ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಈವರೆಗೆ ಒಟ್ಟು 1.22 ಕೋಟಿ ಮಹಿಳೆಯರು ಧನಸಹಾಯ ಪಡೆದುಕೊಂಡಿದ್ದಾರೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ಹೌದು, ಗೃಹಲಕ್ಷ್ಮಿ ಯೋಜನೆಯಡಿ ಆಗಸ್ಟ್ 2023 ರಿಂದ ಈವರೆಗೆ ಪ್ರತಿ ಮನೆಯ ಯಜಮಾನಿಯ ಖಾತೆಗೆ ಮಾಸಿಕ ₹2,000 ದಂತೆ 1.22 ಕೋಟಿ ಮಹಿಳೆಯರಿಗೆ ಒಟ್ಟು 30,285 ಕೋಟಿ ಧನಸಹಾಯ ಪಡೆದುಕೊಂಡಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಇನ್ನು ಆರೋಗ್ಯ ಪುಷ್ಟಿ ಯೋಜನೆಯನ್ನು ಪ್ರಾಯೋಗಿಕವಾಗಿ ರಾಜ್ಯದ 102 ತಾಲೂಕುಗಳಲ್ಲಿ ಜಾರಿಗೊಳಿಸಿದ್ದು, ಅರ್ಹ ವಿವಾಹಿತ ಮಹಿಳೆಯರಿಗೆ ಪೌಷ್ಟಿಕ ಕಿಟ್ ವಿತರಣೆ ಮಾಡಲಾಗುತ್ತಿದೆ. ಜೊತೆಗೆ ಮಾಜಿ ದೇವದಾಸಿಯರ ಉತ್ಪನ್ನಗಳ ಮಾರಾಟಕ್ಕಾಗಿ ಸವದತ್ತಿಯಲ್ಲಿ 48 ಮಾರಾಟ ಮಳಿಗೆಗಳ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಲಾಗಿದೆ.