ಹಾವೇರಿ : ಪ್ರಧಾನಿ ಮೋದಿ ಅವರು ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ 700 ಕೋಟಿ ರೂ. ಆರೋಪ ಮಾಡಿದ್ದಾರೆ. ಈ ಆರೋಪವನ್ನು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿಯಾಗುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆರೋಪ ಸಾಬೀತುಪಡಿಸಲು ಸಾಧ್ಯವಾಗದಿದ್ದರೆ ನೀವು ರಾಜಕೀಯ ನಿವೃತ್ತಿಯಾಗಬೇಕು ಎಂದು ಮೋದಿಗೆ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಹೌದು ಹಾವೇರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ವೇಳೆ ಪ್ರಧಾನಿ ಮೋದಿ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದ ಅಬಕಾರಿ ಇಲಾಖೆಯಿಂದ 700 ಕೋಟಿ ರೂ. ಲೂಟಿ ಮಾಡಿದೆ ಎಂಬ ಆರೋಪವನ್ನು ಪ್ರಧಾನಿ ನರೇಂದ್ರ ಮೋದಿ ಸಾಬೀತು ಮಾಡಿದರೆ ನಾನು ರಾಜಕೀಯ ನಿವೃತ್ತಿಯಾಗುವೆ.ಒಂದು ವೇಳೆ ಆರೋಪ ಸಾಬೀತು ಪಡಿಸಲು ಆಗದಿದ್ದರೆ ನೀವು ರಾಜಕೀಯ ನಿವೃತ್ತಿಯಾಗಬೇಕು ಎಂದು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ನೇರ ಸವಾಲು ಹಾಕಿದ್ದಾರೆ.
ಕೋವಿಡ್ ವೇಳೆ ಪ್ರತಿ ಪಿಪಿಇ ಕಿಟಿಗೆ 2,147 ನೀಡಿ ಖರೀದಿ ಮಾಡಿದ್ದಾರೆ. ಯಡಿಯೂರಪ್ಪ ಶ್ರೀರಾಮಲು ಸೇರಿ ಮೂರು ಲಕ್ಷ ಪಿಪಿಇ ಕಿಟ್ ಖರೀದಿ ಮಾಡಿದ್ದಾರೆ. ಮೋದಿ ಚೀನಾದಿಂದ ಯಾವುದೇ ವಸ್ತು ಖರೀದಿಸಿಲ್ಲವೆಂದು ಹೇಳುತ್ತಾರೆ. ಬಿಪಿ ಇಕಿಟ್ ಖರೀದಿ ಹೆಸರಿನಲ್ಲಿ 2,000 ಕೋಟಿ ಲೂಟಿ ಮಾಡಿದ್ದಾರೆ. ಕೊರೋನಾ ವೇಳೆ ಆಕ್ಸಿಜನ್ ಪೂರೈಸದೆ 50,000 ಜನ ಮೃತಪಟ್ಟಿದ್ದಾರೆ. ಚಾಮರಾಜನಗರದಲ್ಲಿ ಆಕ್ಸಿಜನ್ ಇಲ್ಲದೆ 36 ಜನ ಸತ್ತು ಹೋಗಿದ್ದಾರೆ.
ಆದರೆ ಸುಧಾಕರ್ ಇಬ್ಬರು ಅಥವಾ ಮೂವರು ಸತ್ತಿರಬಹುದು ಅಂತ ಹೇಳಿದ್ದರು. ಇಂಥವರು ಬೇಕಾ ಮತ್ತೆ ಬಿಜೆಪಿಯವರು ಅಧಿಕಾರಕ್ಕೆ ಬರಬೇಕಾ? ಗುತ್ತಿಗೆದಾರರಿಂದ 40 ಪರ್ಸೆಂಟ್ ಕಮಿಷನ್ ಪಡಿತಿದ್ದಾರೆ ಎಂದು ಕೆಂಪಣ್ಣ ಹೇಳಿದ್ದರು ನಾಗಮೋಹನ್ ದಾಸ್ ವರದಿ ಬರಲಿ ಕ್ರಿಮಿನಲ್ ಕೇಸ್ ಹಾಕಿಸುತ್ತೇವೆ ಬೊಮ್ಮಯಿ ಇರಲಿ ಮತ್ಯಾರೆ ಇರಲಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುತ್ತೇವೆ ಎಂದು ಹೇಳಿದ್ದಾರೆ.