ಬೆಂಗಳೂರು : ಕಾಂಗ್ರೆಸ್ಸಿನ ಕೆಲವು ನಾಯಕರು ಇನ್ನೂ 10 ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂದು ಹೇಳಿಕೆ ನೀಡುತ್ತಿದ್ದರೆ, ಇನ್ನೊಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಭಾರಿ ಚರ್ಚೆಯಾಗುತ್ತಿದೆ. ಇದರ ಮಧ್ಯ ಸಚಿವ ಸತೀಶ್ ಜಾರಕಿಹೊಳಿ ಕೆಲ ಅಭಿಮಾನಿಗಳು ಮಹಾ ಕುಂಭಮೇಳದಲ್ಲಿ 2028 ರಲ್ಲಿ ಸತೀಶ್ ಜಾರ್ಕಿಹೊಳಿ ಸಿಎಂ ಆಗೇ ಆಗುತ್ತಾರೆ ಎಂದು ಹರಕೆ ಹೊತ್ತಿದ್ದಾರೆ.
ಹೌದು ಮಹಾ ಕುಂಭಮೇಳದಲ್ಲಿ ಸತೀಶ್ ಜಾರಕಿಹೊಳಿ ಅಭಿಮಾನಿಗಳು 2028ರಲ್ಲಿ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುತ್ತಾರೆ ಎಂದು ಈ ಒಂದು ಹರಕೆ ಹೊತ್ತಿದ್ದಾರೆ. ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಸತೀಶ್ ಜಾರಕಿಹೊಳಿ ಅಭಿಮಾನಿಗಳು ಸತೀಶ್ ಫೋಟೋ ಸಮೇತ ಮಹಾ ಕುಂಭ ಮೇಳದಲ್ಲಿ ಮಿಂದೆದ್ದು ಹರಕೆ ಹೊತ್ತಿದ್ದಾರೆ. 2028ಕ್ಕೆ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗೇ ಆಗುತ್ತಾರೆ ಸಿಎಂ ಆದರೆ ಇದೇ ಸ್ಥಳಕ್ಕೆ ಬಂದು ಹರಕೆ ತೀರಿಸುವುದಾಗಿ ಅಭಿಮಾನಿಗಳ ಬೇಡಿಕೆಯಾಗಿದೆ.








