Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: KSRTC ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

13/03/2026 4:50 PM

ಕನ್ನಡ ಚಳವಳಿಗಾರರ ಮೇಲಿನ ಕ್ರಿಮಿನಲ್ ಮೊಕದ್ದಮೆ ವಾಪಸ್ ಪಡೆಯಿರಿ: ಸರ್ಕಾರಕ್ಕೆ MLC ರಮೇಶ್ ಬಾಬು ಆಗ್ರಹ

13/03/2026 4:46 PM

ಸಮುದಾಯಕ್ಕೊಂದು ಆಸ್ಪತ್ರೆಯಲ್ಲ, ಜನಸಂಖ್ಯೆ ಆಧಾರದಲ್ಲಿ ನಿರ್ಮಾಣ: ಸಚಿವ ದಿನೇಶ್ ಗುಂಡೂರಾವ್

13/03/2026 4:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಮೈಕ್ರೋ ಫೈನಾನ್ಸ್’ ನಿಂದ 2 ಲಕ್ಷ ರೂ. ಮಾತ್ರ ಸಾಲ : `RBI’ನ ಈ ಮಾರ್ಗಸೂಚಿ ಪಾಲನೆ ಕಡ್ಡಾಯ.!
KARNATAKA

BIG NEWS : `ಮೈಕ್ರೋ ಫೈನಾನ್ಸ್’ ನಿಂದ 2 ಲಕ್ಷ ರೂ. ಮಾತ್ರ ಸಾಲ : `RBI’ನ ಈ ಮಾರ್ಗಸೂಚಿ ಪಾಲನೆ ಕಡ್ಡಾಯ.!

By kannadanewsnow5730/01/2025 6:58 AM

ಫೈನಾನ್ಸ್, ಮೈಕ್ರೋ ಫೈನಾನ್ಸ್ ಮತ್ತು ಫಾನ್ ಬ್ರೋಕರ್‍ಗಳು ಭಾರತೀಯ ರಿಸರ್ವ್ ಬ್ಯಾಂಕ್‍ನ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮೈಕ್ರೋ ಫೈನಾನ್ಸ್ ಮತ್ತು ಫಾನ್ ಬ್ರೋಕರ್‍ಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆರ್‍ಬಿಐ ಮಾರ್ಗಸೂಚಿ ಪ್ರಕಾರ 2 ಲಕ್ಷ ರೂ.ವರೆಗೆ ಮಾತ್ರ ಸಾಲ ನೀಡಬಹುದಾಗಿದೆ. ಆದರೆ ಸಾಲ ನೀಡುವಾಗ ಸಾಲ ಪಡೆಯುವವರು ಸಾಲ ಮರುಪಾವತಿ ಮಾಡುವ ಸಾಮಥ್ರ್ಯ ಇದೆಯೇ ಎಂದು ಗಮನಿಸಿ ಸಾಲವನ್ನು ನೀಡಬೇಕು. ಅದನ್ನು ಬಿಟ್ಟು ಕಿರುಕುಳ ನೀಡುವುದು ಸರಿಯಲ್ಲ ಎಂದು ಹೇಳಿದರು.

ಸಾರ್ವಜನಿಕರಿಗೆ ತೊಂದರೆಯಾಗದಂತೆ ಗಮನಹರಿಸುವುದು ಎಲ್ಲರ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ತಾವೂ ಸಹ(ಪೈನಾನ್ಸ್ ಕಂಪನಿಗಳು) ಕಾನೂನು ನಿಯಮಾನುಸಾರ ನಡೆದುಕೊಳ್ಳಬೇಕು. ಅದು ಬಿಟ್ಟು ದೌರ್ಜನ್ಯ ನಡೆಯುವುದು ಕಂಡುಬಂದರೆ ನಿಯಮಾನುಸಾರ ಕ್ರಮ ಜರುಗಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ಎಚ್ಚರಿಸಿದರು.

ಪ್ರತಿಯೊಬ್ಬರಲ್ಲಿಯೂ ಆರ್ಥಿಕ ಶಿಸ್ತು ಇರಬೇಕು. ಅದನ್ನು ಬಿಟ್ಟು ಹೆಚ್ಚುವರಿ ಸಾಲವನ್ನು ನೀಡುವುದು. 5 ಗಂಟೆಯ ನಂತರ ಸಾಲ ವಸೂಲಾತಿ ಮಾಡಲು ಹೋಗುವುದು. ಇಂತಹ ಪ್ರಕರಣಗಳು ವರದಿಯಾಗಬಾರದು. ಎಲ್ಲರ ರಕ್ಷಣೆ ಅತ್ಯಗತ್ಯ. ಆ ನಿಟ್ಟಿನಲ್ಲಿ ನಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ನೀಡಿದರು.

ಸಾಲ ವಸೂಲಾತಿ ಮಾಡುವಾಗ ಹೆದರಿಸಬಾರದು. ಹೆದರಿಸುವುದು ಕಂಡುಬಂದಲ್ಲಿ ಸೋ-ಮೋಟೋ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದರು.

ದಬ್ಬಾಳಿಕೆ ಮಾಡಿ ವಸೂಲಾತಿ ಮಾಡಬಾರದು. ಪ್ರತಿಯೊಬ್ಬರ ನಾಗರಿಕ ರಕ್ಷಣೆ ಅತಿಮುಖ್ಯ. ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರು ಗಂಭೀರವಾಗಿ ಪರಿಗಣಿಸಿದ್ದಾರೆ. ಸಾಲ ಪಡೆಯುವವರಿಗೆ ಲೋನ್ ಶೀಟ್ ನೀಡಬೇಕು. ಕಾನೂನು ಚೌಕಟ್ಟಿನಲ್ಲಿರಬೇಕು. ಎಂದು ವಿವರಿಸಿದರು.

ಆರ್‍ಬಿಐ ಮಾರ್ಗಸೂಚಿಯನ್ನು ದಪ್ಪ ಅಕ್ಷರದಲ್ಲಿ ಕನ್ನಡ ಭಾಷೆಯಲ್ಲಿ ಮುದ್ರಿಸಿ ಅಳವಡಿಸಬೇಕು. ಸಾಲದ ಬಡ್ಡಿ ಬಗ್ಗೆ ಮಾಹಿತಿ ಇರಬೇಕು. ಜನರಿಗೆ ತೊಂದರೆ ನೀಡಬಾರದು, ಕಾಲಾವಕಾಶ ನೀಡಬೇಕು ಎಂದರು.

ಸಾಲ ಪಡೆದು ಫೈನಾನ್ಸ್ ಕಂಪನಿಗಳ ವಿರುದ್ದ ತಿರುಗಿ ಬೀಳುವುದು ಕಂಡುಬಂದರೂ ಸಹ ಸಹಾಯವಾಣಿಗೆ ಕರೆ ಮಾಡಬಹುದು. ಒಟ್ಟಾರೆ ಸಮಾಜದಲ್ಲಿ ಶಾಂತಿಯುತ ಬದುಕು ನಡೆಸಬೇಕು. ಎಲ್ಲರ ರಕ್ಷಣೆಯು ಆಡಳಿತದ ಅತೀಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿ ಅವರು ನುಡಿದರು.

ಜಿಲ್ಲೆಯಲ್ಲಿ ನೋಂದಣಿಯಾಗಿರುವ ಮತ್ತು ನೋಂದಣಿಯಾಗದಿರುವ ಮೈಕ್ರೋ ಪೈನಾನ್ಸ್ ಕಂಪನಿಗಳ ಮಾಹಿತಿ ಒದಗಿಸುವಂತೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚಿಸಿದರು.

ಸಾರ್ವಜನಿಕರು ಮೈಕ್ರೋ ಫೈನಾನ್ಸ್ ಕಿರುಕುಳ ಸಂಬಂಧಿತ ದೂರುಗಳನ್ನು ಪೊಲೀಸ್ ಕಂಟ್ರೋಲ್ ರೂಮ್ ಸಂಖ್ಯೆ 08272-228330 ಅಥವಾ ಜಿಲ್ಲಾಧಿಕಾರಿಗಳ ಕಚೇರಿಯ ಕಂಟ್ರೋಲ್ ರೂಮ್ ಸಂಖ್ಯೆ 08272-221077 ಗೆ ನೀಡಬಹುದು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮಾತನಾಡಿ ಒಬ್ಬರಿಗೆ ಒಂಬತ್ತು ಕಂಪನಿಗಳು ಸಾಲ ನೀಡಿರುವುದು ಕಂಡುಬಂದಿದೆ. ಸಾಲ ನೀಡುವಾಗ ಪರಿಶೀಲಿಸಬೇಕು. ಅದನ್ನು ಬಿಟ್ಟು ದೌರ್ಜನ್ಯ ನಡೆಸಿದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮೈಕ್ರೋ ಪೈನಾನ್ಸ್ ಕಂಪನಿಯ ಪ್ರತಿನಿಧಿಯೊಬ್ಬರು ಸಾಲ ಪಡೆದವರು ಸಾಲ ವಾಪಸ್ಸು ನೀಡಲು ಮುಂದೆ ಬರುತ್ತಿಲ್ಲ. ನಮ್ಮ ಮೇಲೆಯೇ(ಪೈನಾನ್ಸ್ ಕಂಪನಿಗಳ ಮೇಲೆ) ದೌರ್ಜನ್ಯ ಮಾಡುತ್ತಿದ್ದಾರೆ. ಈ ಬಗ್ಗೆ ಗಮನಹರಿಸಬೇಕು ಎಂದು ಮನವಿ ಮಾಡಿದರು.

ಪ್ರೊ.ಐಪಿಎಸ್ ಅಧಿಕಾರಿ ಬೆನಕ ಪ್ರಸಾದ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಇದ್ದರು. ಇನ್ನಷ್ಟು ಮಾಹಿತಿ:-ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳಿಂದ ಆಗುತ್ತಿರುವ ಕಿರುಕುಳಗಳ ಕುರಿತು ಮುಖ್ಯಮಂತ್ರಿ ಅವರು ಜಿಲ್ಲಾಮಟ್ಟದಲ್ಲಿ ನಿಗಾವಹಿಸಲು ನಿರ್ದೇಶನ ನೀಡಿದ್ದಾರೆ. ಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳು ಕಾರ್ಯ ನಿರ್ವಹಿಸುತ್ತಿರುವ ವಿಚಾರದ ಬಗ್ಗೆ ಚರ್ಚಿಸಲಾಗಿರುತ್ತದೆ. ಈ ಸಭೆಯಲ್ಲಿ ಚರ್ಚಿಸಿದಂತೆ ಈ ಕೆಳಕಂಡ ಅಂಶಗಳನ್ನು ಕಡ್ಡಾಯವಾಗಿ ಪಾಲಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.

ಕಾನೂನು ಬಾಹಿರವಾಗಿ ಸಾಲ ವಸೂಲಾತಿ ಮಾಡುವಂತಿಲ್ಲ. ಯಾವುದೇ ಕಾರಣಕ್ಕೂ ಸಾಲಗಾರರ ಮೇಲೆ ಬಾಕಿ ವಸೂಲಾತಿಗಾಗಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಒತ್ತಡ ಹೇರತಕ್ಕದ್ದಲ್ಲ. ಸಾಲ ಬಾಕಿ ವಸೂಲಾತಿ ನೆಪದಡಿ ಸಾಲಗಾರರ ಮನೆ/ಕೌಂಪೌಂಡ್/ಗೋಡೆ ಇತ್ಯಾದಿಗಳ ಮೇಲೆ ಗೋಡೆಬರಹ ಬರೆಯುವುದು / ಅಂಟಿಸುವುದು ಮುಂತಾದ ಕಾರ್ಯ ನಡೆಸತಕ್ಕದ್ದಲ್ಲ. ಸಾಲ ವಸೂಲಾತಿ ವಿಚಾರವಾಗಿ ದೌರ್ಜನ್ಯ / ಅಸಭ್ಯ ವರ್ತನೆ ತೋರುವುದು, ಅಥವಾ ಬಲತ್ಕಾರವಾಗಿ ಚರಾಸ್ಥಿ / ಸ್ಥಿರಾಸ್ಥಿ ಜಪ್ತಿ ಮಾಡುವಂತಿಲ್ಲ. ನೋಂದಣಿಯಾಗಿರದ ಯಾವುದೇ ಮೈಕ್ರೋ ಪೈನಾನ್ಸ್ ಕಂಪೆನಿಗಳು ಕಾರ್ಯಾಚರಿಸುವಂತಿಲ್ಲ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನಿಗಧಿಪಡಿಸಿದ ಗರಿಷ್ಟ ಬಡ್ಡಿದರಕ್ಕಿಂತ ಹೆಚ್ಚಿನ ಬಡ್ಡಿದರ ವಿಧಿಸತಕ್ಕದ್ದಲ್ಲ/ ವಸೂಲಿಸತಕ್ಕದ್ದಲ್ಲ.

ಮೈಕ್ರೋ ಫೈನಾನ್ಸ್ ಕಂಪೆನಿಗಳು ಮೇಲೆ ತಿಳಿಸಿದಂತೆ ಅಥವಾ ಇನ್ಯಾವುದೇ ರೀತಿಯಿಂದ ಸಾಲಗಾರರಿಗೆ ಕಿರುಕುಳ ನೀಡಿದಲ್ಲಿ, ಸಾಲಗಾರರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದಲ್ಲಿ ಅಥವಾ ಕಿರುಕುಳ ನೀಡುವುದು ಕಂಡುಬಂದಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

BIG NEWS : `ಮೈಕ್ರೋ ಫೈನಾನ್ಸ್' ನಿಂದ 2 ಲಕ್ಷ ರೂ. ಮಾತ್ರ ಸಾಲ : `RBI'ನ ಈ ಮಾರ್ಗಸೂಚಿ ಪಾಲನೆ ಕಡ್ಡಾಯ.! BIG NEWS: Rs 2 lakh from 'Micro Finance' Only loan: It is mandatory to follow this guidelines of RBI.
Share. Facebook Twitter LinkedIn WhatsApp Email

Related Posts

BREAKING: KSRTC ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

13/03/2026 4:50 PM1 Min Read

ಕನ್ನಡ ಚಳವಳಿಗಾರರ ಮೇಲಿನ ಕ್ರಿಮಿನಲ್ ಮೊಕದ್ದಮೆ ವಾಪಸ್ ಪಡೆಯಿರಿ: ಸರ್ಕಾರಕ್ಕೆ MLC ರಮೇಶ್ ಬಾಬು ಆಗ್ರಹ

13/03/2026 4:46 PM1 Min Read

ಸಮುದಾಯಕ್ಕೊಂದು ಆಸ್ಪತ್ರೆಯಲ್ಲ, ಜನಸಂಖ್ಯೆ ಆಧಾರದಲ್ಲಿ ನಿರ್ಮಾಣ: ಸಚಿವ ದಿನೇಶ್ ಗುಂಡೂರಾವ್

13/03/2026 4:39 PM1 Min Read
Recent News

BREAKING: KSRTC ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

13/03/2026 4:50 PM

ಕನ್ನಡ ಚಳವಳಿಗಾರರ ಮೇಲಿನ ಕ್ರಿಮಿನಲ್ ಮೊಕದ್ದಮೆ ವಾಪಸ್ ಪಡೆಯಿರಿ: ಸರ್ಕಾರಕ್ಕೆ MLC ರಮೇಶ್ ಬಾಬು ಆಗ್ರಹ

13/03/2026 4:46 PM

ಸಮುದಾಯಕ್ಕೊಂದು ಆಸ್ಪತ್ರೆಯಲ್ಲ, ಜನಸಂಖ್ಯೆ ಆಧಾರದಲ್ಲಿ ನಿರ್ಮಾಣ: ಸಚಿವ ದಿನೇಶ್ ಗುಂಡೂರಾವ್

13/03/2026 4:39 PM

ಇರಾಕ್‌ನಲ್ಲಿ ಅಮೆರಿಕ ಸೇನಾ ವಿಮಾನ ಪತನ: ನಾಲ್ವರು ಸಾವು | US military aircraft crash

13/03/2026 4:27 PM
State News

BREAKING: KSRTC ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

By kannadanewsnow0913/03/2026 4:50 PM KARNATAKA 1 Min Read

ದಕ್ಷಿಣ ಕನ್ನಡ: ಶಿರಾಡಿಘಾಟ್ ನಲ್ಲಿ ಕೆ ಎಸ್ ಆರ್ ಟಿ ಸಿ ರಾಜಹಂಸ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದಂತ ಇಬ್ಬರು ಸ್ಥಳದಲ್ಲೇ…

ಕನ್ನಡ ಚಳವಳಿಗಾರರ ಮೇಲಿನ ಕ್ರಿಮಿನಲ್ ಮೊಕದ್ದಮೆ ವಾಪಸ್ ಪಡೆಯಿರಿ: ಸರ್ಕಾರಕ್ಕೆ MLC ರಮೇಶ್ ಬಾಬು ಆಗ್ರಹ

13/03/2026 4:46 PM

ಸಮುದಾಯಕ್ಕೊಂದು ಆಸ್ಪತ್ರೆಯಲ್ಲ, ಜನಸಂಖ್ಯೆ ಆಧಾರದಲ್ಲಿ ನಿರ್ಮಾಣ: ಸಚಿವ ದಿನೇಶ್ ಗುಂಡೂರಾವ್

13/03/2026 4:39 PM

ಇದು ‘ಕ್ಯಾನ್ಸರ್ ಪೀಡಿತ ಜರೀನಾ ಬೇಗಂ’ ಎಂಬ ಸಂತ್ರಸ್ತೆಯ ಹೋರಾಟದ ಕಣ್ಣೀರಿನ ಕತೆ

13/03/2026 4:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.