ಒಟ್ಟು 30 ಸಾವಿರ ಮೆವ್ಯಾ ಉತ್ಪಾದನೆ ಆಗುತ್ತಿದೆ. ಮುಂದಿನ ಮೂರು ವರ್ಷಗಳಲ್ಲಿ 60 ಸಾವಿರ ಮೆವ್ಯಾ ಗೆ ಉತ್ಪಾದನೆ ಹೆಚ್ಚಿಸುವ ಗುರಿ ಹೊಂದಿದ್ದೇವೆ ಎಂದು ವಿವರಿಸಿದರು. ಆ ಮೂಲಕ ರೈತರ ಬಹು ದೊಡ್ಡ ಸಂಕಷ್ಟಕ್ಕೆ ಪರಿಹಾರ ಒದಗಿಸಿಕೊಡುತ್ತಿದ್ದೇವೆ ಎಂದರು.

ನಾವು ಚುನಾವಣೆಗೂ ಮೊದಲು ಕೊಟ್ಟಿದ್ದ ಭರವಸೆಗಳಲ್ಲಿ ಬಹುಪಾಲನ್ನು ಈಗಾಗಲೇ ಈಡೇರಿಸಿ ರಾಜ್ಯದ ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ್ದದ್ದೆಲ್ಲವನ್ನೂ ಈಡೇರಿಸಿ ನುಡಿದಂತೆ ನಡೆಯುವ ನಮ್ಮ ಪರಂಪರೆಯನ್ನು ಮುಂದುವರೆಸುತ್ತೇವೆ ಎಂದರು.

ಗೌರಿಬಿದನೂರಿಗೆ ಬಂಪರ್

ಮುಂದಿನ ಬಜೆಟ್ ನಲ್ಲಿ ಗೌರಿಬಿದನೂರಿಗೆ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಅಲಿಪುರ ಗ್ರಾಮ ಪಂಚಾಯ್ತಿಯನ್ನು ಪಟ್ಟಣ ಪಂಚಾಯ್ತಿಗೆ ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಭರವಸೆ ನೀಡಿದರು.

ಶಾಸಕ ಪುಟ್ಟಸ್ವಾಮಿಗೌಡರು ಮತ್ತು ಶಿವಶಂಕರ ರೆಡ್ಡಿಯವರು ಮುಂದಿಟ್ಟಿರುವ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದರು.

BIG NEWS: Rs 19000 crore per year for state farmers' 'agricultural pump set subsidy': CM Siddaramaiah
Share. Facebook Twitter LinkedIn WhatsApp Email

Related Posts

ನಿಮ್ಮ ಮನೆಯಲ್ಲಿರುವ ಮರದ `ಫರ್ನಿಚರ್’ ಗಳನ್ನು ಗೆದ್ದಲು ತಿನ್ನುತ್ತಿವೆಯೇ? ಇಲ್ಲಿದೆ ಸುಲಭ ಪರಿಹಾರ.!

06/04/2026 10:54 AM1 Min Read

BIG NEWS : ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ : ಸಚಿವ ಜಿ ಪರಮೇಶ್ವರ್ ಖಡಕ್ ವಾರ್ನಿಂಗ್!

06/04/2026 10:27 AM1 Min Read

ನಿಮ್ಮ ಮನೆಗೆ ಹೊಸ `PNG’ ಗ್ಯಾಸ್ ಸಂಪರ್ಕ ಪಡೆಯಬೇಕೇ? ಹಾಗಿದ್ದರೆ ಈ ದಾಖಲೆಗಳು ನಿಮ್ಮ ಬಳಿ ಇರಲಿ!

06/04/2026 10:10 AM1 Min Read
Recent News

ನಿಮ್ಮ ಮನೆಯಲ್ಲಿರುವ ಮರದ `ಫರ್ನಿಚರ್’ ಗಳನ್ನು ಗೆದ್ದಲು ತಿನ್ನುತ್ತಿವೆಯೇ? ಇಲ್ಲಿದೆ ಸುಲಭ ಪರಿಹಾರ.!

06/04/2026 10:54 AM

BIG NEWS : ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ : ಸಚಿವ ಜಿ ಪರಮೇಶ್ವರ್ ಖಡಕ್ ವಾರ್ನಿಂಗ್!

06/04/2026 10:27 AM

ನಿಮ್ಮ ಮನೆಗೆ ಹೊಸ `PNG’ ಗ್ಯಾಸ್ ಸಂಪರ್ಕ ಪಡೆಯಬೇಕೇ? ಹಾಗಿದ್ದರೆ ಈ ದಾಖಲೆಗಳು ನಿಮ್ಮ ಬಳಿ ಇರಲಿ!

06/04/2026 10:10 AM

BREAKING : ಬೆಂಗಳೂರಲ್ಲಿ ನಟ ನಿರಂಜನ್ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ ನಡೆಸಿದ ದುಷ್ಕರ್ಮಿಗಳು : ‘FIR’ ದಾಖಲು!

06/04/2026 10:10 AM
State News
KARNATAKA

ನಿಮ್ಮ ಮನೆಯಲ್ಲಿರುವ ಮರದ `ಫರ್ನಿಚರ್’ ಗಳನ್ನು ಗೆದ್ದಲು ತಿನ್ನುತ್ತಿವೆಯೇ? ಇಲ್ಲಿದೆ ಸುಲಭ ಪರಿಹಾರ.!

By kannadanewsnow5706/04/2026 10:54 AM KARNATAKA 1 Min Read

ಹೊಸ ಪೀಠೋಪಕರಣಗಳನ್ನು ಖರೀದಿಸುವುದು ಎಷ್ಟು ಸಂಭ್ರಮದ ವಿಷಯವೋ, ಅವುಗಳನ್ನು ಗೆದ್ದಲುಗಳಿಂದ ರಕ್ಷಿಸುವುದು ಅಷ್ಟೇ ಸವಾಲಿನ ಕೆಲಸ. ಗೆದ್ದಲುಗಳು ಮರವನ್ನು ಒಳಗಿನಿಂದಲೇ…

BIG NEWS : ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ : ಸಚಿವ ಜಿ ಪರಮೇಶ್ವರ್ ಖಡಕ್ ವಾರ್ನಿಂಗ್!

06/04/2026 10:27 AM

ನಿಮ್ಮ ಮನೆಗೆ ಹೊಸ `PNG’ ಗ್ಯಾಸ್ ಸಂಪರ್ಕ ಪಡೆಯಬೇಕೇ? ಹಾಗಿದ್ದರೆ ಈ ದಾಖಲೆಗಳು ನಿಮ್ಮ ಬಳಿ ಇರಲಿ!

06/04/2026 10:10 AM

BREAKING : ಬೆಂಗಳೂರಲ್ಲಿ ನಟ ನಿರಂಜನ್ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ ನಡೆಸಿದ ದುಷ್ಕರ್ಮಿಗಳು : ‘FIR’ ದಾಖಲು!

06/04/2026 10:10 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.