Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಿಡ್ನಿ ವೈಫಲ್ಯ ಆಗುವವರೆಗೂ ಕಾಯ್ಬೇಡಿ, ಈ 4 ಪರೀಕ್ಷೆಗಳು ನಿಮ್ಮ ಜೀವ ಉಳಿಸ್ಬೋದು!

24/12/2025 10:03 PM

Dhanushkodi Tragedy : ಇಡೀ ರೈಲು ಸಮುದ್ರದಲ್ಲಿ ಮುಳುಗಿತು.! ಭಾರತದ ಅತಿ ದೊಡ್ಡ ದುರಂತಕ್ಕೆ 59 ವರ್ಷ!

24/12/2025 9:49 PM

BIG NEWS : ಬ್ಯಾಲೆಟ್ ಪೇಪರ್ ಚುನಾವಣೆಯಲ್ಲೂ ಬಿಜೆಪಿ ಗೆದ್ದಿದೆ : ಕಾಂಗ್ರೆಸ್ ಗೆ ಬಿವೈ ವಿಜಯೇಂದ್ರ ತಿರುಗೇಟು

24/12/2025 9:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ 1.62 ಲಕ್ಷ ಯುವಕ-ಯುವತಿಯರಿಗೆ `ಯುವನಿಧಿ ಯೋಜನೆಯಡಿ 216 ಕೋಟಿ ರೂ. ಖಾತೆಗೆ ಜಮೆ : CM ಸಿದ್ದರಾಮಯ್ಯ
KARNATAKA

BIG NEWS : ರಾಜ್ಯದಲ್ಲಿ 1.62 ಲಕ್ಷ ಯುವಕ-ಯುವತಿಯರಿಗೆ `ಯುವನಿಧಿ ಯೋಜನೆಯಡಿ 216 ಕೋಟಿ ರೂ. ಖಾತೆಗೆ ಜಮೆ : CM ಸಿದ್ದರಾಮಯ್ಯ

By kannadanewsnow5706/01/2025 5:51 AM

ದಾವಣಗೆರೆ : ದೇಶ ನನಗೇನು ಕೊಡ್ತು ಅಲ್ಲ, ನಾನು ದೇಶಕ್ಕಾಗಿ ನನ್ನ ಕರ್ತವ್ಯವೇನು ಎಂದು ಯುವಕರು ಅರಿತುಕೊಳ್ಳಬೇಕು. ಅನೇಕ ಶಕ್ತಿಗಳು ಧರ್ಮ ಹಾಗೂ ಜಾತಿ ಹೆಸರಿನಲ್ಲಿ ಶಾಂತಿಗೆ ಭಂಗ ತರುವ ಕೆಲಸ ಮಾಡುತ್ತಿವೆ. ಯಾವ ಧರ್ಮಕ್ಕೂ ವಿಶೇಷ ಸ್ಥಾನಮಾನ ಇಲ್ಲ, ಎಲ್ಲರಿಗೂ ಸಂವಿಧಾನ ಒಂದೇ, ಆದ್ದರಿಂದ ಸಂವಿಧಾನ ರಕ್ಷಿಸುವ ಕೆಲಸ ಯುವಕರು ಮಾಡಬೇಕಾಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಯುವಜನತೆಗೆ ಕರೆ ನೀಡಿದರು.

ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಯೋಗದಲ್ಲಿ ಬಾಪೂಜಿ ಎಂಬಿಎ ಮೈದಾನದಲ್ಲಿ ಆಯೋಜಿಸಲಾದ ರಾಜ್ಯ ಮಟ್ಟದ ಯುವ ಜನೋತ್ಸವವನ್ನು ನಗಾರಿ ಬಾರಿಸಿ ಹಾಗೂ ಹೊಂಬಾಳೆ ಬಿಡಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ಕೊಟ್ಟ ಸಂವಿಧಾನದಿಂದ ಇಂದು ಎಲ್ಲರೂ ಶಿಕ್ಷಣ ಪಡೆದು ಉದ್ಯೋಗ ಗಳಿಸಿ, ಗೌರವ ಮತ್ತು ಸಮಾನತೆಯಿಂದ ಬಾಳಲು ಸಾಧ್ಯವಾಗಿದೆ. ಸಂವಿಧಾನ ಇದ್ದುದರಿಂದಲೇ ನಾನು ಮುಖ್ಯಮಂತ್ರಿ ಆಗಲು ಸಾಧ್ಯವಾಯಿತು. ಸಂವಿಧಾನ ರಕ್ಷಿಸಿ, ಉಳಿಸುವುದು ನಮ್ಮಲ್ಲರ ಕರ್ತವ್ಯವಾಗಿದೆ. ಪ್ರಜಾಪ್ರಭುತ್ವ ಒಪ್ಪಿ ದೇಶದಲ್ಲಿ ಆಡಳಿತ ನಡೆಸಲಾಗುತ್ತಿದೆ. ಪ್ರಜಾಪ್ರಭುತ್ವ ಯಶಸ್ವಿಯಾಗಬೇಕಾದರೆ, ಎಲ್ಲಾ ವ್ಯಕ್ತಿಗಳಿಗೆ ಆರ್ಥಿಕ, ರಾಜಕೀಯ ಹಾಗೂ ಸಾಮಾಜಿಕ ಸಮಾನತೆ ದೊರಕಬೇಕು ಎಂಬುವುದು ಡಾ.ಅಂಬೇಡ್ಕರ್ ಆಶಯವಾಗಿತ್ತು. ಸಂವಿಧಾನ ಈ ಸಾರ ಪ್ರತಿಯೊಬ್ಬರಿಗೂ ಅರ್ಥವಾಗಬೇಕು. ಇದರ ಹಿನ್ನಲೆಯಲ್ಲಿ ಸರ್ಕಾರ ಪ್ರತಿ ಶಾಲೆಯಲ್ಲಿ ಸಂವಿಧಾನ ಓದು ಕಾರ್ಯಕ್ರಮ ಜಾರಿ ಮಾಡಿದೆ. ಮಕ್ಕಳಿಗೆ ಸಂವಿಧಾನದ ಪೀಠಿಕೆ ಬಗ್ಗೆ ಪರಿಚಯ ಮಾಡಿಕೊಡಲಾಗುತ್ತಿದೆ. ಅಂಬೇಡ್ಕರ್ ಅವರ ಆರ್ಥಿಕ ಸಮಾನತೆಯ ಆಶಯವನ್ನು ಈಡೇರಿಸುವ ದೃಷ್ಟಿಯಿಂದ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಹೇಳಿದರು.

ದೇಶದಲ್ಲಿ ಶೇ.35 ರಷ್ಟು ಯುವ ಜನರಿದ್ದಾರೆ, ಯುವಜನರೇ ನಮ್ಮ ದೇಶದ ಆಸ್ತಿ. ಪ್ರತಿಯೊಬ್ಬ ಯುವಕ, ಯವತಿ ಸಮಾಜಮುಖಿ ಮನೋಭಾವ ಬೆಳಸಿಕೊಳ್ಳಬೇಕು. ವಿವಿಧ ಭಾμÉ, ಧರ್ಮ, ಸಂಸ್ಕøತಿ ಇವರುವುದರಿಂದ ವೀದ್ಯಾರ್ಥಿಗಳಿಗೆ ವೈಚಾರಿಕ ಹಾಗೂ ವೈಜ್ಞಾನಿಕ ಶಿಕ್ಷಣ ಅತ್ಯಗತ್ಯವಾಗಿದೆ. ಯುವಜನರು ದೇಶವನ್ನು ಮುಂದೆ ಕೊಂಡೊಯ್ಯಲು ಹಾಗೂ ಬದಲಾವಣೆ ತರುವ ಪ್ರಯತ್ನ ಮಾಡಬೇಕು. ಭವಿಷ್ಯ ನಿರ್ಮಾಣ ಮಾಡುವವರು ಯುವಜನರು, ಇದನ್ನು ಮನಗಂಡಿದ್ದ ಸ್ವಾಮಿ ವಿವೇಕಾನಂದರು ‘ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ’ ಎಂದು ಯುವ ಜನರಿಗೆ ಕರೆ ನೀಡಿದರು. ಯುವಕರಿಗೆ ಜೀವನದಲ್ಲಿ ಗುರಿ ಇರಬೇಕು. ಇದನ್ನು ಸಾಧಿಸಲು ಪರಿಶ್ರಮ ಪಡಬೇಕು. ಆಗ ಮಾತ್ರ ಗುರಿ ಸಾಧನೆ ಮಾಡಬಹುದು. ಯುವ ಜನತೆ ದೇಶಕ್ಕೆ ಸಂಪತ್ತಾಗಬೇಕು, ಹೊರೆಯಾಗಬಾರದು. ರಾಜ್ಯದಲ್ಲಿ 1.62 ಲಕ್ಷ ಯವಕ ಯುವತಿಯರಿಗೆ ಯುವನಿಧಿ ಯೋಜನೆಯಡಿ ರೂ.216 ಕೋಟಿ ನಿರುದ್ಯೋಗ ಭತ್ಯೆಯನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ಇದರೊಂದಿಗೆ ಯುವ ಜನರಿಗೆ ಕೌಶಲ್ಯ ತರಬೇತಿ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.
ಇದೇ ವೇಳೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸಂವಿಧಾನ ಬಗ್ಗೆ ಪರಿಚಯಿಸುವ ಏಙಅ (ಏಟಿoತಿ ಥಿouಡಿ ಛಿoಟಿsಣiಣuಣioಟಿ) ಚಾಲನೆ ನೀಡಿದರು. ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಹಾಗೂ ರಾಜ್ಯ ಎನ್.ಎನ್.ಎಸ್ ಘಟಕದ ಕ್ಯಾಲೆಂಡರ್‍ನ್ನು ಬಿಡುಗಡೆ ಮಾಡಿದರು.

ಸುಳ್ಳು ಸುದ್ದಿ ಹಾಗೂ ಸಮೂಹ ಸನ್ನಿಯಿಂದ ದೂರವಿರಿ;
ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಪ್ರಾಸ್ತಾವಿಕವಾಗಿ ಮಾತನಾಡಿ, ದೇಶದ ಜನಸಂಖ್ಯೆಯಲ್ಲಿ ಶೇ.35 ರಷ್ಟು ಯುವಜನರಿದ್ದಾರೆ. ಕೆಲ ದುಷ್ಟ ಶಕ್ತಿಗಳು ಸಾಮಾಜಿಕ ಜಾಲತಾಣ ಮೂಲಕ ದೇಶದ ಯುವ ಜನತೆಯನ್ನು ದಾರಿ ತಪ್ಪಿಸುತ್ತಿದ್ದಾರೆ. ಯುವ ಜನತೆ ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸುದ್ದಿಗಳನ್ನು ಒರೆಗೆ ಹಚ್ಚಿ, ಸತ್ಯಾಸತ್ಯೆಯನ್ನು ತಿಳಿದುಕೊಳ್ಳಬೇಕು. ದ್ವೇಷವನ್ನು ಬಿತ್ತುವ ವಿಚಾರ ಹಾಗೂ ಸಮೂಹ ಸನ್ನಿಯಿಂದ ದೂರವಿರಬೇಕು. ದೇಶದ ಬಹುತ್ವ ಅರ್ಥೈಸಿಕೊಳ್ಳಬೇಕು ಎಂದು ಯುವಕರಿಗೆ ಸಲಹೆ ನೀಡಿದರು.

ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವನಾಗಿದ್ದಾಗ ದಾವಣಗೆರೆಯಲ್ಲಿ ಪ್ರಥಮವಾಗಿ ಯುವಜನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. 2 ದಶಕಗಳ ತರುವಾಯ ಮತ್ತೊಮ್ಮೆ ರಾಜ್ಯಮಟ್ಟದ ಯುವಜನೋತ್ಸವ ಆಯೋಜಿಸಿರುವುದು ಸಂತಸ ತಂದಿದೆ. ಕ್ರೀಡಾ ಸಚಿವನಾಗಿದ್ದಾಗ ದಾವಣಗೆರೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ಈಜುಕೋಳ, ಟೆನ್ನಿಸ್, ಬಾಸ್ಕೆಟ್‍ಬಾಲ್ ಕ್ರೀಡಾಂಗಣಗಳನ್ನು ನಿರ್ಮಿಸಿದ್ದೆ. ಸದ್ಯ ರಾಜ್ಯ ಸರ್ಕಾರದಿಂದ ಸಂಸದ ನೆರವಿನಿಂದ ಕ್ರೀಡಾ ಸಂಕೀರ್ಣ ನಿರ್ಮಿಸಲಾಗುತ್ತಿದೆ. ಜೆ.ಹೆಚ್.ಪಾಟೀಲ್ ನಗರದಲ್ಲಿ ಕ್ರಿಕೇಟ್ ಕ್ರೀಡಾಂಗಣ ನಿರ್ಮಾಣ ಕಾಮಗಾರಿ ಅಂತಿಮ ಹಂತದಲ್ಲಿವೆ. ದಾವಣಗೆರೆ ಜಿಲ್ಲೆಯಲ್ಲಿ ಯುವನಿಧಿ ಯೋಜನೆಯಡಿ 5802 ಯುವಜನರಿಗೆ ರೂ.8.5 ಕೋಟಿ ನಿರುದ್ಯೋಗ ಭತ್ಯೆ ನೀಡಲಾಗಿದೆ. ದಾವಣಗೆರೆ ನಗರದಲ್ಲಿ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸುವಂತೆ ಕಸಾಪ ಸದಸ್ಯರು ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಗಳು ಈ ಬಗ್ಗೆ ಗಮನ ಹರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಸಂಸದೆ ಪ್ರಭಾ ಮಲ್ಲಿಕಾರ್ಜುನ ಮಾತನಾಡಿ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿವೃದ್ಧಿ ಯೋಜನೆಗಳು ಜನತೆಯ ಮನಮುಟ್ಟಿವೆ. ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯನ್ನು ಯುವ ಜನತೆಗೆ ನೀಡಿ, ಯುವ ಜನಾಂಗಕ್ಕೆ ಸರ್ಕಾರ ಪ್ರಾಮುಖ್ಯತೆ ನೀಡಿದೆ.ಯುವಕರ ದೇಶದ ಆಸ್ತಿ. ಅವರ ಪ್ರತಿಭೆ ಗುರುತಿಸಿ ಅದಕ್ಕೆ ಪೂರಕವಾದ ವಾತಾವರಣ ಸೃಷ್ಠಿಸುವ ಕಾರ್ಯ ನಾವೆಲ್ಲರೂ ಮಾಡಬೇಕಿದೆ. ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಲ್ಲಿ ನಮ್ಮ ಸಂವಿಧಾನದ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಹಾಗೂ ಶಿಕ್ಷಣ ಅಧಿಕಾರಿಗಳೊಂದಿಗೆ ಚರ್ಚಿಸಿ, ಕ್ರಿಯಾಯೋಜನೆ ರೂಪಿಸಿ, ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಸವರಾಜು ವಿ ಶಿವಗಂಗಾ, ಬಿ.ದೇವೇಂದ್ರಪ್ಪ, ಬಿ.ಪಿ.ಹರೀಶ್, ಶಾಂತನಗೌಡ.ಡಿ.ಜಿ. ವಿಧಾನ ಪರಿಷತ್ ಸದಸ್ಯರಾದ ಕೆ.ಅಬ್ದುಲ್ ಜಬ್ಬಾರ್, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಸಗೋಡು ಜಯಸಿಂಹ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುμÁ್ಠನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ, ದಾವಣಗೆರೆ ಮಹಾನಗರ ಪಾಲಿಕೆ ಮಹಾಪೌರರಾದ ಚಮನ್ ಸಾಬ್.ಕೆ, ರಾಜ್ಯ ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಯದೇವ್ ನಾಯ್ಕ್, ದಾವಣಗೆರೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಾರ್ಯದರ್ಶಿ ರಂದೀಪ್.ಡಿ, ಪೆÇಲೀಸ್ ಉಪ ಮಹಾನಿರೀಕ್ಷಕ ರಮೇಶ್.ಬಿ, ಜಿಲ್ಲಾ ಪಂಚಾಯಿತಿ ಸಿಇಓ ಸುರೇಶ್ ಇಟ್ನಾಳ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಉಮಾ ಪ್ರಶಾಂತ್, ಮಾಜಿ ಸಚಿವ ಹೆಚ್.ಆಂಜನೇಯ ಉಪಸ್ಥಿತರಿದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಚೇತನ್ ಸ್ವಾಗತಿಸಿದರು. ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿ.ಎಂ. ವಂದಿಸಿದರು.

BIG NEWS : ರಾಜ್ಯದಲ್ಲಿ 1.62 ಲಕ್ಷ ಯವಕ-ಯುವತಿಯರಿಗೆ `ಯುವನಿಧಿ ಯೋಜನೆಯಡಿ 216 ಕೋಟಿ ರೂ. ನಿರುದ್ಯೋಗ ಭತ್ಯೆ ಖಾತೆಗೆ ಜಮೆ : CM ಸಿದ್ದರಾಮಯ್ಯ BIG NEWS: RS 216 CRORE UNDER THE 1.62 LAKH YOUTH FUND IN THE STATE. Unemployment allowance credited to account: CM Siddaramaiah
Share. Facebook Twitter LinkedIn WhatsApp Email

Related Posts

BIG NEWS : ಬ್ಯಾಲೆಟ್ ಪೇಪರ್ ಚುನಾವಣೆಯಲ್ಲೂ ಬಿಜೆಪಿ ಗೆದ್ದಿದೆ : ಕಾಂಗ್ರೆಸ್ ಗೆ ಬಿವೈ ವಿಜಯೇಂದ್ರ ತಿರುಗೇಟು

24/12/2025 9:36 PM1 Min Read

ರಾಜ್ಯದಲ್ಲಿ ಮಂಗನ ಕಾಯಿಲೆ ಭೀತಿ ಹಿನ್ನೆಲೆ ಆರೋಗ್ಯ ಇಲಾಖೆ ಅಲರ್ಟ್ : ಮತ್ತೊಂದು ಲ್ಯಾಬ್ ಸ್ಥಾಪನೆಗೆ ಸರ್ಕಾರ ನಿರ್ಧಾರ

24/12/2025 9:20 PM1 Min Read

ಕ್ರಿಸ್ಮಸ್, ನ್ಯೂ ಇಯರ್ ಗೆ ಕೇಕ್ ತಿನ್ನುವ ಮುನ್ನ ಇರಲಿ ಎಚ್ಚರ : ಈ ಎಲ್ಲ ಕಾಯಿಲೆಗಳು ಬರೋದು ಗ್ಯಾರಂಟಿ!

24/12/2025 8:41 PM2 Mins Read
Recent News

ಕಿಡ್ನಿ ವೈಫಲ್ಯ ಆಗುವವರೆಗೂ ಕಾಯ್ಬೇಡಿ, ಈ 4 ಪರೀಕ್ಷೆಗಳು ನಿಮ್ಮ ಜೀವ ಉಳಿಸ್ಬೋದು!

24/12/2025 10:03 PM

Dhanushkodi Tragedy : ಇಡೀ ರೈಲು ಸಮುದ್ರದಲ್ಲಿ ಮುಳುಗಿತು.! ಭಾರತದ ಅತಿ ದೊಡ್ಡ ದುರಂತಕ್ಕೆ 59 ವರ್ಷ!

24/12/2025 9:49 PM

BIG NEWS : ಬ್ಯಾಲೆಟ್ ಪೇಪರ್ ಚುನಾವಣೆಯಲ್ಲೂ ಬಿಜೆಪಿ ಗೆದ್ದಿದೆ : ಕಾಂಗ್ರೆಸ್ ಗೆ ಬಿವೈ ವಿಜಯೇಂದ್ರ ತಿರುಗೇಟು

24/12/2025 9:36 PM

‘ಭಾವನೆಗಳಿಗೆ ನೋವುಂಟಾಗಿದೆ’ : ಥೈಲ್ಯಾಂಡ್ ಕಾಂಬೋಡಿಯಾ ಗಡಿಯಲ್ಲಿ ವಿಷ್ಣು ಪ್ರತಿಮೆ ಧ್ವಂಸಕ್ಕೆ ಭಾರತ ಕಳವಳ

24/12/2025 9:26 PM
State News
KARNATAKA

BIG NEWS : ಬ್ಯಾಲೆಟ್ ಪೇಪರ್ ಚುನಾವಣೆಯಲ್ಲೂ ಬಿಜೆಪಿ ಗೆದ್ದಿದೆ : ಕಾಂಗ್ರೆಸ್ ಗೆ ಬಿವೈ ವಿಜಯೇಂದ್ರ ತಿರುಗೇಟು

By kannadanewsnow0524/12/2025 9:36 PM KARNATAKA 1 Min Read

ಬೆಂಗಳೂರು : ನಾಳೆ ರಾಜ್ಯಾದ್ಯಂತ ವಾಜಪೇಯಿ ಅವರ ಹುಟ್ಟುಹಬ್ಬ ಆಚರಣೆ ಮಾಡುತ್ತೇವೆ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬಂದಿದೆ.…

ರಾಜ್ಯದಲ್ಲಿ ಮಂಗನ ಕಾಯಿಲೆ ಭೀತಿ ಹಿನ್ನೆಲೆ ಆರೋಗ್ಯ ಇಲಾಖೆ ಅಲರ್ಟ್ : ಮತ್ತೊಂದು ಲ್ಯಾಬ್ ಸ್ಥಾಪನೆಗೆ ಸರ್ಕಾರ ನಿರ್ಧಾರ

24/12/2025 9:20 PM

ಕ್ರಿಸ್ಮಸ್, ನ್ಯೂ ಇಯರ್ ಗೆ ಕೇಕ್ ತಿನ್ನುವ ಮುನ್ನ ಇರಲಿ ಎಚ್ಚರ : ಈ ಎಲ್ಲ ಕಾಯಿಲೆಗಳು ಬರೋದು ಗ್ಯಾರಂಟಿ!

24/12/2025 8:41 PM

BIG NEWS : ಪೋಲೀಸರ ಭರ್ಜರಿ ಕಾರ್ಯಾಚರಣೆ : ಯುವಕನನ್ನು ಕೊಂದ ಅರ್ಧಗಂಟೆಯಲ್ಲೇ ಆರೋಪಿಗಳು ಅರೆಸ್ಟ್!

24/12/2025 8:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.