ಹಾಸನ : ಕಳೆದ ಒಂದುವರೆ ತಿಂಗಳಲ್ಲಿ ಹಾಸನ ಜಿಲ್ಲೆಯೊಂದರಲ್ಲಿ ಅತಿ ಹೆಚ್ಚು ಹೃದಯಘಾತದಿಂದ ಸರಣಿ ಸಾವುಗಳು ಸಂಭವಿಸಿದ್ದರ ಹಿನ್ನೆಲೆಯಲ್ಲಿ ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆಏನ್ ರಾಜಣ್ಣ ಅವರು ಆರೋಗ್ಯ ಅಧಿಕಾರಿಗಳೊಂದಿಗೆ ಮಹಾತ್ವದ ಸಭೆ ನಡೆಸಿ, ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿರುವ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿ ಎಂದು ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಶಾಲೆಗಳಿಗೆ ತೆರಳಿ ವಿದ್ಯಾರ್ಥಿಗಳ ಹೃದಯ ತಪಾಸಣೆ ನಡೆಸುತ್ತಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಹಠಾತ್ ಸಾವುಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಇದೀಗ ಆರೋಗ್ಯ ತಪಾಸನೆ ಮಾಡಲಾಗುತ್ತಿದ್ದು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಕಳೆದ ಒಂದು ವಾರದಿಂದ ಶಾಲೆಗಳಿಗೆ ತೆರಳಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಒಂದರಿಂದ 10ನೇ ತರಗತಿ ವಿದ್ಯಾರ್ಥಿಗಳೆ ತಪಾಸಣೆ ಮಾಡುತ್ತಿದ್ದಾರೆ.
ಇತ್ತೀಚಿಗೆ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಅವರು ಮಹತ್ವದ ಸಭೆ ನಡೆಸಿದ್ದರು. ಸಭೆಯಲ್ಲಿ ಅತಿಯಾದ ಮಾಂಸಹಾರ ಸೇವನೆ ಹಾಗೂ ಅಸಮರ್ಪಕ ಆಹಾರ ಸೇವನೆಯಿಂದ ಹೃದಯಾಘಾತ ಸಂಭವಿಸುತ್ತಿವೆ ಎಂದು ತಿಳಿಸಿದ್ದರು. ಅಲ್ಲದೆ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ತೆರಳಿ ವಿದ್ಯಾರ್ಥಿಗಳ ಆರೋಗ್ಯ ತಪಾಸನೆ ನಡೆಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಆರೋಗ್ಯ ಅಧಿಕಾರಿಗಳು ಶಾಲೆಗಳಿಗೆ ತೆರಳಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ.