ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಭಾರಿ ಚರ್ಚೆ ನಡೆಯುತ್ತಿತ್ತು. ಇದೀಗ ಈ ಒಂದು ಸಿಎಂ ಬದ್ಲಾವಣೆ ವಿಚಾರ ತಣ್ಣಗಾಗಿದ್ದರ ಮಧ್ಯ ಮಾಜಿ ಸಂಸದ ಡಿಕೆ ಸುರೇಶ ಅವರು ಸತ್ಯಕ್ಕೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿದ್ದು ಮುಂದೆಯೂ ಅವರೇ ಸಿಎಂ ಆಗಿರುತ್ತಾರೆ ಎಂದು ಹೇಳಿಕೆ ನೀಡಿದರು.
ಬೆಂಗಳೂರಿನಲ್ಲಿ ಈ ವಿಷಯದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿದ್ದಾರೆ. ಮುಂದೆಯೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿರುತ್ತಾರೆ. ಮುಂದಿನ ದಿನಗಳಲ್ಲಿ ಡಿಕೆ ಶಿವಕುಮಾರ್ ಅವರು ಸಿಎಂ ಆಗುವ ಚರ್ಚೆಗೆ ಉತ್ತರಿಸಿದ ಮಾಜಿ ಸಂಸದ ಡಿಕೆ ಸುರೇಶ್ ಅದಕ್ಕೆ ಸಿಎಂ ಸ್ಥಾನದ ಬಗ್ಗೆ ಯಾವುದೇ ಚರ್ಚೆ ಅಗತ್ಯವಿಲ್ಲ. ಸದ್ಯಕ್ಕೆ ಸಿದ್ದರಾಮಯ್ಯನವರು ಸಿಎಂ ಆಗಿದ್ದು ಮುಂದೆಯೂ ಅವರೇ ಆಗಿರುತ್ತಾರೆ ಎಂದು ಬೆಂಗಳೂರಿನಲ್ಲಿ ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ ನೀಡಿದರು.