Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ರಾಜ್ಯದಲ್ಲಿ ಇನ್ಮುಂದೆ `SSLC’ ಪರೀಕ್ಷೆಗೆ 625ರ ಬದಲಿಗೆ 525 ಅಂಕ : ಪಾಸ್ ಆಗಲು 173 ಮಾರ್ಕ್ಸ್ ಕಡ್ಡಾಯ.!

15/04/2026 5:44 AM

ಅಂಬೇಡ್ಕರ್ ಜಯಂತಿ ಪ್ರತಿ ಕೇರಿಗಳಲ್ಲಿಯೂ ಆಚರಣೆಯಾಗಲಿ: ಸಾಗರ ನಗರಸಭೆ ಪೌರಾಯುಕ್ತ ಎಚ್.ಕೆ. ನಾಗಪ್ಪ

14/04/2026 10:15 PM

ಸಮ ಸಮಾಜದ ನಿರ್ಮಾಣಕ್ಕೆ ಅಂಬೇಡ್ಕರ್, ಬಾಬೂಜಿ ಕೊಡುಗೆ ಅನನ್ಯ: ಸಾಗರದಲ್ಲಿ ಜಯಂತ್ ಗುಣಗಾನ

14/04/2026 9:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಶೀಘ್ರವೇ `KAS’ ಅಧಿಕಾರಿಗಳ ಜೇಷ್ಠತಾ ಪಟ್ಟಿ ಬಿಡುಗಡೆ : CM ಸಿದ್ದರಾಮಯ್ಯ
KARNATAKA

BIG NEWS : ಶೀಘ್ರವೇ `KAS’ ಅಧಿಕಾರಿಗಳ ಜೇಷ್ಠತಾ ಪಟ್ಟಿ ಬಿಡುಗಡೆ : CM ಸಿದ್ದರಾಮಯ್ಯ

By kannadanewsnow5704/01/2025 5:56 AM

ಬೆಂಗಳೂರು : ಕೆಎಎಸ್ ಅಧಿಕಾರಿಗಳ ಜೇಷ್ಠತಾ ಪಟ್ಟಿ ಸಿದ್ಧವಿದೆ. ಮುಂದಿನ ಹತ್ತು ದಿನಗಳ ಒಳಗಾಗಿ ಬಿಡುಗಡೆ ಆಗುತ್ತದೆ. ಕೆಎಎಸ್ ಅಧಿಕಾರಿಗಳ ಬಡ್ತಿ ಬೇಡಿಕೆಯನ್ನೂ ಪರಿಶೀಲಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘ ಹೊರತಂದಿರುವ ಕ್ಯಾಲೆಂಡರ್ ಮತ್ತು ದಿನಚರಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,ನಮಗೆ ಸಿಕ್ಕಿರುವ ವಿದ್ಯೆ ಮತ್ತು ಅವಕಾಶಗಳ ಹಿಂದೆ ಸಮಾಜದ ಋಣ ಇದೆ. ಈ ಋಣ ತೀರಿಸುವುದು ನಮ್ಮ ಜವಾಬ್ದಾರಿ. ಎರಡು ಹೊತ್ತಿನ ಊಟಕ್ಕೆ ಶ್ರಮಿಸುತ್ತಿರುವ ಕಟ್ಟ ಕಡೆಯ ಜನರ ಪರವಾಗಿ ಅಧಿಕಾರಿಗಳು ಬದ್ಧತೆ ತೋರಿಸಬೇಕು. ಅಂಬೇಡ್ಕರ್ ಅವರ ಆಶಯ ಈಡೇರಿಸಲು ನಾವು ನಮಗೆ ಸಿಕ್ಕಿರುವ ಅವಕಾಶವನ್ನು ಬಳಸಿಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದರು.

ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೀನಿ. ಮೊದಲ ಬಾರಿ ಸಿಎಂ ಆಗಿ ಹಲವಾರು ಭಾಗ್ಯಗಳು, ಈ ಬಾರಿ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೀನಿ. ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿ ಆಹಾರ, ಶಿಕ್ಷಣ, ಮಾಹಿತಿ ಹಕ್ಕುಗಳನ್ನು ಕಡ್ಡಾಯ ಮಾಡುವ ಮೂಲಕ ಸಂವಿಧಾನದ ನಿರ್ದೇಶಕ ತತ್ವಗಳನ್ನು ಜನರ ಹಕ್ಕುಳನ್ನಾಗಿ ಮಾಡಿದರು. ಇವೆಲ್ಲವೂ ಅಂಬೇಡ್ಕರ್ ಅವರ ಆಶಯಗಳನ್ನು ಈಡೇರಿಸುವ ಉದ್ದೇಶವನ್ನೇ ಹೊಂದಿವೆ. ಆದ್ದರಿಂದ ಮಧ್ಯವರ್ತಿಗಳೇ ಇಲ್ಲದ ನಮ್ಮ ಗ್ಯಾರಂಟಿಗಳನ್ನು ಮನೆ ಮನೆ ತಲುಪಿಸಿ ಎಂದು ಹೇಳಿದರು.

ಅಂಬೇಡ್ಕರ್ ಅವರಿಂದ ಬುದ್ದ, ಬಸವ, ಗಾಂಧಿ ಎಲ್ಲರೂ ಸಮಾಜದ ಸಮಾನತೆಗಾಗಿ, ತಾರತಮ್ಯದ ಸಮಾಜದ ಬದಲಾವಣೆಗಾಗಿ ಶ್ರಮಿಸಿದರು. ಆದರೂ ಇನ್ನೂ ಅಸಮಾನತೆ ಹೋಗಿಲ್ಲ ಎಂದರೆ ಎಲ್ಲರಿಗೂ ಸಮಾನ ಅವಕಾಶ ಸಿಗದೇ ಇರುವುದೇ ಮುಖ್ಯ ಕಾರಣ. ಆದ್ದರಿಂದ ಸಮಾಜದಲ್ಲಿ ಪಟ್ಟಭದ್ರರು ಇನ್ನೂ ಹೆಚ್ಚಾಗಿದ್ದಾರೆ. ಸೂಟು ಬೂಟು ಹಾಕಿಕೊಂಡು ಬರುವವರನ್ನು ಕುರ್ಚಿಯಲ್ಲಿ ಕೂರಿಸಿ ಮಾತನಾಡಿಸುವುದನ್ನು, ಮಾಸಲು ಬಟ್ಟೆಯಲ್ಲಿ ಬರುವ ಬಡವರನ್ನು ನಿರ್ಲಕ್ಷ್ಯದಿಂದ ಕಾಣುವುದು ನಮ್ಮ ಮಾನಸಿಕ ಗುಲಾಮಗಿರಿಯ ಧ್ಯೋತಕ. ಇದನ್ನು ಕಿತ್ತೊಗೆದು ಪ್ರತಿಯೊಬ್ಬರಿಗೂ ಸಮಾಜದಲ್ಲಿ ಅವಕಾಶಗಳು ಸಿಗುವಂತೆ ನೋಡಿಕೊಳ್ಳಬೇಕು. ಎಲ್ಲಿಯವರೆಗೂ ಜಾತಿ, ವರ್ಗ ವ್ಯವಸ್ಥೆ ಇರುತ್ತದೋ ಅಲ್ಲಿಯವರೆಗೂ ಅಸಮಾನತೆ ಇರುತ್ತದೆ ಎಂದರು.

ಕೆಎಎಸ್ ಅಧಿಕಾರಿಗಳ ಸಂಘ ಮುಂದಿಟ್ಟಿರುವ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಕೆಎಎಸ್ ಅಧಿಕಾರಿಗಳ ಸಂಖ್ಯೆ ಹೆಚ್ಚಿಸಲು ನಾವು ಸಿದ್ದರಿದ್ದೇವೆ. ಆದರೆ ಸಂಖ್ಯೆ ಮುಖ್ಯವಲ್ಲ. ನಿಮ್ಮ ಗುಣಾತ್ಮಕ ಕರ್ತವ್ಯ, ಸೇವೆ ಮುಖ್ಯ ಎಂದು ತಿಳಿಸಿದರು.

–

BIG NEWS : ಶೀಘ್ರವೇ `KAS' ಅಧಿಕಾರಿಗಳ ಜೇಷ್ಠತಾ ಪಟ್ಟಿ ಬಿಡುಗಡೆ : CM ಸಿದ್ದರಾಮಯ್ಯ BIG NEWS: Seniority list of KAS officers to be released soon: CM Siddaramaiah
Share. Facebook Twitter LinkedIn WhatsApp Email

Related Posts

BIG NEWS: ರಾಜ್ಯದಲ್ಲಿ ಇನ್ಮುಂದೆ `SSLC’ ಪರೀಕ್ಷೆಗೆ 625ರ ಬದಲಿಗೆ 525 ಅಂಕ : ಪಾಸ್ ಆಗಲು 173 ಮಾರ್ಕ್ಸ್ ಕಡ್ಡಾಯ.!

15/04/2026 5:44 AM1 Min Read

ಅಂಬೇಡ್ಕರ್ ಜಯಂತಿ ಪ್ರತಿ ಕೇರಿಗಳಲ್ಲಿಯೂ ಆಚರಣೆಯಾಗಲಿ: ಸಾಗರ ನಗರಸಭೆ ಪೌರಾಯುಕ್ತ ಎಚ್.ಕೆ. ನಾಗಪ್ಪ

14/04/2026 10:15 PM1 Min Read

ಸಮ ಸಮಾಜದ ನಿರ್ಮಾಣಕ್ಕೆ ಅಂಬೇಡ್ಕರ್, ಬಾಬೂಜಿ ಕೊಡುಗೆ ಅನನ್ಯ: ಸಾಗರದಲ್ಲಿ ಜಯಂತ್ ಗುಣಗಾನ

14/04/2026 9:39 PM2 Mins Read
Recent News

BIG NEWS: ರಾಜ್ಯದಲ್ಲಿ ಇನ್ಮುಂದೆ `SSLC’ ಪರೀಕ್ಷೆಗೆ 625ರ ಬದಲಿಗೆ 525 ಅಂಕ : ಪಾಸ್ ಆಗಲು 173 ಮಾರ್ಕ್ಸ್ ಕಡ್ಡಾಯ.!

15/04/2026 5:44 AM

ಅಂಬೇಡ್ಕರ್ ಜಯಂತಿ ಪ್ರತಿ ಕೇರಿಗಳಲ್ಲಿಯೂ ಆಚರಣೆಯಾಗಲಿ: ಸಾಗರ ನಗರಸಭೆ ಪೌರಾಯುಕ್ತ ಎಚ್.ಕೆ. ನಾಗಪ್ಪ

14/04/2026 10:15 PM

ಸಮ ಸಮಾಜದ ನಿರ್ಮಾಣಕ್ಕೆ ಅಂಬೇಡ್ಕರ್, ಬಾಬೂಜಿ ಕೊಡುಗೆ ಅನನ್ಯ: ಸಾಗರದಲ್ಲಿ ಜಯಂತ್ ಗುಣಗಾನ

14/04/2026 9:39 PM

ಪ್ರಧಾನಿ ಮೋದಿ-ಅಧ್ಯಕ್ಷ ಟ್ರಂಪ್ ದೂರವಾಣಿ ಸಂಭಾಷಣೆ: ಪಶ್ಚಿಮ ಏಷ್ಯಾ ಶಾಂತಿ ಮತ್ತು ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಒತ್ತು

14/04/2026 9:30 PM
State News
KARNATAKA

BIG NEWS: ರಾಜ್ಯದಲ್ಲಿ ಇನ್ಮುಂದೆ `SSLC’ ಪರೀಕ್ಷೆಗೆ 625ರ ಬದಲಿಗೆ 525 ಅಂಕ : ಪಾಸ್ ಆಗಲು 173 ಮಾರ್ಕ್ಸ್ ಕಡ್ಡಾಯ.!

By kannadanewsnow5715/04/2026 5:44 AM KARNATAKA 1 Min Read

ಬೆಂಗಳೂರು: ರಾಜ್ಯದ ಎಸ್‌ಎಸ್‌ಎಲ್‌ಸಿ (SSLC) ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯು ಮಹತ್ವದ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಒಟ್ಟು…

ಅಂಬೇಡ್ಕರ್ ಜಯಂತಿ ಪ್ರತಿ ಕೇರಿಗಳಲ್ಲಿಯೂ ಆಚರಣೆಯಾಗಲಿ: ಸಾಗರ ನಗರಸಭೆ ಪೌರಾಯುಕ್ತ ಎಚ್.ಕೆ. ನಾಗಪ್ಪ

14/04/2026 10:15 PM

ಸಮ ಸಮಾಜದ ನಿರ್ಮಾಣಕ್ಕೆ ಅಂಬೇಡ್ಕರ್, ಬಾಬೂಜಿ ಕೊಡುಗೆ ಅನನ್ಯ: ಸಾಗರದಲ್ಲಿ ಜಯಂತ್ ಗುಣಗಾನ

14/04/2026 9:39 PM

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ತುಮಕೂರಿನ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ

14/04/2026 8:54 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.