ಬೆಂಗಳೂರು: ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ಒಟ್ಟು 12 ಬಂಡವಾಳ ಹೂಡಿಕೆ ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬೇಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ತಿಳಿಸಿದರು.
ಅವರು ಮಂಗಳವಾರ= ವಿಧಾನ ಪರಿಷತ್ತಿನ ಕಲಾಪದ ವೇಳೆ ಸದಸ್ಯರಾದ ಕೇಶವ ಪ್ರಸಾದ್ ಎಸ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, 12 ಬಂಡವಾಳ ಹೂಡಿಕೆ ಒಪ್ಪಂದಗಳಲ್ಲಿ ಈಗಾಗಲೇ 2 ಯೋಜನೆಗಳಿಗೆ ರಾಜ್ಯ ಉನ್ನತ ಮಟ್ಟದ ಸಮಿತಿಯಿಂದ ಅನುಮೋದನೆಯನ್ನು ನೀಡಲಾಗಿದ್ದು, ಈ ಯೋಜನೆಗಳು ಕಾರ್ಯಾರಂಭ ಮಾಡುವ ವಿವಿಧ ಹಂತಗಳಲ್ಲಿವೆ. ಈ ಒಪ್ಪಂದಗಳಿಂದ ಒಟ್ಟು ರೂ 71,496 ಕೋಟಿ ಬಂಡವಾಳ ಹೂಡಿಕೆಯಾಗಲಿದೆ ಮತ್ತು 70950 ಉದ್ಯೋಗವಕಾಶಗಳು ಸೃಷ್ಟಿಯಾಗಲಿವೆ ಎಂದು ತಿಳಿಸಿದರು.
2023-24ನೇ ಸಾಲಿನಲ್ಲಿ ಜನವರಿ ಅಂತ್ಯಕ್ಕೆ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯಲ್ಲಿ 241 ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇವುಗಳಿಂದ ಸುಮಾರು 50,025 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, 58051 ಜನರಿಗೆ ಉದ್ಯೋಗಾವಕಾಶ ಲಭ್ಯವಾಗಲಿದೆ.
241 ಯೋಜನೆಗಳಲ್ಲಿ 24 ಯೋಜನೆಗಳು ಬೆಂಗಳೂರು ಜಿಲ್ಲೆಯಲ್ಲಿದ್ದು, ಅವುಗಳ ಬಂಡವಾಳ ಹೂಡಿಕೆ ರೂ. 21,537 ಕೋಟಿಯೊಂದಿಗೆ 19,243 ಜನರಿಗೆ ಉದ್ಯೋಗಾವಕಾಶ ಲಭ್ಯವಾಗಲಿದೆ. ಇನ್ನುಳಿದ 217 ಯೋಜನೆಗಳು ರಾಜ್ಯದ ಇನ್ನಿತರ ಜಿಲ್ಲೆಗಳಿಗೆ ಸಂಬಂಧಿಸಿದ್ದು, ಅವುಗಳ ಬಂಡವಾಳ ಹೂಡಿಕೆ ರೂ. 28,488 ಕೋಟಿಯೊಂದಿಗೆ 38,808 ಜನರಿಗೆ ಉದ್ಯೋಗಾವಕಾಶ ಲಭ್ಯವಾಗಲಿದೆ. ಅಲ್ಲದೆ ಪ್ರಸ್ತುತ ರಾಜ್ಯದ ವಿವಿಧ ಭಾಗಗಳಲ್ಲಿ ಉದ್ದಿಮೆ ಸ್ಥಾಪನೆ, ಉದ್ಯೋಗ ಸೃಷ್ಟಿಗೆ ರಾಜ್ಯ ಸರ್ಕಾರವು ಬಿಯಾಂಡ್ ಬೆಂಗಳೂರು ಕಲ್ಪನೆಯಡಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗಾಗಿ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ.
ರಾಜ್ಯದ ಇತರ ಜಿಲ್ಲೆಗಳಲ್ಲಿ ಹೂಡಿಕೆ ಮಾಡುವ ಕಂಪನಿಗಳಿಗೆ ಕೈಗಾರಿಕಾ ನೀತಿ 2020-25ರಲ್ಲಿ ವಿವಿಧ ರೀತಿಯ ಪ್ರೋತ್ಸಾಹಧನ ಹಾಗೂ ವಿನಾಯತಿಗಳನ್ನು ನೀಡಲಾಗುತ್ತದೆ.
ರಾಜ್ಯಕ್ಕೆ ನಿರ್ಧಿಷ್ಟ ವಲಯದಲ್ಲಿ ಹೆಚ್ಚಿನ ಹೂಡಿಕೆಯನ್ನು ಆಕರ್ಷಿಸಲು ಮತ್ತು ಸಮಾನ ಮತ್ತು ಸುಸ್ಥಿರ ಬೆಳವಣಿಗೆಯ ಮೂಲಕ ಏಷ್ಯಾದಲ್ಲಿ ಭವಿಷ್ಯದ ತಂತ್ರಜ್ಞಾನ ಉತ್ಪಾದನೆಗೆ ರಾಜ್ಯವನ್ನು ನೆಚಿನ ತಾಣವನ್ನಾಗಿಸಲು ಮತ್ತು ಕರ್ನಾಟಕದ ಸ್ಥಾನವನ್ನು ಉತ್ಕøಷ್ಟಗೊಳಿಸಲು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವರ ಅಧ್ಯಕ್ಷತೆಯಲ್ಲಿ ಏರೋಸ್ಪೇಸ್ & ಡಿಫೆನ್ಸ್ ಮೆಷಿನ್ ಟೂಲ್ಸ್ ಎಲೆಕ್ಟಾನಿಕ್ಸ್ ಸಿಸ್ಟಮ್ ಡಿಸೈನ್ & ಮ್ಯಾನ್ಯುಫ್ಯಾಕ್ಚರಿಂಗ್, ಫಾರ್ಮಾಸ್ಯುಟಿಕಲ್ಸ್, ಕೊರ್ ಮ್ಯಾನ್ಯುಫ್ಯಾಕ್ಚರಿಂಗ್ ಆಟೋಮೋಟಿವ್ / ಎಲೆಕ್ಟ್ರಿಕ್ ವೆಹಿಕಲ್ಸ್ ಇಂಡಸ್ಟ್ರಿ 5.0, ಟೆಕ್ಸ್‍ಟೈಲ್ಸ್ ಮತ್ತು ಗ್ರೀನ್ ಎನರ್ಜಿ ವಲಯಗಳ 9 ವಲಯವಾರು ವಿಷನ್ ಗ್ರೂಫ್‍ಗಳನ್ನು ರಚಿಸಲಾಗಿದೆ. ಈ ವಿಷನ್ ಗ್ರೂಫ್‍ಗಳಲ್ಲಿರುವ ವಿವಿಧ ಕ್ಷೇತ್ರಗಳ ತಜ್ಞರೊಂದಿಗೆ ಚರ್ಚಿಸಿ ಕೈಗಾರಿಕಾ ಅಭಿವೃದ್ಧಿಗಾಗಿ ವಿವಿಧ ಕ್ರಮಗಳನ್ನು ವಹಿಸಲಾಗುತ್ತದೆ ಎಂದು ತಿಳಿಸಿದರು.
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಅಧ್ಯಕ್ಷತೆಯಲ್ಲಿ ಇನ್ವೆಸ್ಟ್ ಕರ್ನಾಟಕ ಪೋರಂನ್ನು ಪುನರ್ ರಚನೆ ಮಾಡಲಾಗಿದೆ. ಈ ಸಮಿತಿಯಲ್ಲಿ ವಿವಿಧ ಕ್ಷೇತ್ರಗಳ ಪರಿಣಿತರಿದ್ದು, ಅವರೊಂದಿಗೆ ಚರ್ಚಿಸಿ, ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಗೆ ಅಗತ್ಯ ಕ್ರಮ ವಹಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.