ಬೆಂಗಳೂರು : ಪಾದಯಾತ್ರೆ ಮುಗಿದ ಬಳಿಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಗ್ಯಾರಂಟಿ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಆರಂಭವಾಗಿದೆ. ಪಾದಯಾತ್ರೆಯಲ್ಲಿ ಮೈಸೂರು ಚಲೋ ಸಮಾವೇಶದಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ರಾಜ್ಯ ಕಾಂಗ್ರೆಸ್ ಸರ್ಕಾರ ಹಗರಣಗಳಲ್ಲಿ ಮುಳುಗಿದೆ. ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ನೀಡುವುದು ನಿಶ್ಚಿತ. ಬಿಜೆಪಿ ಜೆಡಿಎಸ್ ಪಕ್ಷಗಳ ಜಂಟಿ ಪಾದಯಾತ್ರೆ ಯಶಸ್ವಿಯಾಗುವುದು ನಿಶ್ಚಿತ. ಮುಂದಿನ ದಿನಗಳಲ್ಲಿ ಎನ್‌ಡಿಎ ಮೈತ್ರಿಕೂಟ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ೆಂದು ಹೇಳಿದ್ದಾರೆ.
ಇನ್ನು ಮೈಸೂರಿನ ಮುಡಾದಲ್ಲಿ 5 ಸಾವಿರ ಕೋಟಿ ರೂ. ಹಗರಣ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯನವರು ನೇಮಕ ಮಾಡಿರುವ ಮುಡಾ ಅಧ್ಯಕ್ಷರು ಹೇಳಿದ್ದಾರೆ. ಶೋಷಿತರಿಗೆ ಅನ್ಯಾಯ ಮಾಡಿರುವ ಕಾಂಗ್ರೆಸ್, ST ಸಮುದಾಯದ ಬಹುಕೋಟಿ ಹಣ ಲೂಟಿ ಹೊಡೆದಿದೆ. ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರು ಕಾಂಗ್ರೆಸ್ ಪಕ್ಷ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಎಂದು ಆರೋಪಿಸಿದ್ದಾರೆ.