ಬೆಂಗಳೂರು: ಎಲ್ಲಾ ಪಕ್ಷದ ಶಾಸಕರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಂಫರ್ ಗಿಫ್ಟ್ ನೀಡಿದ್ದಾರೆ. ಶಾಸಕರಿಗೆ ತಲಾ 10 ಕೋಟಿ ಅನುದಾವನವನ್ನು ಘೋಷಣೆ ಮಾಡಿದ್ದಾರೆ.
ಕಳೆದ ಬೆಳಗಾವಿಯಲ್ಲಿ ನಡೆದಂತ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ಶಾಸಕರಿಗೆ ಅನುದಾನ ಬಿಡುಗಡೆಯ ಬಗ್ಗೆ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತ ಪಡಿಸಿದ್ದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ಸಿಎಲ್ ಪಿ ಸಭೆಯಲ್ಲಿ ಶಾಸಕರಿಗೆ ಅನುದಾನವನ್ನು ನೀಡುವ ಘೋಷಣೆ ಮಾಡಿದ್ದಾರೆ.
ಎಲ್ಲಾ ಪಕ್ಷದ ಶಾಸಕರಿಗೂ ತಲಾ 10 ಕೋಟಿ ಅನುದಾನವನ್ನು ನೀಡಿದ್ದೇವೆ. ಬಿಜೆಪಿ, ಜೆಡಿಎಸ್ ಶಾಸಕರಿಗೂ 10 ಕೋಟಿ ಅನುದಾನ ಕೊಡ್ತಿರೋದಾಗಿ ಘೋಷಿಸಿದರು.
ಕಾಂಗ್ರೆಸ್ ಪಕ್ಷ ಹೋರಾಟ, ತ್ಯಾಗ, ಬಲಿದಾನಗಳಿಂದ ಕಟ್ಟಿದ್ದಾಗಿದೆ. ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ದೇಶಕ್ಕಾಗಿ ಹುತಾತ್ಮರಾದರು. ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಅವರು ತಮ್ಮ ಪಾಲಿಗೆ ಒದಗಿ ಬಂದಿದ್ದ ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಿ ಮನಮೋಹನ್ ಸಿಂಗ್ ಅವರನ್ನು ಪ್ರಧಾನಿ ಮಾಡಿದರು. ಈ ಆದರ್ಶಗಳ ಮಾರ್ಗದಲ್ಲಿ ನಾವು ಮುನ್ನಡೆಯೋಣ ಎಂದರು.
ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಬಗ್ಗೆ ಗೌರವ ಇಲ್ಲದೆ, ವಿಗ್ರಹ ಮಾಡಿಟ್ಟುಕೊಂಡಿರುವ ಬಿಜೆಪಿಯವರು, ಗಾಂಧಿ ಬಗ್ಗೆ ಗೌರವ ಇಲ್ಲದ ಬಿಜೆಪಿಯವರು, ಸ್ವಾತಂತ್ರ್ಯ ಹೋರಾಟದ ಬಗ್ಗೆ ಗೌರವ ಇಲ್ಲದ ಇವರಿಗೆ, ಅಂಬೇಡ್ಕರ್, ನೆಹರೂ ಯಾರ ಬಗ್ಗೆಯೂ ಗೌರವ ಇಲ್ಲದ ಬಿಜೆಪಿಯವರಿಗೆ ದೇಶದ ಸಂವಿಧಾನ ಮತ್ತು ಚರಿತ್ರೆಯ ಬಗ್ಗೆಯೂ ಗೌರವ ಇಲ್ಲ ಎಂದರು.
ಅಂಬೇಡ್ಕರ್, ಗಾಂಧಿ, ನೆಹರೂ ಮತ್ತು ಕಾಂಗ್ರೆಸ್ಸಿನ ಹೋರಾಟದ ಚರಿತ್ರೆಯನ್ನು ನಾವು ಮುಂದಿನ ಪೀಳಿಗೆಗೆ ಅರ್ಥ ಮಾಡಿಸಬೇಕಿದೆ. ನಾವು ಗಾಂಧಿ ವಂಶಸ್ಥರು ಅವರು ಗೋಡ್ಸೆ ವಂಶಸ್ಥರು. ಬಿಜೆಪಿ ಮತ್ತು ಕಾಂಗ್ರೆಸ್ಸಿನ ಈ ಸೈದ್ಧಾಂತಿಕ ವ್ಯತ್ಯಾಸವನ್ನು ಇವತ್ತಿನ ಯುವ ಪೀಳಿಗೆಗೆ ಅರ್ಥೈಸಬೇಕಿದೆ. ಇದಕ್ಕಾಗಿ ಜ 21ರ ಗಾಂಧಿ ಭಾರತ ಸಮಾವೇಷವನ್ನು ಅತ್ಯಂತ ಯಶಸ್ವಿಗೊಳಿಸೋಣ ಎಂದು ಕರೆ ನೀಡಿದರು.