ಬೆಂಗಳೂರು : ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲು ವಿಶೇಷ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.
ವಿಧಾನಸೌಧದಲ್ಲಿ ಇಂದು ಸಿಎಂ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳಿಗೆ ಅವರು ಮಾಹಿತಿ ನೀಡಿದರು. ಬೀದರ್, ಕಲಬುರಗಿ, ರಾಯಚೂರು, ಬಳ್ಳಾರಿ, ವಿಜಯನಗರ, ಯಾದಗಿರಿ ಸೇರಿದಂತೆ ಏಳು ಜಿಲ್ಲೆಗಳೂ ಒಳಗೊಂಡಂತೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದರು.