ಮೈಸೂರು : ಮುಖ್ಯಮಂತ್ರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಕುರಿತು ಯಾವುದೇ ಕಾಂಗ್ರೆಸ್ ನಾಯಕರಿಗೂ ಮಾತನಾಡದೆ ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ ಎಂದು ಕಳೆದ ಕೆಲವು ದಿನಗಳ ಹಿಂದೆ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಡಕ್ ವಾರ್ನಿಂಗ್ ನೀಡಿದ್ದರು. ಆದರೆ ಇದೀಗ ಕಾಂಗ್ರೆಸ್ ಸಂಸದ ಸುನಿಲ್ ಬೋಸ್ ಸಿಎಂ ಸಿದ್ದರಾಮಯ್ಯ 5 ವರ್ಷದವರೆಗೆ ಸಿಎಂ ಆಗಿ ಮುಂದುವರೆಯಲಿದ್ದು ಎರಡುವರೆ ವರ್ಷ ಬಳಿಕ ಕೂಡ ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.
ಮೈಸೂರಿನ ಟಿ ನರಸೀಪುರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯನವರು 5 ವರ್ಷಗಳ ಕಾಲ ಮುಖ್ಯಮಂತ್ರಿ ಆಗಿರುತ್ತಾರೆ. ಮುಖ್ಯಮಂತ್ರಿ ಬದಲಾವಣೆ ಇಲ್ಲ ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಇಲ್ಲ 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯನವರೇ ಮುಂದುವರೆಯುತ್ತಾರೆ ಎಂದರು.
ಪಕ್ಷದ ಶಾಸಕರು, ಹೈಕಮಾಂಡ್ ಬೆಂಬಲ ಇರುವವರೆಗೆ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯುತ್ತಾರೆ. ಎರಡುವರೆ ವರ್ಷದ ಬಳಿಕವು ಸಹ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಮೈಸೂರು ಜಿಲ್ಲೆಯ ಟಿ. ನರಸಿಪುರದಲ್ಲಿ ಸಂಸದ ಸುನಿಲ್ ಬೋಸ್ ಹೇಳಿಕೆ ನೀಡಿದರು.