ಬೆಂಗಳೂರು: ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದ್ದು, ಈ ಹೊತ್ತಿನಲ್ಲಿ ಬರೋಬ್ಬರಿ 500 ಕೋಟಿ ಮಹಿಳೆಯರು ಶಕ್ತಿ ಯೋಜನೆಯ ಅಡಿಯಲ್ಲಿ ಉಚಿತವಾಗಿ ಪ್ರಯಾಣ ಬೆಳೆಸಿದ್ದಾರೆ.
ಹೌದು,ಸರ್ಕಾರದ ಮಹತ್ವಾಕಾಂಕ್ಷೆ ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆ-ಶಕ್ತಿ ಗ್ಯಾರಂಟಿ ಯೋಜನೆಯಲ್ಲಿ ಪ್ರಯಾಣಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ 500 ಕೋಟಿ ತಲುಪಲಿದೆ.
ಶಾಲಾ ಕಾಲೇಜಿಗೆ ಹೋಗುವ ಹೆಣ್ಣುಮಕ್ಕಳು, ಕುಟುಂಬ ನಿರ್ವಹಣೆಗಾಗಿ ದುಡಿಮೆಗೆ ತೆರಳುವ ಮಹಿಳೆಯರು, ತನ್ನ ಮತ್ತು ತನ್ನವರ ವೈದ್ಯಕೀಯ ಚಿಕಿತ್ಸೆಯ ಉದ್ದೇಶಕ್ಕಾಗಿ ದೂರದ ಊರಿಗೆ ಪ್ರಯಾಣ ಬೆಳೆಸುವ ತಾಯಂದಿರ ಮುಖದಲ್ಲಿ ನೆಮ್ಮದಿಯ ಮಂದಹಾಸ ಮೂಡಿರುವುದು ಈ ಯೋಜನೆಯ ಯಶಸ್ಸಿಗೆ ಹಿಡಿದ ಕೈಗನ್ನಡಿ.