ನವದೆಹಲಿ: ಸಮಾನತೆಯನ್ನು ಪಡೆಯಲು ಮತ್ತು ಭ್ರಾತೃತ್ವ ಮತ್ತು ರಾಷ್ಟ್ರೀಯ ಭಾವೈಕ್ಯತೆಯನ್ನು ಉತ್ತೇಜಿಸಲು ವಸ್ತ್ರ ಸಂಹಿತೆಯನ್ನು ಜಾರಿಗೆ ತರಬೇಕು ಎಂದು ಸುಪ್ರಿಂಕೋರ್ಟ್ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ.
ನೋಂದಾಯಿತ ಶಿಕ್ಷಣ ಸಂಸ್ಥೆಗಳಲ್ಲಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಸಾಮಾನ್ಯ ವಸ್ತ್ರಸಂಹಿತೆಯನ್ನು ಜಾರಿಗೆ ತರಲು ಕೇಂದ್ರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ಇದು ನ್ಯಾಯ ನಿರ್ಣಯಕ್ಕಾಗಿ ನ್ಯಾಯಾಲಯಕ್ಕೆ ಬರಬೇಕಾದ ವಿಷಯವಲ್ಲ ಎಂದು ಹೇಳಿದೆ.
ಸಮಾನತೆಯನ್ನು ಪಡೆಯಲು ಮತ್ತು ಭ್ರಾತೃತ್ವ ಮತ್ತು ರಾಷ್ಟ್ರೀಯ ಭಾವೈಕ್ಯತೆಯನ್ನು ಉತ್ತೇಜಿಸಲು ವಸ್ತ್ರ ಸಂಹಿತೆಯನ್ನು ಜಾರಿಗೆ ತರಬೇಕು ಎಂದು ಪಿಐಎಲ್ನಲ್ಲಿ ವಾದಿಸಲಾಗಿತ್ತು. ಪಿಐಎಲ್ ಅರ್ಜಿದಾರ ನಿಖಿಲ್ ಉಪಾಧ್ಯಾಯ ಅವರ ಪರ ವಾದ ಮಂಡಿಸಿದ ಹಿರಿಯ ವಕೀಲ ಗೌರವ್ ಭಾಟಿಯಾ, ಇದು ಸಾಂವಿಧಾನಿಕ ವಿಷಯವಾಗಿದ್ದು, ಶಿಕ್ಷಣ ಹಕ್ಕು ಕಾಯ್ದೆಯಡಿ ನಿರ್ದೇಶನ ನೀಡುವಂತೆ ಕೋರಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬಕ್ಕೂ ಮೊದಲು ವಾರಣಾಸಿಯಲ್ಲಿ ಜನತೆಯಿಂದ ಗಂಗಾ ಆರತಿ
ಶಿವಮೊಗ್ಗ: ಎನ್.ಇ.ಪಿ ಅನುಷ್ಠಾನದಲ್ಲಿ ಕುವೆಂಪು ವಿವಿ ಮುಂದೆ – ಕುಲಪತಿ ಪ್ರೊ. ವೀರಭದ್ರಪ್ಪ
“ನಾವು ಹಣಕ್ಕಾಗಿ ಭಿಕ್ಷೆ ಬೇಡಲು ಬಂದಿದ್ದೇವೆ ಎಂದು ಸ್ನೇಹಪರ ರಾಷ್ಟ್ರಗಳು ಸಹ ಭಾವಿಸುತ್ತವೆ”: ಪಾಕಿಸ್ತಾನ ಪ್ರಧಾನಿ