ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ರ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ ಪ್ರಕಟಿಸಲಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆಗೆ ಹಾಜರಾದಂತ 6,37,805 ವಿದ್ಯಾರ್ಥಿಗಳಲ್ಲಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇಕಡವಾರು ಪ್ರಮಾಣ 73.45ರಷ್ಟು ಆಗಿದೆ. ಇದರ ಜೊತೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ಹಾಗೂ ಪರೀಕ್ಷೆ-3ಕ್ಕೆ ದಿನಾಂಕವನ್ನು ಹಾಗೂ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆ-1 ಅನ್ನು ದಿನಾಂಕ 01-03-2025ರಿಂದ 20-03-2025ರವರೆಗೆ ಒಟ್ಟು 1.171 ಪರೀಕ್ಷಾ ಕೇಂದ್ರಗಳಲ್ಲಿ ರಾಜ್ಯಾಧ್ಯಂತ ನಡೆಸಲಾಯಿತು. ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯವನ್ನು 76 ಮೌಲ್ಯಮಾಪನ ಕೇಂದ್ರಗಳಲ್ಲಿ ದಿನಾಂಕ 21-03-2025ರಿಂದ 02-04-2025ರವರೆಗೆ 28,092 ಮೌಲ್ಯ ಮಾಪಕರಿಂದ ನಡೆಸಲಾಯಿತು.