ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೃತರಾದವರ ಕುಟುಂಬಗಳಿಗೆ ₹25 ಲಕ್ಷ ಪರಿಹಾರ ನೀಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸದನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೃತರಾದವರ ಕುಟುಂಬಗಳಿಗೆ ₹25 ಲಕ್ಷ ಪರಿಹಾರ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೃತರಾದವರ ಕುಟುಂಬಗಳಿಗೆ ₹25 ಲಕ್ಷ ಪರಿಹಾರ ನೀಡಿದ್ದೇವೆ.
– ಮುಖ್ಯಮಂತ್ರಿ @siddaramaiah pic.twitter.com/Y9iGG39cve
— CM of Karnataka (@CMofKarnataka) August 23, 2025
ರಾಜ್ಯದಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆ ಸಂಬಂಧ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಶಿಫಾರಸ್ಸು ಮಾಡಲು ರಚಿಸಲಾಗಿದ್ದ ಸಚಿವ ಸಂಪುಟದ ಉಪಸಮಿತಿಯ ವರದಿಯನ್ನು ರಾಜ್ಯ ಸಚಿವ ಸಂಪುಟವು ಅನುಮೋದಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರದಿಯ ಬಗ್ಗೆ ಸದನಕ್ಕೆ ಮಾಹಿತಿ ನೀಡಿದರು.
ಇನ್ನು ಕೇಂದ್ರ ಪ್ರಾಯೋಜಿತ ಯೋಜನೆಗಳಲ್ಲಿ ಈ ಹಿಂದೆ ಶೇ.75 ರಷ್ಟು ಅನುದಾನ ಕೇಂದ್ರ ಭರಿಸಿದರೆ, ಶೇ.25ರಷ್ಟನ್ನು ಮಾತ್ರ ರಾಜ್ಯ ಸರ್ಕಾರ ನೀಡಬೇಕಿತ್ತು. ಆದರೆ ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಕೇಂದ್ರದ ಪಾಲು ಶೇ.40 ರಿಂದ 42ರಷ್ಟು ಮಾತ್ರ ಬರುತ್ತಿದೆ. ಉಳಿದ ಹಣವನ್ನು ರಾಜ್ಯ ಸರ್ಕಾರವೇ ಭರಿಸುತ್ತಿದೆ ಎಂದು ಹೇಳಿದ್ದಾರೆ.