ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಇಂದಿನಿಂದ ಮೂರು ದಿನ ಉಷ್ಣ ಅಲೆ ಎಚ್ಚರಿಕೆ ನೀಡಲಾಗಿದೆ.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಮುಂದಿನ 2-3 ದಿನಗಳ ಕಾಲ ಕಾರವಾರ, ಕಲಬುರಗಿ, ಹೊನ್ನಾವರ, ಪಣಂಬೂರು ಸೇರಿ ಹಲವಡೆ ಬಿಸಿಲಿನಿಂದ ತಾಪಮಾನ ಹೆಚ್ಚಳವಾಗಿದ್ದು, ಉಷ್ಣ ಅಲೆಯ ಎಚ್ಚರಿಕೆ ನೀಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಸಾವಂತವಾಡದಲ್ಲಿ ಫೆಬ್ರವರಿ 24 ರ ಬೆಳಗ್ಗೆ 8 ಗಂಟೆಯಿಂದ ಫೆ.25 ರಂದು ಬೆಳಗ್ಗೆ 8 ಗಂಟೆಯವರೆಗೆ ರಾಜ್ಯದಲ್ಲಿಯೇ ಅತಿಹೆಚ್ಚು ತಾಪಮಾನ 41.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇಂದಿನಿಂದ ಮಾರ್ಚ್ 3 ರವರೆಗೆ ರಾಜ್ಯಾದ್ಯಮತ ಒಣಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.