ಉಡುಪಿ : ಕಾಲೇಜು ವಿದ್ಯಾರ್ಥಿ ನಿಗೆ ಕರೆ ಮಾಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಬಿಜೆಪಿಯ ಯುವ ಮೋರ್ಚಾ ವಿರುದ್ಧ ಆರೋಪ ಕೇಳಿ ಬಂದಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗು NSUI ವಿದ್ಯಾರ್ಥಿ ಸಂಘಟನೆಯೂ ಪ್ರತ್ಯೇಕವಾಗಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಹೌದು ಬಿಜೆಪಿ ಯುವ ಮೋರ್ಚ ಮುಖಂಡ, ಶಿಕ್ಷಕ ಸುಹಾಸ್ ಶೆಟ್ಟಿ ಮುಟ್ಟುಪಾಡಿ ತನ್ನ ಕಾಲೇಜಿನ ವಿದ್ಯಾರ್ಥಿನಿಗೆ ಪೋನ್ ಕರೆ ಮಾಡಿ ಲೈಂಗಿಕ ಕಿರುಕುಳ ನೀಡಿದ್ದಾರೆನ್ನಲಾದ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಮಹಿಳಾ ಕಾಂಗ್ರೆಸ್ ಮತ್ತು ಎನ್.ಎಸ್.ಯು.ಐ.ವಿದ್ಯಾರ್ಥಿ ಸಂಘಟನೆಯು ಪ್ರತ್ಯೇಕವಾಗಿ ಉಪ ಪೋಲೀಸ್ ಅಧೀಕ್ಷಕರಿಗೆ ದೂರು ಸಲ್ಲಿಸಿದೆ.
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಆಡಿಯೋದಲ್ಲಿ ಸುಹಾಸ್ ಶೆಟ್ಟಿಯು ಅಪ್ರಾಪ್ತ ವಿದ್ಯಾರ್ಥಿನಿಗೆ ತನ್ನ ಜೊತೆ ಬರುವಂತೆ ಬಲವಂತವಾಗಿ ಒತ್ತಾಯಿಸುತ್ತಿದ್ದಾರೆ. ಈ ಹಿಂದೆಯು ಕೂಡ ಒಂದು ಕಾಲೇಜಿನಲ್ಲಿ ತನ್ನ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕಾಲೇಜು ಮಂಡಳಿ ಕೆಲಸದಿಂದ ವಜಾ ಮಾಡಿತ್ತು. ವಿದ್ಯಾರ್ಥಿಗಳು ಭಯದಿಂದ ದೂರು ನೀಡಲು ಹಿಂದೇಟು ಹಾಕುವ ಕಾರಣಕ್ಕಾಗಿ ಇವರು ಮತ್ತೆ ಈ ವರ್ತನೆಯನ್ನು ಪುನರಾವರ್ತಿಸುತ್ತಾರೆ. ಅವರನ್ನು ತಕ್ಷಣ ಬಂಧಿಸಿ ಮೊಬೈಲ್ ವಶಕ್ಕೆ ಪಡೆದರೆ, ಇವರ ಕಿರುಕುಳಕ್ಕೆ ಬಲಿಯಾದವರ ಎಲ್ಲಾ ಮಾಹಿತಿ ಸಿಗುವ ಸಾಧ್ಯತೆ ಇದೆ. ಈ ಬಗ್ಗೆ ಪೊಲೀಸ್ ಇಲಾಖೆ ಸುಮೋಟೊ ಕೇಸ್ ದಾಖಲಿಸಿ ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ವಿನಂತಿಸಲಾಗಿದೆ.