ಹಾಸನ : ಹಾಸನದಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದೆ. ನಡು ರಸ್ತೆಯಲ್ಲಿಯೇ ನರ್ಸಿಂಗ್ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಹಾಸನ ನಗರದ ಶಂಕರೀಪುರಂನಲ್ಲಿ ಈ ಒಂದು ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದೆ.
ಕೇರಳದ ಮೂಲದ ವಿದ್ಯಾರ್ಥಿಗಳು ಹಾಸನದಲ್ಲಿ ನರ್ಸಿಂಗ್ ಓದುತ್ತಿದ್ದಾರೆ. ಈ ವೇಳೆ ಬೆಲ್ಟ್, ಹೆಲ್ಮೆಟ್ ಹಿಡಿದು ವಿದ್ಯಾರ್ಥಿಗಳು ನಡು ರಸ್ತೆಯಲ್ಲಿ ಪರಸ್ಪರ ಬಡಿದಾಡಿಕೊಂಡಿದ್ದಾರೆ. ಈ ಗಲಾಟೆಯಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.ಸ್ಥಳೀಯ ಪುಂಡರನ್ನು ಕರೆದುಕೊಂಡು ವಿದ್ಯಾರ್ಥಿಗಳು ಈ ಗಲಾಟೆ ಮಾಡಿದ್ದಾರೆ.